September 19, 2024

Yoga is the root of ancient Indian culture: ಭಾರತೀಯ ಪುರಾತನ ಸಂಸ್ಕೃತಿಯ ಮೂಲಬೇರು ಯೋಗ

0
ಬ್ರಹ್ಮಕುಮಾರೀಸ್ ಆವರಣದಲ್ಲಿ ಬುಧವಾರ ನಡೆದ ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ತರಬೇತಿ ಕಾರ್ಯಕ್ರಮ

ಬ್ರಹ್ಮಕುಮಾರೀಸ್ ಆವರಣದಲ್ಲಿ ಬುಧವಾರ ನಡೆದ ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ತರಬೇತಿ ಕಾರ್ಯಕ್ರಮ

ಚಿಕ್ಕಮಗಳೂರು:  ಭಾರತೀಯ ಪುರಾತನ ಸಂಸ್ಕೃತಿಯ ಮೂಲಬೇರು ಹಾಗೂ ಜೀವನದ ಒಂದು ಅವಿಭಾಜ್ಯ ಅಂಗ ಯೋಗ ಎಂದು ಬ್ರಹ್ಮಕುಮಾರೀಸ್ ಜಿಲ್ಲಾ ಸಂಚಾಲಕಿ ಭಾಗ್ಯಕ್ಕ ಹೇಳಿದರು.

ಬ್ರಹ್ಮಕುಮಾರೀಸ್, ಆಯುಷ್ ಇಲಾಖೆ, ಪ್ರಬೋದಿನಿ ಯೋಗ ಸಂಸ್ಥೆ, ಭಾರತ್ ಸ್ವಾಭಿಮಾನ್ ಟ್ರಸ್ಟ್, ಶ್ರೀ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ನಗರದ ಬಸವನಹಳ್ಳಿಯಲ್ಲಿ ಬ್ರಹ್ಮಕುಮಾರೀಸ್ ಆವರಣದಲ್ಲಿ ಬುಧವಾರ ನಡೆದ ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೊ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯವು ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ ಎಂದರು.

ಆದಿ ಕಾಲದಲ್ಲಿ ಸೂರ್ಯಾಭಿಮುಖವಾಗಿ ದೃಷ್ಟಿ ನೆಟ್ಟು ಧೀವ್ಯ ಶಕ್ತಿ ಉದ್ದೀಪನಗೊಳಿಸುತ್ತದೆ ಎಂದು ಈ ದಿನವನ್ನು ನಂಬಲಾಗಿದೆ. ಹಾಗಾಗಿ ಈ ಪರಿವರ್ತನೆಯು ಯೋಗ ಅಭ್ಯಾಸಿಗರಿಗೆ ಬೆಂಬಲಿಸಲಾಗುತ್ತದೆ ಎಂಬ ನಂಭಿಕೆಯಿದೆ ಎಂದು ತಿಳಿಸಿದರು.

ಆಯುಷ್ ಅಧಿಕಾರಿ ಡಾ|| ಗೀತಾ ಮಾತನಾಡಿ ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೋರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚೀನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ ಯಾಗಿದೆ ಎಂದರು.

ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಇದು ನಾವು ಮತ್ತು ಪ್ರಕೃತಿ ಮಾತೆಯ ಜೊತೆ ಸಂರ್ಪಕವನ್ನು ಕಲ್ಪಿಸುತ್ತದೆ. ಇದು ನಮ್ಮನ್ನು ನಮ್ಮ ನೈಜತೆಯ ಹತ್ತಿರಕ್ಕೆ ಕೊಂಡೊಯ್ಯುತ್ತದೆ ಎಂದರು.

ಈ ಸಂದರ್ಭದಲ್ಲಿ ಪ್ರಬೋದಿನಿ ಯೋಗ ಸಂಸ್ಥೆ ಅಧ್ಯಕ್ಷ ಸುರೇಂದ್ರ, ಟ್ರಸ್ಟಿ ಎಂ.ಆರ್.ನಾಗರಾಜ್, ಶಿವಪ್ಪ, ಭಾರತ್ ಸ್ವಾಭಿಮಾನ್ ಟ್ರಸ್ಟ್ ಅಧ್ಯಕ್ಷೆ ಪವಿತ್ರ, ಕಾರ್ಯದರ್ಶಿ ಸುಮ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಜಿಲ್ಲಾ ಸಂಚಾಲಕಿ ಶಾರದಾ, ಸದಸ್ಯೆ ಪುಷ್ಪ ಮತ್ತಿತರರು ಹಾಜರಿದ್ದರು.

Yoga is the root of ancient Indian culture

About Author

Leave a Reply

Your email address will not be published. Required fields are marked *

You may have missed