September 19, 2024

ರಾಜ್ಯದಲ್ಲಿ ಮಳೆ ಚುರುಕು – ಕೃಷಿ ಚವಕೆ ಟುಟಿಬಿರುಸು

0
ಚಿಕ್ಕಮಗಳೂರು ನಗರದ ಪ್ರವಾಸಿ ಮಂದಿರದಲ್ಲಿ ಕೃಷಿಇಲಾಖೆ ಸಚಿವ ಎನ್.ಚಲುವರಾಯ ಸ್ವಾಮಿ ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಕೃಷಿ ಇಲಾಖೆ ಕರಪತ್ರವನ್ನು ಬಿಡುಗಡೆ ಮಾಡಿದರು.

ಚಿಕ್ಕಮಗಳೂರು ನಗರದ ಪ್ರವಾಸಿ ಮಂದಿರದಲ್ಲಿ ಕೃಷಿಇಲಾಖೆ ಸಚಿವ ಎನ್.ಚಲುವರಾಯ ಸ್ವಾಮಿ ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಕೃಷಿ ಇಲಾಖೆ ಕರಪತ್ರವನ್ನು ಬಿಡುಗಡೆ ಮಾಡಿದರು.

ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆ ಚುರುಕು ಪಡೆದುಕೊಂಡಿದ್ದು, ಕೃಷಿ ಚಟುವಟಿಕೆ ಬಿರುಸು ಪಡೆದುಕೊಳ್ಳುವ ನಿರೀಕ್ಷೆ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜ ಸಾಕಷ್ಟು ದಾಸ್ತಾನು ಇದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸಿ ಶೃಂಗೇರಿ ತಾಲೂಕು ಋಷ್ಯಂಶೃಂಗ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದರು.

ರಾಜ್ಯಾದ್ಯಂತ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಮಳೆ ಕೊರತೆ ಎದುರಾಗಿದ್ದು, ಸದ್ಯ ಸ್ವಲ್ಪ ಮಟ್ಟಿಗೆ ಮಳೆಯಾಗಿದ್ದರಿಂದ ಶೇ.೫೦ರಷ್ಟಿದ್ದ ಮಳೆ ಕೊರತೆ ಶೇ.೩೦ಕ್ಕೆ ಇಳಿಕೆಯಾಗಿದೆ. ಇದೇ ರೀತಿ ಮಳೆಯಾದಲ್ಲಿ ಮಳೆ ಕೊರತೆ ನೀಗಲಿದೆ ಎಂದು ಹೇಳಿದರು.

ಮುಂಗಾರು ಮಳೆ ತಡವಾಗಿದೆ. ಆದರೂ ಜುಲೈ ತಿಂಗಳಲ್ಲಿ ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಲ್ಲಿ ಮಳೆ ಕೊರತೆ ಇದೆ. ಮುಂದಿನ ದಿನಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದೆ. ಗುರಿ ಇತ್ತು ಅದರಂತೆ ದಾಸ್ತಾನು ಮಾಡಲಾಗಿದೆ ಎಂದ ಅವರು ಮುಂಗಾರು ಪೂರ್ವ ಬಿತ್ತನೆ ಬೆಳೆ ವಿಮೆ ಪರಿಹಾರ ರಿಜಿಸ್ಟರ್ ಮಾಡಲಾಗಿದೆ. ಬೆಳೆ ನಷ್ಟ ಸಂಬಂಧ ಸರ್ಕಾರದಿಂದ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

ಕೃಷಿ ಕ್ಷೇತ್ರದ ಅಭಿವೃದ್ದಿ ದೃಷ್ಟಿಯಿಂದ ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಅವಧಿಯಲ್ಲಿ ಕೃಷಿ ಭಾಗ್ಯ ಯೋಜನೆ ಯನ್ನು ಜಾರಿಗೊಳಿಸಲಾಗಿತ್ತು. ಮುಂದೆ ಬಂದ ಬಿಜೆಪಿ ಸರ್ಕಾರ ಕೃಷಿ ಭಾಗ್ಯ ಯೋಜನೆಯನ್ನು ರದ್ದುಪಡಿಸಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ರೈತರಿಗೆ ನೆರವಾಗುವ ದೃಷ್ಟಿಯಿಂದ ಕೃಷಿಭಾಗ್ಯ ಯೋಜನೆಯನ್ನು ತರಲಾಗಿದೆ ಎಂದರು.

ಕೃಷಿ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಸಿಬ್ಬಂದಿಗಳನ್ನು ಹಂತ ಹಂತವಾಗಿ ತುಂಬುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ತಿಳಿಸಿದ್ದಾರೆ. ಕೃಷಿ ಇಲಾಖೆಯಲ್ಲಿ ಶೇ.೫೭ರಷ್ಟು ಸಿಬ್ಬಂದಿಗಳ ಕೊರತೆ ಇದ್ದು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದರು.

Agriculture Minister N. Chaluvarayaswamy

 

About Author

Leave a Reply

Your email address will not be published. Required fields are marked *

You may have missed