September 19, 2024

BJP is trying to hide the voice of the opposition: ಬಿಜೆಪಿಯಿಂದ ವಿರೋಧ ಪಕ್ಷದ ಧ್ವನಿಯೇ ಅಡಗಿಸುವ ಯತ್ನ

0

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಪ್ರತಿ ಚುನಾವಣೆ ಹಾಗೂ ಅಧಿವೇಶನಗಳ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷವು ರಾಜಕೀಯ ದುರುದ್ದೇಶದಿಂದ ಐಟಿ, ಇಡಿ, ಸಿಬಿಐನಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಮುಖಂಡರ ಮನೆ, ಉದ್ದಿಮೆಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್ ಆರೋಪಿಸಿದರು.

ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ಧ್ವನಿಯೇ ಇರಬಾರದು ಎನ್ನುವ ಧೋರಣೆ ಬಿಜೆಪಿಯದ್ದಾಗಿದೆ. ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ ದಾಳಿ ನಡೆಸಿ ಕಿರುಕುಳ ನೀಡಲಾಗಿತ್ತು. ಇದು ರಾಜಕೀಯ ಪ್ರೇರಿತವಾಗಿ ಎಂದು ದೂರಿದರು.

ಬೆಳಗಾವಿಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದ್ದು, ಹತ್ತಾರು ವಿಚಾರಗಳ ಬಗ್ಗೆ, ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಚರ್ಚೆ ಆಗಬೇಕಿದೆ. ಇದೇ ಸಂದರ್ಭವನ್ನು ಬಳಸಿಕೊಂಡು ಡಿ.ಕೆ.ಶಿವಕುಮಾರ್ ಅವರಿಗೆ ಸಂಬಂಧಿಸಿದ ವಿದ್ಯಾಸಂಸ್ಥೆಗಳ ಮೇಲೆ ದಾಳಿ ನೆಡಲಾಗಿದೆ. ಬಿಜೆಪಿಗೆ ಚುನಾವಣೆಯನ್ನು ನೇರವಾಗಿ ಎದುರಿಸುವ ಧೈರ್ಯ, ನೈತಿಕತೆ ಇಲ್ಲದಂತಾಗಿರುವ ಹಿನ್ನೆಲೆಯಲ್ಲಿ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಹೊರಟಿದೆ ಎಂದು ದೂರಿದರು.

ಇಡಿ, ಐಡಿ, ಸಿಬಿಐ ನಂತಹ ಸ್ವಾಯತ್ತ ಸಂಸ್ಥೆಗಳು ಸಹ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿರುವುದನ್ನು ಖಂಡಿಸುತ್ತೇವೆ. ಈ ಬಗ್ಗೆ ಕಾನೂನು ಚೌಕಟ್ಟಿನಲ್ಲಿ ಎಲ್ಲರೀತಿಯ ಸಹಕಾರವನ್ನು ನಮ್ಮ ನಾಯಕರು ನೀಡುತ್ತಿದ್ದರೂ ರಾಜಕೀಯ ಪ್ರೇರಿತವಾಗಿ ತೊಂದರೆ ಕೊಡುವುದನ್ನು ಮುಂದುವರಿಸಿದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸ್ಥಳೀಯ ಶಾಸಕ ಸಿ.ಟಿ.ರವಿ ಅವರ ಆದಾಯ ವೃದ್ಧಿ ಹೇಗಾಯಿತು ಎಂದು ಸಹ ಜನತೆ ಪ್ರಶ್ನಿಸುತ್ತಿದ್ದಾರೆ. ಶಾಸಕರಿಗೆ ಅಭಿವೃದ್ಧಿ, ಜನ ಸಾಮಾನ್ಯರ ಬದುಕಿನ ಪ್ರಶ್ನೆ ಬಗ್ಗೆ ಕಾಳಜಿ ಇಲ್ಲವಾಗಿದೆ. ಕೇವಲ ಭಾವನೆಗಳನ್ನು ಕೆರಳಿಸುವ ವಿಚಾರಗಳಿಗೆ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

ಪ್ರವಾಹ ಬಂದಾಗ ಜನರ ನೋವಿಗೆ ಬಿಜೆಪಿ ಸರ್ಕಾರ ಸ್ಪಂದಿಸಲಿಲ್ಲ. ಕಾಫಿ, ಅಡಿಕೆ ಬೆಳೆಗಾರರ ಸಂಕಷ್ಠ ಕೇಳುತ್ತಿಲ್ಲ. ತರಕಾರಿ ಬಳೆಗಾರರು ಸೇರಿ ಎಲ್ಲಾ ಕೃಷಿಕರು ತೊಂದರೆಯಲ್ಲಿದ್ದಾರೆ. ಅವರ ನೆರವಿಗೆ ಸರ್ಕಾರಗಳು ಬರುತ್ತಿಲ್ಲ. ಇದೆಲ್ಲವನ್ನೂ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಸುರೇಖಾ ಸಂಪತ್‌ರಾಜ್, ಹಿರೇಮಗಳೂರು ಪುಟ್ಟಸ್ವಾಮಿ, ತನೋಜ್ ಕುಮಾರ್, ಭರತ್, ಜಯರಾಜ್ ರಾಜ್ ಅರಸ್ ಇದ್ದರು.

BJP is trying to hide the voice of the opposition

About Author

Leave a Reply

Your email address will not be published. Required fields are marked *

You may have missed