September 19, 2024

People-friendly governance in villages: ಗ್ರಾಮಗಳಲ್ಲಿ ಜನ ಸ್ನೇಹಿ ಆಡಳಿತ ನೀಡಲಾಗುವುದು – ಜಿ.ಪ್ರಭು

0

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯು ಜನಸ್ನೇಹಿ ಆಡಳಿತ ನೀಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ.ಪ್ರಭು ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತೆರಿಗೆ ಪರಿಷ್ಕರಣ ಮತ್ತು ಸಂಗ್ರಹದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದರ ಜತೆಗೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಜನಸ್ನೇಹಿ ಆಡಳಿತವನ್ನು ನೀಡಬೇಕೆಂದು ತಿಳಿಸಿದರು.

ಜಿಲ್ಲೆಯ ೨೨೬ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಸಮಗ್ರ ಆಸ್ತಿಗಳ ಮಾಹಿತಿಯನ್ನು ಪಡೆದು ೯ ಅಂಡ್ ೧೧ ನೀಡಬೇಕು, ಹೊಸ ತೆರಿಗೆ ಬಗ್ಗೆ ಮಾಹಿತಿ ನೀಡಿ ಗ್ರಾಮಗಳಲ್ಲಿ ಅನುಷ್ಟಾನಗೊಳಿಸಬೇಕು, ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜತೆಗೆ ಅದರ ನಿರ್ವಹಣೆಯನ್ನು ಮಾಡಬೇಕು ಎಂದರು.

ಎನ್.ಆರ್.ಐ.ಜಿ ಯೋಜನೆಯಲ್ಲಿ ಶಾಲೆ, ಅಂಗನವಾಡಿ, ಆಸ್ಪತ್ರೆಗಳ ಅಭಿವೃದ್ಧಿ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ನಿರ್ವಹಿಸಬೇಕು, ಗ್ರಾಮಗಳಲ್ಲಿ ನಡೆಯುವ ಗ್ರಾಮ ಸಭೆಗಳಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಒಂದು ವಾರ ಮುಂಚಿತವಾಗಿ ತಿಳಿಸಿ ಸಭೆಗೆ ಆಹ್ವಾನಿಸಬೇಕು, ಗ್ರಾಮ ಸಭೆಗಳಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ, ಸರ್ಕಾರದ ಸೌಲಭ್ಯಗಳ ಬಗ್ಗೆ ಜನ ಪ್ರತಿನಿಧಿಗಳು ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಬೆಂಗಳೂರಿನ ಪಂಚಾಯತ್ ರಾಜ್ ಉಪನಿರ್ದೇಶಕ ಜಗಧೀಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿಶೋರ್‌ಕುಮಾರ್, ನಾಗರಾಜ್, ಮುಖ್ಯ ಲೆಕ್ಕಾಧಿಕಾರಿ ಶಿವಕುಮಾರ್, ಮುಖ್ಯ ಯೋಜನಾಧಿಕಾರಿ ಕರೀಗೌಡ, ಯೋಜನಾ ನಿರ್ದೇಶಕ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

People-friendly governance in villages

About Author

Leave a Reply

Your email address will not be published. Required fields are marked *

You may have missed