September 19, 2024

ರಾವಣ್ ಮೇಲೆ ಗುಂಡಿನ ದಾಳಿ ಖಂಡಿಸಿ ಭೀಮ್ ಆರ್ಮಿ ಪ್ರತಿಭಟನೆ

0
ರಾವಣ್ ಮೇಲೆ ಗುಂಡಿನ ದಾಳಿ ಖಂಡಿಸಿ ಭೀಮ್ ಆರ್ಮಿ ಪ್ರತಿಭಟನೆ

ರಾವಣ್ ಮೇಲೆ ಗುಂಡಿನ ದಾಳಿ ಖಂಡಿಸಿ ಭೀಮ್ ಆರ್ಮಿ ಪ್ರತಿಭಟನೆ

ಚಿಕ್ಕಮಗಳೂರು: ಭೀಮ್ ಆರ್ಮಿ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ್ ಆಜಾದ್ ರಾವಣ್‌ರವರ ಮೇಲೆ ಗುಂಡಿನ ದಾಳಿಯನ್ನು ಖಂಡಿಸಿ ಜಿಲ್ಲಾ ಭೀಮ್ ಆರ್ಮಿ ಮುಖಂಡರುಗಳು ನಗರದ ಆಜಾದ್‌ಪಾಕ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಭೀಮ್ ಆರ್ಮಿ ಗೌರವಾಧ್ಯಕ್ಷ ಹೊನ್ನೇಶ್ ಮಾತನಾಡಿ ಉತ್ತರ ಪ್ರದೇಶ ಸರ್ಕಾರವು ರಾವಣ್ ಅವರ ಮೇಲೆ ದಾಳಿ ನಡೆಸಿರುವ ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ ಆರೋಪಿಗಳಿಗೆ ಗಲ್ಲಿಗೇ

ರಿಸುವ ಮೂಲಕ ಜನಪರ ಹಾಗೂ ದಲಿತರ ನಾಯಕರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ದೇಶಕ್ಕೆ ಸಂವಿಧಾನ ನೀಡಿದಂತಹ ಡಾ|| ಬಿ.ಆರ್.ಅಂಬೇಡ್ಕರ್ ಅವರ ಸಮುದಾಯಕ್ಕೆ ರಕ್ಷಣೆ ಇಲ್ಲದಂತಾ ಗಿದೆ. ಶಾಂತಿ, ಸೌಹಾರ್ದತೆ ಹಾಗೂ ಜಾತ್ಯಾತೀತ ದೇಶವಾಗಿರುವ ಭಾರತವನ್ನು ಒಡೆದಾಳುವ ನೀತಿಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಪ್ರಸ್ತುತ ಚಂದ್ರಶೇಖರ್ ಆಜಾದ್ ಅವರು ಗುಂಡಿನ ದಾಳಿಯಿಂದ ಸದ್ಯಕ್ಕೆ ಪಾರಾಗಿದ್ದಾರೆ. ಇಂತಹ ಜನಪರ ಕಾಳಜಿ ಹೊಂದಿರುವ ನಾಯಕರಿಗೆ ರಕ್ಷಣೆ ನೀಡದ ಉತ್ತರ ಪ್ರದೇಶ ಸರ್ಕಾರ ಯಾವ ರೀತಿಯಲ್ಲಿ ಕೆಲಸ ಮಾಡು ತ್ತಿದೆ. ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಗೂಂಡಾವರ್ತನೆ ಇದೇ ರೀತಿ ಮುಂದುವರೆದರೆ ಸಾವಿರಾರು ಸಂಖ್ಯೆಯಲ್ಲಿ ಅಂಬೇಡ್ಕರ್ ಅನುಯಾಯಿಗಳು ಗುಂಡಿಗೆ ಎದೆಕೊಡಲಿದ್ದಾರೆ ಎಂದರು.

ಕೇಂದ್ರ ಸರ್ಕಾರವು ದೇಶದಲ್ಲಿ ಅಧಿಕಾರಕ್ಕೆ ಬಂದು ೯ ವರ್ಷಗಳು ಕಳೆದಿದ್ದರೂ ಸಹ ದಲಿತರ ಮೇಲೆ ಶೋಷಣೆ ನಡೆಯುತ್ತಲೇ ಇವೆ. ಮುಂದಿನ ದಿನಗಳಲ್ಲಿ ಜನಾಂಗವು ಎಚ್ಚೆತ್ತುಕೊಳ್ಳದಿದ್ದಲ್ಲಿ ದಲಿತರು ಹಾಗೂ ಮಹಿಳೆಯರ ಮೇಲೆ ತೀವ್ರ ಹಲ್ಲೆ, ಅತ್ಯಾಚಾರಗಳು ನಡೆಯಲಿವೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಭೀಮ್ ಆರ್ಮಿ ಅಧ್ಯಕ್ಷ ಗಿರೀಶ್, ಉಪಾಧ್ಯಕ್ಷ ಸತೀಶ್, ಪ್ರಧಾನ ಕಾರ್ಯದರ್ಶಿ ಲೋಕೇಶ್, ತಾಲ್ಲೂಕು ಅಧ್ಯಕ್ಷ ರಮೇಶ್, ದಲಿತಪರ ಮುಖಂಡ ಹುಣಸೇಮಕ್ಕಿ ಲಕ್ಷ್ಮಣ್, ಸದಸ್ಯರುಗಳಾದ ದಿಲೀಪ್, ಕುಮಾರ್, ರಾಕೇಶ್, ಸುಧೀರ್ ಮತ್ತಿತರರು ಹಾಜರಿದ್ದರು.

Bheem Army protests against firing on Ravan

About Author

Leave a Reply

Your email address will not be published. Required fields are marked *

You may have missed