September 19, 2024

Constitution of 7th Pay Commission: ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ 7ನೇ ವೇತನ ಆಯೋಗ ರಚನೆ

0

ಚಿಕ್ಕಮಗಳೂರು : ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ ೭ನೇ ವೇತನ ಆಯೋಗವನ್ನು ರಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದೆ.

ಆಯೋಗದ ರಚನೆಯಿಂದಾಗಿ ರಾಜ್ಯ ಸರ್ಕಾರಿ ನೌಕರರು ಪರಿಷ್ಕೃತ ವೇತನ ಶ್ರೇಣಿ ಹಾಗೂ ಇನ್ನಿತರ ಸವಲತ್ತು-ಸೌಲಭ್ಯಗಳನ್ನು ಮುಂದಿನ ಮಾರ್ಚ್ ತಿಂಗಳಿನೊಳಗೆ ಪಡೆದುಕೊಳ್ಳಲು ಸಾಧ್ಯವಾಗುವ ನಿರೀಕ್ಷೆಯಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸತತ ಪ್ರಯತ್ನದಿಂದಾಗಿ ಅಯೋಗದ ರಚನೆ ಸಾಧ್ಯವಾಗಿದೆ ಎಂದಿರುವ ಅವರು ರಾಜ್ಯದ ಆರು ಲಕ್ಷ ಸರ್ಕಾರಿ ನೌಕರರು, ಅಧಿಕಾರಿಗಳು, ೩.೪೦ ಲಕ್ಷ ನಿಗಮ ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸರ್ಕಾರಿ ಸ್ವಾಯತ್ವ ಸಂಸ್ಥೆಗಳ ಸಿಬ್ಬಂಧಿಗಳು ಹಾಗೂ ೪ ಲಕ್ಷ ನಿವೃತ್ತ ನೌಕರರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸ್ಪಂದಿಸಿ ವೇತನ ಆಯೋಗವನ್ನು ರಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂಪುಟದ ಸಚಿವರಿಗೆ ಸಂಘ ಕೃತಜ್ಞತೆ ಸಲ್ಲಿಸುತ್ತದೆ ಎಂದು ತಿಳಿಸಿದ್ದಾರೆ.

Constitution of 7th Pay Commission

About Author

Leave a Reply

Your email address will not be published. Required fields are marked *

You may have missed