September 19, 2024

 ಸರ್ಕಾರಿ ಶಾಲೆಗಳು ಮಾದರಿ ಶಾಲೆಗಳಾಗಿರಬೇಕು

0
ಸವಿತಾ ಸಮಾಜ ಮತ್ತು ದಲಿತ್ ಜನ ಸೇನೆವತಿಯಿಂದ ಎಸ್.ಡಿ.ಎಂ.ಸಿ ಅಧ್ಯಕ್ಷ ವಿಶ್ವನಾಥ್ ಸನ್ಮಾನ

ಸವಿತಾ ಸಮಾಜ ಮತ್ತು ದಲಿತ್ ಜನ ಸೇನೆವತಿಯಿಂದ ಎಸ್.ಡಿ.ಎಂ.ಸಿ ಅಧ್ಯಕ್ಷ ವಿಶ್ವನಾಥ್ ಸನ್ಮಾನ

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲದೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ, ಸರ್ಕಾರ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಯನ್ನಾಗಿ ಮಾಡಲು ಹೆಚ್ಚಿನ ಶ್ರಮ ಹಾಕಬೇಕೆಂದು ಎಸ್.ಡಿ.ಎಂ.ಸಿ ಅಧ್ಯಕ್ಷ ವಿಶ್ವನಾಥ್ ತಿಳಿಸಿದರು.

ನಗರದ ಬಸವನಹಳ್ಳಿಯ ಶಾಸಕರ ಮಾದರಿ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಸವಿತಾ ಸಮಾಜ ಮತ್ತು ದಲಿತ್ ಜನ ಸೇನೆವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ ಸರ್ಕಾರ ಸರ್ಕಾರಿ ಶಾಲೆಗಳನ್ನು ನಿರ್ಲಕ್ಷಿಸದೆ ಅಗತ್ಯ ಇರುವ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಊಟದ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೋರೆಯುತ್ತದೆ, ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗದೆ ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು, ಸರ್ಕಾರ ಶಾಲಾ ಮಕ್ಕಳಿಗೆ ಹಾಲು, ಊಟ, ಸಮವಸ್ತ್ರ ಮತ್ತು ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ನೀಡಲಾಗುವುದು ಎಂದರು.

ನನ್ನ ಮಗಳು ಸಹ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ ಯಾವುದೇ ಬೆಳವಣಿಗೆ ಹಿಂದೆ ಸ್ನೇಹಿತರು ಮತ್ತು ಹಿತೈಷಿಗಳು ಇರುತ್ತಾರೆ, ನಾನು ಈ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷನಾದ್ದರಿಂದ ಸ್ನೇಹಿತರೆಲ್ಲರೂ ನನ್ನನ್ನು ಗೌರವಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸವಿತಾ ಸಮಾಜದ ಅಧ್ಯಕ್ಷ ಸತ್ಯನಾರಾಯಣ್, ಖಜಾಂಚಿ ರಾಘವೇಂದ್ರ, ದಲಿತ್ ಜನಸೇವೆಯ ಜಿಲ್ಲಾಧ್ಯಕ್ಷ ಅನಿಲ್ ಆನಂದ್, ಉಪಾಧ್ಯಕ್ಷರಾದ ಸಿ.ಮಾದವ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಉದಯ್ ಕುಮಾರ್, ಸಹ ಕಾರ್ಯದರ್ಶಿ ನಟರಾಜ್, ಶ್ರೀನಿವಾಸ್, ರಶ್ಮಿ, ಮೆಹಬೂಬ್, ಮುಖ್ಯ ಶಿಕ್ಷಕರಾದ ಪ್ರಭಾಕರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Government schools should be model schools

 

About Author

Leave a Reply

Your email address will not be published. Required fields are marked *

You may have missed