September 19, 2024

ಬೇಸತ್ತ ಜನರು ಕಾಂಗ್ರೆಸ್ ಕಡೆ ಮುಖ ಉತ್ತಮವಾದ ಬೆಳವಣಿಗೆ

0
ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆ

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆ

ಚಿಕ್ಕಮಗಳೂರು: ಬಿಜೆಪಿ ಜನ ವಿರೋಧಿ ನೀತಿಯನ್ನು ಬೇಸತ್ತ ಜನರು ಕಾಂಗ್ರೆಸ್ ಪಕ್ಷದ ಕಡೆ ಮುಖ ಮಾಡುತ್ತಿರುವುದು ಉತ್ತಮವಾದ ಬೆಳವಣಿಗೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಹೇಳಿದರು.

ಅವರು ಇಂದು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುವ ಕಾರ್ಯಕ್ರಮದಲ್ಲಿ ಪಕ್ಷದ ಶಾಲನ್ನು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

ಪಕ್ಷದ ಕಾರ್ಯಕರ್ತರು ನಿಂತ ನೀರಾಗದೆ ಹರಿಯುವ ನೀರಾಗಬೇಕು. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ ಪಕ್ಷ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ. ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿದ್ದು, ಮುಂದೆ ನಡೆಯುವ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ಏಳಿಗೆಗೆ ಎಲ್ಲರೂ ಪಣ ತೊಡಬೇಕೆಂದು ಕಿವಿ ಮಾತು ಹೇಳಿದರು.

ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೋಷಿಸಿದಂತೆ ಗ್ಯಾರಂಟಿಗಳನ್ನು ಕಾರ್ಯಗತ ಮಾಡುತ್ತಿದ್ದರೂ ಸಹ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಜನರ ದಿಕ್ಕನ್ನು ತಪ್ಪಿಸುವ ಕೆಲಸವನ್ನು ಮಾಡುವುದರ ಜೊತೆಗೆ ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುವುದನ್ನು ನಿತ್ಯ ಕಾಯಕವಾಗಿ ಮಾಡಿಕೊಂಡಿದೆ ಎಂದರು.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನರು ಬೇಸತ್ತು ಬಿಜೆಪಿ ಪಕ್ಷವನ್ನು ದೂರ ಮಾಡಿದ್ದರೂ ಸಹ ಅಧಿಕಾರದ ಅಹಂ ಅವರಿಗೆ ಇನ್ನು ಕಡಿಮೆಯಾಗಿಲ್ಲ. ಇಂದು ಕಾಂಗ್ರೆಸ್‌ನ ನಾಲ್ಕನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆ ಬೆಂಗಳೂರಿನಲ್ಲಿ ಜಾರಿಗೊಳ್ಳಲಿದೆ ಎಂದು ತಿಳಿಸಿದರು.

ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯಲಿದ್ದು, ಎಲ್ಲರೂ ಕಾಂಗ್ರೆಸ್ ಪಕ್ಷದ ಯೋಜನೆಗಳನ್ನು ಜನಸಾಮಾನ್ಯರಿಗೆ ಮನಮುಟ್ಟುವಂತೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು.

ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ, ರಾಜ್ಯದಲ್ಲಿ ಜನಸಾಮಾನ್ಯರ ಬದುಕನ್ನು ಹಸನು ಮಾಡಲು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಕ್ಷ ಘೋಷಿಸಿರುವ ಯೋಜನೆಗಳನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಹಕಾರ ನೀಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ವಿ.ಮಂಜುನಾಥ್, ಆಲ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಮುದಾಬೀರ್, ಅಂಬಳೆ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಆರ್.ಎಂ.ಬಸವರಾಜು, ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ರಸೂಲ್‌ಖಾನ್, ಆಲ್ದೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿರೂಪಾಕ್ಷ, ಮುಖಂಡರಾದ ಲಕ್ಷ್ಮಣ್, ಧರ್ಮಪಾಲ್, ಕೆ.ಎಸ್.ಪ್ರಕಾಶ್ ಸೇರಿದಂತೆ ಮರ್ಲೆಮತ್ತು ನಾಗರಹಳ್ಳಿ ಗ್ರಾಮದ ಮುಖಂಡರು ಇದ್ದರು.

Nagarahalli village leaders joined the Congress party

About Author

Leave a Reply

Your email address will not be published. Required fields are marked *

You may have missed