September 19, 2024

ಜಿಲ್ಲಾಡಳಿತ ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ದರಾಗಿ

0
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮಳೆ ಹಾನಿ ನಿರ್ವಹಣಾ ಸಭೆ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮಳೆ ಹಾನಿ ನಿರ್ವಹಣಾ ಸಭೆ

ಚಿಕ್ಕಮಗಳೂರು: ಮಳೆಗಾಲದ ಹಿನ್ನೆಲೆಯಲ್ಲಿ ಉಂಟಾಗಬಹುದಾದ ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ದರಾಗಿರುವಂತೆ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮಳೆ ಹಾನಿ ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆಗಾಲ ಮುಗಿಯುವವರೆಗೂ ಸಂಬಂಧಪಟ್ಟ ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು. ಹಿಂದಿನ ವರ್ಷಗಳಲ್ಲಿ ಮಳೆಯಿಂದ ಆಗಿರುವ ಅನಾಹುತಗಳ ಸ್ಥಳಗಳಲ್ಲಿ ಈಗಿನಿಂದಲೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಮಳೆಯಿಂದಾಗಿ ನಷ್ಟ ಅನುಭವಿಸಿದಲ್ಲಿ ಅಥವಾ ವಿಪತ್ತುಗಳು ಸಂಬಂಧಿಸಿದಲ್ಲಿ ತುರ್ತು ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ತಿಳಿಸಿದರು.

ಎಲ್ಲಾ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಕಟ್ಟುನಿಟ್ಟಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್,ಉಪವಿಭಾಗಾಧಿಕಾರಿ ರಾಜೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

District administration is always prepared to face disasters

About Author

Leave a Reply

Your email address will not be published. Required fields are marked *

You may have missed