September 19, 2024

International Yoga Day celebration in the city on June 21: ಜೂ.21ಕ್ಕೆ ನಗರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0
ಅಂತರಾಷ್ಟ್ರೀಯ ಯೋಗ ದಿನಾಚರಣೆ

ಚಿಕ್ಕಮಗಳೂರು: ಯೋಗ ನಡಿಗೆ ಆರೋಗ್ಯದ ಕಡೆಗೆ ಎಂಬ ಧ್ಯೇಯವನ್ನು ಎಲ್ಲರು ಆಳವಡಿಸಿಕೊಂಡು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಹೆಚ್.ಡಿ ರಾಜೇಶ್ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿರುವ ಉಪವಿಭಾಗಾಧಿಕಾರಿಗಳ ಕಛೇರಿ ಕೊಠಡಿಯಲ್ಲಿ ಇಂದು ನಡೆದ ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕರೆಯಲಾಗಿದ್ದ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಇದೇ ಜೂನ್ ೨೧ ರಂದು ನಗರದ ಜಿಲ್ಲಾ ಒಕ್ಕಲಿಗರ ಸಂಘದ ಆವರಣದಲ್ಲಿ ನಡೆಯುವ ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮಾಡಲು ಸರ್ಕಾರದ ಸುತ್ತೋಲೆಯಂತೆ ಜಿಲ್ಲಾ ಆಡಳಿತ, ಜಿಲ್ಲಾ ಆಯುಷ್ ಇಲಾಖೆ, ಯೋಗ ತರಬೇತಿ ಸಂಸ್ಥೆಗಳು ನಗರದ ಯೋಗ ಬಂಧುಗಳೆಲ್ಲರು ಸೇರಿ ಯಶಸ್ವಿಯಾಗಿ ನಡೆಸಲು ಕ್ರಮಕೈಗೊಳ್ಳಲಾಗಿದೆ ಎಂದ ಅವರು ಇದೇ ಜೂನ್ ೧೭ ರಂದು ನಗರದ ತಾಲ್ಲೂಕು ಕಛೇರಿಯಿಂದ ಜಿಲ್ಲಾ ಆಟದ ಮೈದಾನದವರಗೆ ಯೋಗ ನಡಿಗೆ ಜಾಥ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಯೋಗ ಬಂಧುಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಆಯುಷ್ ಇಲಾಖೆಯ ಡಾ. ಗೀತಾ ಅವರು ಮಾತನಾಡಿ ಜೂನ್ ೨೧ ರಂದು ನಡೆಯುವ ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲು ನಗರದಲ್ಲಿರುವ ಎಲ್ಲಾ ಯೋಗ ಬಂಧುಗಳ ಸೇರಿದಂತೆ ಸಾರ್ವಜನಿಕರು, ಅಧಿಕಾರಿಗಳು ಭಾಗವಹಿಸುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಯೋಗ ತರಬೇತುದಾರರಾದ ದಿವಾಕರ್ ಭಟ್, ಸುರೇಂದ್ರ, ಶಿವಪ್ಪ, ಬ್ರಹ್ಮ ಕುಮಾರಿ ಸಂಸ್ಥೆಯ ಭಾಗ್ಯಕ್ಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಯೋಗ ಸಂಸ್ಥೆಯ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

International Yoga Day celebration in the city on June 21

About Author

Leave a Reply

Your email address will not be published. Required fields are marked *

You may have missed