September 16, 2024

ಇಂದಿರಾ ಕ್ಯಾಟೀನ್‌ಗೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ದಿಡೀರ್ ಬೇಟಿ

0
ಇಂದಿರಾ ಕ್ಯಾಟೀನ್‌ಗೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ದಿಡೀರ್ ಬೇಟಿ

ಇಂದಿರಾ ಕ್ಯಾಟೀನ್‌ಗೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ದಿಡೀರ್ ಬೇಟಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಇಂದಿರಾ ಕ್ಯಾಟೀನ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.

ನಗರದಲ್ಲಿರುವ ಇಂದಿರಾ ಕ್ಯಾಟೀನ್‌ಗೆ ಸೋಮವಾರ ದಿಢೀರನೆ ಭೇಟಿ ನೀಡಿ ಸ್ವಚ್ಚತೆ ಕುರಿತು ಪರಿಶೀಲಿಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಡವರಿಗೆ ಕಡಿಮೆ ದರದಲ್ಲಿ ತಿಂಡಿ ಮತ್ತು ಊಟಗಳು ದೊರೆಯಬೇಕೆಂಬುದು ಸರ್ಕಾರದ ಆಶಯವೆಂದು ಹೇಳಿದರು.

ಇಂದಿರಾ ಕ್ಯಾಟೀನ್‌ನಲ್ಲಿ ಸ್ವಚ್ಚತೆ, ಶುಚಿ, ರುಚಿಯ ಬಗ್ಗೆ ಪರಿಶೀಲಿಸಲು ಸರ್ಕಾರ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಕ್ಯಾಂಟೀನ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಮೊನ್ನೆ ಕಡೂರು ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿನೀಡಿ ಪರಿಶೀಲಿಸಿದ್ದು, ಸ್ವಚ್ಚತೆಯಲ್ಲಿ ಕೊರತೆ ಉಂಟಾಗಿತ್ತು. ಸಣ್ಣ,ಪುಟ್ಟ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಲಾಗಿದೆಎಂದರು.

ಇಂದು ನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿಕೊಟ್ಟಿರುವೆ ಗ್ರಾಹಕರನ್ನು ವಿಚಾರಿಸಿದ್ದು, ತಿಂಡಿ, ಊಟ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.ಈ ಕ್ಯಾಂಟೀನ್ ಹಿಂಭಾಗದಲ್ಲಿರುವ ಶೌಚಾಲಯವನ್ನು ಸಾರ್ವಜನಿಕರ ಉಪಯೋಗಕ್ಕೆ ತೆರದಿಡದಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಪರಿಶೀಲಿಸಿದಾಗ ಬೀಗ ಹಾಕಿರುವುದು ಕಂಡು ಬಂದಿದೆ. ವಿಚಾರಿಸಿದಾಗ ಸಾರ್ವಜನಿಕರು ಶೌಚಾಲಯ ಬಳಸುತ್ತಾರೆಂದು ಹೇಳಿದ್ದಾರೆ. ಊಟದ ಟೋಕನ್ ಪಡೆದವರು ಮಾತ್ರ ಶೌಚಾಲಯ ಬಳಸುವಂತೆ ತಿಳಿಸಲಾಗಿದೆಎಂದುಹೇಳಿದರು.

ಸರ್ಕಾರ ಸೂಚನೆ ನೀಡಿದರೆ ಇಂದಿರಾ ಕ್ಯಾಂಟೀನ್ ಮೇಲ್ದರ್ಜೆಗೇರಿಸಲಾಗುವುದು. ಅಗತ್ಯತೆ ಕಂಡು ಬಂದರೆ ನಗರದಲ್ಲಿ ಮತ್ತೊಂದು ಇಂದಿರಾ ಕ್ಯಾಂಟೀನ್ ತೆರೆಯುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಆಗಾಗ್ಗೆ ಇಂದಿರಾ ಕ್ಯಾಂಟೀನ್‌ಗೆ ಭೇಟಿನೀಡಿ ಪರಿಶೀಲಿಸುವಂತೆ ತಹಸೀಲ್ದಾರುಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಗುಣಮಟ್ಟದ ಆಹಾರ ನೀಡುವಂತೆ ಇಂದಿರಾ ಕ್ಯಾಂಟೀನ್‌ಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಇದನ್ನು ಪಾಲಿಸದಿದ್ದರೆ ಅಂತಹ ಕ್ಯಾಟೀನ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಎಚ್ಚರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಉಮೇಶ್, ಆರೋಗ್ಯ ನಿರೀಕ್ಷಕ ರಂಗಪ್ಪ,ಯೋಜನಾ ನಿರ್ದೇಶಕ ವೀರೇಶ್, ಇಂದಿರಾ ಕ್ಯಾಂಟೀನ್ ವ್ಯವಸ್ಥಾಪಕ ಕೃಷ್ಣೇಗೌಡ ಮತ್ತಿತರರು ಇದ್ದರು.

District Collector KN Ramesh Didir is the daughter of Indira Kateen

About Author

Leave a Reply

Your email address will not be published. Required fields are marked *