September 16, 2024

ಮಹಿಳೆಯರ ಬೆತ್ತಲೆ ಮೆರವಣಿಗೆ, ಸೌಜನ್ಯ ಪ್ರಕರಣ ಖಂಡಿಸಿ ಪ್ರತಿಭಟನೆ

0
ಜಿಲ್ಲಾ ಪ್ರಗತಿಪರ ಸಂಘಟನೆಗಳ ಮುಖಂಡರುಗಳು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ

ಜಿಲ್ಲಾ ಪ್ರಗತಿಪರ ಸಂಘಟನೆಗಳ ಮುಖಂಡರುಗಳು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ

ಚಿಕ್ಕಮಗಳೂರು:  ಮಣಿಪುರದ ಬೆತ್ತಲೆ ಮೆರವಣಿಗೆ ಖಂಡಿಸಿ ಹಾಗೂ ಸೌಜನ್ಯ ಕೊಲೆ ಪ್ರಕರಣ ವನ್ನು ಮರು ತನಿಖೆಗೊಳಪಡಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮುಖಂಡರುಗಳು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಪ್ರಗತಿಪರ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಉಮೇಶ್‌ಕುಮಾರ್ ಮಣಿಪುರದ ಕುಕೀ ಜನಾಂಗದ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಸುವ ಮೂಲಕ ಬೆತ್ತಲೆ ಮೆರವಣಿಗೆ ಮಾಡಿ ರುವುದು ಇಡೀ ದೇಶವು ತಲೆತಗ್ಗಿಸುವಂತಾಗಿರುವುದೆ ಎಂದು ಖಂಡಿಸಿದರು.

ಸಂತ್ರಸ್ಥ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ತಪ್ಪಿತಸ್ಥರಿಗೆ ಮರಣದಂಡನೆ ಗುರಿಪಡಿಸಬೇಕು. ಗಲಭೆ ಪ್ರಾರಂಭವಾಗಿ ಮೂರು ತಿಂಗಳಾದರೂ ಸಂಬಂಧವಿಲ್ಲದಂತೆ ವರ್ತಿಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ ವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಒತ್ತಾಯಿಸಿದರು.

ಧರ್ಮಸ್ಥಳದಲ್ಲಿ ವಿದ್ಯಾರ್ಥಿನಿ ಸೌಜನ್ಯ ಕೊಲೆಯನ್ನು ಮರು ತನಿಖೆಗೊಳಪಡಿಸಬೇಕು. ಕೊಲೆ ಪ್ರಕರಣ ಸಂಬಂಧ ಸರಿಯಾದ ಮಾರ್ಗದಲ್ಲಿ ತನಿಖೆ ನಡೆಸದೇ ಕಾಲಹರಣ ಮಾಡಿರುವ ಸಿಬಿಐ ಮೇಲೆ ಕೇಸು ದಾಖಲಿ ಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಸಹ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಮಣಿಪುರ ಹಾಗೂ ಸೌಜನ್ಯ ಪ್ರಕರಣ ಸಂಬಂಧ ಜಿಲ್ಲಾಡಳಿತ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರಾದ ಸುರೇಶ್, ಕೆ.ಎನ್.ಉದ್ದಪ್ಪ, ಐ.ಎಂ. ಪೂರ್ಣೇಶ್, ಜೆ.ಡಿ. ಪರಮೇಶ್, ಜೆ.ಡಿ.ಕುಮಾರ್, ನಿಂಗಯ್ಯ, ಪ್ರೇಮ್‌ಕುಮಾರ್, ಪುಟ್ಟಸ್ವಾಮಿ, ಗುರುವಯ್ಯ ಮತ್ತಿತರರು ಹಾಜರಿದ್ದರು.

Protest against women’s naked procession courtesies case

About Author

Leave a Reply

Your email address will not be published. Required fields are marked *