September 16, 2024

Adopt Nehru’s ideal values: ನೆಹರುರವರ ಆದರ್ಶ ಮೌಲ್ಯ ಅಳವಡಿಸಿಕೊಳ್ಳಿ

0

 

ಚಿಕ್ಕಮಗಳೂರು:  ಆಧುನಿಕ ಶಿಲ್ಪಿ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಹಾರಲಾಲ್ ನೆಹರುರವರ ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಕೊಳ್ಳುವಂತೆ ಕೆಪಿಸಿಸಿ ಸದಸ್ಯ ಎ.ಎನ್.ಮಹೇಶ್ ಸಲಹೆ ನೀಡಿದರು.

ಅವರು ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಸೇವಾದಳ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಹಾರಲಾಲ್ ನೆಹರು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನೆಹರುರವರು ನವಭಾರತದ ಸಂಕಲ್ಪವನ್ನು ಹೊತ್ತು ಪ್ರಧಾನಮಂತ್ರಿಯಾಗಿ ಭಾರತವನ್ನು ಸದೃಢವಾಗಿ ಮುನ್ನಡೆಸಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ, ೯ ವರ್ಷಗಳ ಕಾಲ ಜೈಲು ವಾಸವನ್ನು ಅನುಭವಿಸಿ, ಭಾರತದ ವಿದೇಶಾಂಗ ನೀತಿಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ಹೇಳಿದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಿದ್ಧಾಂತವೇ ಸಂವಿಧಾನವಾಗಿದೆ. ಜಾತ್ಯಾತೀತ ನೆಲೆಗಟ್ಟಿನಲ್ಲಿ ಸಂವಿಧಾನಕ್ಕೆ ಗೌರವವನ್ನು ಕೊಡಲಾಗುತ್ತಿದೆ. ದೇಶವು ಪ್ರಗತಿ ಕಾಣಲು ನೆಹರು ಕಾರಣವಾಗಿದ್ದಾರೆ. ದೇಶ ಮತ್ತು ಹೊರದೇಶಗಳ ಸಂಬಂಧಗಳನ್ನು ಸುಧಾರಿಸುವಲ್ಲಿ ಯಶಸ್ಸು ಕಂಡ ಧೀಮಂತ ನಾಯಕ ನೆಹರು ಎಂದು ಬಣ್ಣಿಸಿದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ನೆಹರುರವರಿಗೆ ಮಕ್ಕಳೆಂದರೆ ತುಂಬಾ ಪ್ರೀತಿ. ಅಧಿಕಾರವಧಿಯಲ್ಲೂ ಮಕ್ಕಳ ಜೊತೆ ಬೆರೆತು ಅವರೊಂದಿಗೆ ಅನ್ಯೋನತೆಯಿಂದ ಕಾಲ ಕಳೆಯುತ್ತಿದ್ದರು. ಅವರ ಆದರ್ಶ ಮೌಲ್ಯಗಳನ್ನು ನಾವುಗಳು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ, ನೆಹರುರವರು ಹಾಕಿಕೊಟ್ಟಿರುವ ಹಾದಿಯಲ್ಲಿ ಯುವ ಜನಾಂಗ ಸಾಗಬೇಕು. ಅವರ ಅಧಿಕಾರವಧಿಯಲ್ಲಿ ರೈತರಿಗೆ, ಯುವಜನಾಂಗಕ್ಕೆ ಉತ್ತಮವಾದ ಕಾರ್ಯಗಳನ್ನು ರೂಪಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಬಿ.ಹೆಚ್.ಹರೀಶ್ ಮಾತನಾಡಿ, ದೇಶದ ಪ್ರಧಾನಮಂತ್ರಿಯಾಗಿ ಆಡಳಿತ ನಡೆಸಿದ ನೆಹರುರವರು ಉತ್ತಮವಾದ ಕೊಡುಗೆಗಳನ್ನು ನೀಡಿದ್ದಾರೆ. ಅವರ ಜನ್ಮದಿನಾಚರಣೆಯನ್ನು ಪ್ರತಿದಿನ ನೆನೆಸುವಂತಾಗಬೇಕು ಎಂದು ತಿಳಿಸಿದರು.

ನಗರಸಭಾ ಮಾಜಿ ಅಧ್ಯಕ್ಷ ಮಹಮದ್ ಅಕ್ಬರ್, ನಗರ ಕಾಂಗ್ರೆಸ್ ಅಧ್ಯಕ್ಷ ಪಿ.ತನೋಜ್ ಕುಮಾರ್ ನಾಯ್ಡು ಮಾತನಾಡಿದರು. ಜವಹಾರಲಾಲ್ ನೆಹರುರವರ ಭಾವಚಿತ್ರಕ್ಕೆ ಕಾಂಗ್ರೆಸ್ ಮುಖಂಡರು ಸಾಮೂಹಿಕವಾಗಿ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಪರಮೇಶ್ ರಾಜ್ ಅರಸ್, ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಆರ್.ಎಂ.ಬಸವರಾಜ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಜಯರಾಜ್ ಅರಸ್, ಜಿಲ್ಲಾ ಕಾರ್ಯದರ್ಶಿ ಬಿ.ಎಂ.ಸಂದೇಶ್, ಮುಖಂಡರಾದ ರಾಜಶೇಖರ್, ನಾಗೇಶ್, ಹೆಚ್.ಎಸ್.ಜಗದೀಶ್, ಗಂಗಾಧರ್, ಧರ್ಮಯ್ಯ, ತಾಹಿರ್, ಜಗದೀಶ್, ಭರತ್ ಚೆಟ್ಟಿಯಾರ್, ಬೀರೆಗೌಡ ಸೇರಿದಂತೆ ಮತ್ತಿತರರು ಇದ್ದರು.

Adopt Nehru’s ideal values

 

About Author

Leave a Reply

Your email address will not be published. Required fields are marked *