September 20, 2024

ಅಂಬಳೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

0
ಅಂಬಳೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಅಂಬಳೆ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಚಿಕ್ಕಮಗಳೂರು: ಅಂಬಳೆ ಗ್ರಾಮ ಪಂಚಾಯಿತಿ ೪ನೇ ಬಾರಿಗೆ ದೊಡ್ಡೇಗೌಡ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಭಾಗ್ಯಲಕ್ಷ್ಮಣಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಂಚಾಯಿತಿಯಲ್ಲಿ ನಡೆದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಓ ಚರಣ್‌ರಾಜ್ ಆಯ್ಕೆಯನ್ನು ಘೋಷಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿಶಾಂತೇಗೌಡ ನೂತನ ಅಧ್ಯಕ್ಷರು-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ ಅಂಬಳೆ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಆಯ್ಕೆಯಾಗಿದ್ದು, ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರೆಸಿಕೊಂಡು ಹೋಗುವಂತೆ ತಿಳಿಸಿದ ಅವರು ಹಿಂದೆ ಕೃಷ್ಣಶಾಸ್ತ್ರಿಗಳ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದು, ಆದರೆ ಈ ವರೆಗೂ ಕಾಮಗಾರಿ ಪ್ರಾರಂಭವಾಗಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ಅಧ್ಯಕ್ಷರು ಸಮುದಾಯ ಭವನ ಪೂರ್ಣಗೊಳಿಸಲು ಸಲಹೆ ನೀಡಿದರು.

ಎಲ್ಲಿ ಬಹಳಷ್ಟು ಅಭಿವೃದ್ಧಿ ಕುಂಠಿತವಾಗಿದೆ ಎಂಬುದನ್ನು ಮನಗಂಡು ಎಲ್ಲಾ ಸದಸ್ಯರ ನಿಸ್ವಾರ್ಥದೊಂದಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆದು ಅಭಿವೃದ್ಧಿಪಡಿಸುವುದರ ಜೊತೆಗೆ ೫ ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವಲ್ಲಿ ಶ್ರಮಿಸಬೇಕೆಂದು ಸೂಚಿಸಿದರು.

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಭರವಸೆಗಳನ್ನು ಅನುಷ್ಠಾನ ಮಾಡಿರುವುದರಿಂದ ಜನರು ತುಂಬಾ ಸಂತೋಷವಾಗಿದ್ದಾರೆ. ಶಕ್ತಿ ಯೋಜನೆಯಿಂದ ಧರ್ಮಸ್ಥಳ, ಶೃಂಗೇರಿ, ಹೊರನಾಡು ಸೇರಿದಂತೆ ರಾಜ್ಯದ ಎಲ್ಲಾ ದೇವಸ್ಥಾನಗಳಿಗೆ ಬಡ ಕುಟುಂಬದ ಮಹಿಳೆಯರು ಭೇಟಿ ನೀಡಿ, ದೇವರ ದರ್ಶನ ಪಡೆದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.

ಅಗತ್ಯ ವಸ್ತುಗಳ ಬೆಲೆ ಹೆಚ್ಚಳವನ್ನು ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದು, ಈಗ ಹೆಚ್ಚಾಗಿದೆ ಎಂಬುದು ಬಿಜೆಪಿ ಮುಖಂಡರ ಸೃಷ್ಠಿ ಎಂದು ಆರೋಪಿಸಿದ ಅವರು ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಜನಸಾಮಾನ್ಯರಂತೆ ಸರ್ಕಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ವಿರೋಧ ಪಕ್ಷವಾಗಿ ಅದರ ಕೆಲಸ ಮಾಡುತ್ತಿದೆ. ಜಿಲ್ಲೆಯ ಸಂಸದರು ಹಾಗೂ ಕೇಂದ್ರ ಸಚಿವರು ಆಗಿರುವ ಶೋಭಾ ಕರಂದ್ಲಾಜೆ ಅವರು ಗ್ಯಾಸ್, ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ ಕಡಿಮೆ ಮಾಡುವ ಕುರಿತು ಸಂಸತ್ ಅಧಿವೇಶನದಲ್ಲಿ ಚರ್ಚಿಸುತ್ತಿಲ್ಲ ಎಂದು ದೂರಿದ ಅವರು ಒಟ್ಟಾರೆಯಾಗಿ ಬಡವರಿಗೆ ಸೌಲಭ್ಯ ಕೊಡಲು ಬಿಜೆಪಿ ಮುಖಂಡರಿಗೆ ಮನಸ್ಸಿಲ್ಲ, ಅದಾನಿ, ಅಂಬಾನಿಯಂತಹ ಉಳ್ಳವರಿಗೆ ಕೊಡುತ್ತಾರೆ ಎಂದು ವ್ಯಂಗ್ಯವಾಡಿದರು.

ಜಿಲ್ಲೆಯ ಜನತೆ ೫ ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿದ್ದಾರೆ, ಅದಕ್ಕಾಗಿ ಜನಸ್ನೇಹಿ ಆಡಳಿತಕ್ಕೆ ಬದ್ದರಾಗಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಕ್ತ ಮಾಡುವುದಾಗಿ ಬಿಜೆಪಿಯವರು ಹೇಳಿದ್ದರು ಆದರೆ ಮತದಾರರ ತೀರ್ಪು ಬಿಜೆಪಿ ಮುಕ್ತ ಮಾಡಿದ್ದಾರೆ. ಈಗ ನಾವು ಅದನ್ನೇ ಹೇಳುತ್ತೇವೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದವರೇ ಸೋತು ಕಣ್ಣೀರಿಡುತ್ತಿದ್ದಾರೆಂದು ಟೀಕಿಸಿದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದೊಡ್ಡೇಗೌಡ ಮಾತನಾಡಿ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಚತೆ, ಕುಡಿಯುವ ನೀರು, ಬೀದಿ ದೀಪ, ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.

ಎಲ್ಲರ ಸಹಕಾರದೊಂದಿಗೆ ಹಾಗೂ ಸರ್ಕಾರದ ಸೌಲತ್ತು ಪಡೆದು ಶಾಸಕರ ಅನುದಾನವನ್ನೂ ಬಳಸಿಕೊಂಡು ಗ್ರಾಮ ಪಂಚಾಯಿತಿಯನ್ನು ಮಾದರಿಯನ್ನಾಗಿಸಿಲು ನಿರ್ಧರಿಸಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ೫ ಗ್ಯಾರಂಟಿ ಯೋಜನೆಗಳನ್ನು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಬಡವರಿಗೆ ತಲುಪಿಸುವಲ್ಲಿ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಉಪಾಧ್ಯಕ್ಷೆ ಭಾಗ್ಯಲಕ್ಷ್ಮಣಗೌಡ, ಸದಸ್ಯರುಗಳಾದ ಲಕ್ಷ್ಮಮ್ಮಕೆಂಚೇಗೌಡ, ವಿಜಯಮ್ಮ, ಸಾವಿತ್ರಮ್ಮ, ಚಿದಾನಂದ ಎ.ಡಿ, ಮಲಿಯಮ್ಮ, ವಿಜಯಕುಮಾರ್ ಎ.ಎಂ. ಚಂದ್ರಮ್ಮ, ಗಂಗಾಧರ್ ಬಿ.ಸಿ, ಅಶ್ವಿನಿ ನೂತನ ಅಧ್ಯಕ್ಷ ಉಪಧ್ಯಕ್ಷರನ್ನು ಅಭಿನಂಧಿಸಿದರು.

Election of new President-Vice President for Ambale Gram Panchayat

About Author

Leave a Reply

Your email address will not be published. Required fields are marked *