September 19, 2024

ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಲು ಬದ್ದನಾಗಿದ್ದೇನೆ

0
ಎಸ್.ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀಲೇನಹಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭ

ಎಸ್.ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀಲೇನಹಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭ

ಚಿಕ್ಕಮಗಳೂರು: ಕ್ಷೇತ್ರದಲ್ಲಿ ಜಾತ್ಯಾತೀತ,ಪಕ್ಷಾತೀತ ಶಾಸಕನಾಗಿ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಲು ಬದ್ದನಾಗಿದ್ದೇನೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು.

ಅವರು ಎಸ್.ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀಲೇನಹಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ವಿಧಾನಸಭಾ ಚುನಾವಣಾ ಪ್ರಚಾರ ಸಭೆ ನಡೆಸಿದ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿಮನೆ ಸತೀಶ್‌ರವರು ಹೇಳಿದ ಮಾತಿಗೆ ಬೆಲೆ ಕೊಟ್ಟಿದ್ದೇನೆ ಮತ್ತು ಈ ಭಾಗದ ನೀರಾವರಿ ಯೋಜನೆಗಳ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದ್ದರು ಅದಕ್ಕೆ ನೀರಾವರಿ ಯೋಜನೆಗಳನ್ನು ಜಾರಿ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು.

ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ ೫ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶ್ರಮಿಸುತ್ತಿದ್ದು ನುಡಿದಂತೆ ನಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆ.೧೭ ರವರೆಗೆ ಗೃಹಲಕ್ಷ್ಮಿ ಯೋಜನೆಗೆ ನೊಂದಾಯಿಸಲು ಅವಕಾಶ ಇದ್ದು ನಂತರ ೨ ಸಾವಿರ ರೂ. ಯಜಮಾನಿ ಖಾತೆಗೆ ಹಣ ಜಮಾ ಆಗಲಿದೆ ಎಂದರು.

ಮುಂದಿನ ಬಜೆಟ್‌ನಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡಿಸಲು ಬದ್ದವಾಗಿದ್ದೇನೆ ಎಂದು ಭರವಸೆ ನೀಡಿದ ತಮ್ಮಯ್ಯ ಚುನಾವಣೆಯಲ್ಲಿ ನನ್ನ ಕೈ ಹಿಡಿದಿರುವ ನಿಮ್ಮಗಳ ಕೈಯನ್ನು ಬಿಡುವುದಿಲ್ಲ ಜೊತೆಗೆ ಮುಂಬರುವ ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರೇ ಅಭ್ಯರ್ಥಿಗಳಾಗಿರುತ್ತಾರೆ ಅವರನ್ನು ಗೆಲ್ಲಿಸಿದರೆ ನಿಮ್ಮ ಕೆಲಸ ಸುಗಮವಾಗಿ ನೆರವೇರುತ್ತದೆ ನೀವು ಕೊಟ್ಟ ಜವಾಬ್ದಾರಿಯನ್ನು ಅರಿತು ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿಮನೆ ಸತೀಶ್, ಮಾಳಪ್ಪ ಮೇಷ್ಟ್ರು, ನಂಜುಂಡಪ್ಪ, ಜಗದೀಶ್, ನೀಲಕಂಠಪ್ಪ, ಶಾಂತಪ್ಪ, ಪ್ರವೀಣ್, ಮಂಜುನಾಥ್, ಶಿವಣ್ಣ, ಸಕ್ರೆಪಟ್ಟಣ ಠಾಣಾಧಿಕಾರಿ ಕಿರಣ್ ಉಪಸ್ಥಿತರಿದ್ದರು.

I am bound to do my duty knowing the responsibility

About Author

Leave a Reply

Your email address will not be published. Required fields are marked *

You may have missed