September 19, 2024

ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಳಸದಂತೆ ಸಲಹೆ

0
ನಗರದ ಸಂತಜೋಸೆಫ್ ಶಾಲೆಯ ಮಕ್ಕಳಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

ನಗರದ ಸಂತಜೋಸೆಫ್ ಶಾಲೆಯ ಮಕ್ಕಳಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

ಚಿಕ್ಕಮಗಳೂರು: ವಿದ್ಯಾರ್ಥಿಗಳು ತಮ್ಮ ಸುತ್ತ ಮುತ್ತಲ ಪರಿಸರವನ್ನು ಕಾಪಾಡಿಕೊಳ್ಳುವುದರ ಜತೆಗೆ ಪ್ಲಾಸ್ಟಿಕನ್ನು ಬಳಸದಂತೆ ನಗರಸಭೆ ಆಯುಕ್ತ ಬಸವರಾಜ್ ತಿಳಿಸಿದರು.

ನಗರದ ಸಂತಜೋಸೆಫ್ ಶಾಲೆಯ ಮಕ್ಕಳಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ. ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡುವ ಉದ್ದೇಶದಿಂದ ಪ್ಲಾಸ್ಟಿಕ್ ನಿಷೇದದ ಬಗ್ಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜುಲೈ ೧ ರಿಂದ ಜುಲೈ ೨೮ರ ವರೆಗೆ ನಡೆಸಲಾಗುವುದು, ನಗರಸಭೆ ಪೌರಕಾರ್ಮಿಕರು ಹಾಗೂ ಕಸ ಸಂಗ್ರಹಿಸುವ ಗಂಟೆ ಗಾಡಿಯವರಿಗೆ ಪ್ಲಾಸ್ಟಿಕ್ ನಿಷೇದದ ಬಗ್ಗೆ ಮನೆ-ಮನೆಗೆ ತೆರಳಿ ಅರಿವು ಮೂಡಿಸುವ ತರಬೇತಿಯನ್ನು ನೀಡಲಾಗಿದೆ ಎಂದರು.

ಬೀದಿ ನಾಟಕಗಳ ಮೂಲಕ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಬಗ್ಗೆ ಅರಿವು ಮೂಡಿಸಲಾಗುವುದು ಮತ್ತು ರಸಪ್ರಶ್ನೆ ಕಾರ್ಯಕ್ರಮ ಮಾಡಲಾಗುವುದು, ತಿಂಗಳ ಅಂತ್ಯದೊಳಗೆ ಪ್ಲಾಸ್ಟಿಕ್ ಮುಕ್ತ ನಗರವಾಗಬೇಕು, ಪ್ಲಾಸ್ಟಿಕ್ ಬಳಕೆ ಮಾಡುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ಕಾನೂನು ಕ್ರಮ ಜರುಗಿಸಲಾಗುವುದು ಎಂದರು

ಈ ಸಂದರ್ಭದಲ್ಲಿ ನಗರ ಸಭೆ ಆರೋಗ್ಯ ನಿರೀಕ್ಷಕರಾದ ಈಶ್ವರ್, ವೆಂಕಟೇಶ್, ಚಂದ್ರಶೇಖರ್, ಮತ್ತಿತರರು ಉಪಸ್ಥಿತರಿದ್ದರು.

A program to create awareness about the ill effects of using plastic

 

About Author

Leave a Reply

Your email address will not be published. Required fields are marked *

You may have missed