September 19, 2024

ಶೀಘ್ರದಲ್ಲಿಯೇ ವಿದ್ಯುತ್ ಲೋಡ್ ಶೆಡ್ಡಿಂಗ್ ಸಮಸ್ಯೆ ನಿವಾರಣೆ

0
ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಸುದ್ದಿಗೋಷ್ಟಿ

ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಸುದ್ದಿಗೋಷ್ಟಿ

ಚಿಕ್ಕಮಗಳೂರು: ಶೀಘ್ರದಲ್ಲಿಯೇ ವಿದ್ಯುತ್ ಲೋಡ್ ಶೆಡ್ಡಿಂಗ್ ಸಮಸ್ಯೆಯನ್ನು ನಿವಾರಿಸಲಾಗುವುದು. ವಿದ್ಯುತ್ ಉತ್ಪಾದನೆ ಅಭಾವವನ್ನು ಕಡಿಮೆ ಮಾಡುವ ದೃಷ್ಟಿಯಿಂದ ವಿದ್ಯುತ್ ಸಬ್ ಸ್ಟೇಷನ್‌ಗಳಲ್ಲಿ ಸೋಲಾರ್ ಪ್ಲಾಟ್ ಅಳವಡಿಕೆ ಬಗ್ಗೆ ಚಿಂತನೆ ಮಾಡಲಾಗಿದ್ದು, ಸರ್ವೇ ಕಾರ್ಯ ನಡೆಯುತ್ತಿದೆ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರೈತರಿಗೆ ಅನುಕೂಲವಾಗುವಂತೆ ರೈತರ ಪಂಪ್‌ಸೆಟ್‌ಗಳಿಗೆ ಸೋಲಾರ್ ವಿದ್ಯುತ್ ಅಳವಡಿಕೆ ಬಗ್ಗೆ ಇಲಾಖೆ ಚಿಂತನೆ ನಡೆಸಿದೆ. ಕೆಲವೊಂದು ಅಡೆತಡೆಗಳು ಇದ್ದು, ಅದನ್ನು ಸರಿಪಡಿಸಲಾಗುವುದು ಎಂದು ತಿಳಿಸಿ ವಿದ್ಯುತ್ ಅಭಾವ ನೀಗಿಸುವ ನಿಟ್ಟಿನಲ್ಲಿ ವಿದ್ಯುತ್ ಸಬ್ ಸ್ಟೇಷನ್‌ಗಳಿಗೆ ಸೋಲಾರ್ ಪ್ಲಾಟ್ ಅಳವ ಡಿಸುವ ಸರ್ವೇ ಕಾರ್ಯ ನಡೆಸಲಾಗುತ್ತಿದೆ ಹಾಗೇ ರೈತರ ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಸುವ ಚಿಂತನೆ ಮಾಡಲಾಗಿದೆ ಎಂದು ಹೇಳಿದರು

ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕುಂಠಿತವಾಗುತ್ತಿದೆ. ಥರ್ಮಲ್ ವಿದ್ಯುತ್ ಮತ್ತು ವಿಂಡ್ ವಿದ್ಯುತ್ ಅವಲಂಭಿಸಿಬೇಕಾಗಿದೆ. ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ ಸರ್ವೀಸ್ ಮಾಡಲಾಗುತ್ತದೆ. ಇದರಿಂದ ಥರ್ಮಲ್ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಥರ್ಮಲ್ ಪ್ಲಾಂಟ್ ಜಾಸ್ತಿಮಾಡಲು ಆದೇಶ ಮಾಡಿದ್ದೇನೆ. ಕಳೆದೊಂದು ವಾರದಿಂದ ವಾತವರಣದಲ್ಲಿ ಗಾಳಿಯ ವೇಗ ಕಡಿಮೆಯಾಗಿರುವುದರಿಂದ ವಿಂಡ್ ವಿದ್ಯುತ್ ಸಮಸ್ಯೆಯಾಗಿದೆ. ಆದ್ದರಿಂದ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಆಗುತ್ತಿದೆ ಎಂದರು.

ರಾಜ್ಯ ಸರ್ಕಾರದ ಐದು ಗ್ಯಾರೆಂಟಿಗಳು ಜನಸಾಮಾನ್ಯರ ಮನಮುಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನುಡಿದಂತೆ ನಡೆದಿದ್ದಾರೆ. ರಾಜ್ಯದಲ್ಲಿ ಐದು ಗ್ಯಾರೆಂಟಿಗಳು ಯಶಸ್ವಿ ಯಾಗಿದ್ದು, ಎಐಸಿಸಿ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಬೆಂಬಲವೂ ಇದಕ್ಕೆ ಕಾರಣ ಎಂದು ತಿಳಿಸಿದರು.

ನೋಟು ಅಮಾನ್ಯಕರಣ, ಕೋವಿಡ್‌ನಿಂದ ಜನರು ಆರ್ಥಿಕವಾಗಿ ಕುಸಿದು ಹೋಗಿದ್ದರು. ಬೆಲೆಏರಿಕೆಯಿಂದ ಬೇಸತ್ತಿದ್ದರು. ಆರ್ಥಿಕವಾಗಿ ಕುಗ್ಗಿದ ಜನರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಐದು ಗ್ಯಾರೆಂಟಿಗಳನ್ನು ರಾಜ್ಯ ಸರ್ಕಾರ ತಂದಿದ್ದು, ಜನರ ಹಣವನ್ನು ಜನರಿಗೆ ನೀಡಲಾಗುತ್ತಿದೆ. ಯಾವುದನ್ನು ಫ್ರೀಯಾಗಿ ನೀಡುತ್ತಿಲ್ಲ ಎಂದು ಅಭಿಪ್ರಾ ಯಿಸಿದರು.

ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ. ಯುವ ನಿಧಿ ಯೋಜನೆಯನ್ನು ರಾಜ್ಯ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ. ಅನ್ಯಭಾಗ್ಯ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಅಕ್ಕಿ ನೀಡದ ಹಿನ್ನಲೆಯಲ್ಲಿ ಕೊಟ್ಟ ಮಾತಿನಂತೆ ರಾಜ್ಯ ಸರ್ಕಾರ ಪ್ರತೀ ಪಡಿತರ ವ್ಯಕ್ತಿಗೆ ೧೭೦ ರೂ. ನಗದು ಖಾತೆಗೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಸರ್ಕಾರ ಯಾವುದೇ ಜಾತಿ, ಧರ್ಮವನ್ನು ನೋಡದೆ ಜನರ ಅಭಿವೃದ್ದಿ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದು ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿರುವ ಭೂ ಅಕ್ರಮ ಮಂಜೂರಾತಿ ಸಂಬಂಧ ತನಿಖೆಗೆ ತಂಡ ರಚಿಸಲಾಗಿದೆ. ತಂಡ ತನಿಖೆ ನಡೆಸಿ ವರದಿ ನೀಡಿದ ಮೇಲೆ ಅಕ್ರಮ ಭೂಮಿ ವಶಕ್ಕೆ ಪಡೆಯುವ ಸಂಬಂಧ ಕಂದಾಯ ಸಚಿವರು ತೀರ್ಮಾನ ತಗೆದುಕೊಳ್ಳಲಿದ್ದಾರೆ. ಅಕ್ರಮದಲ್ಲಿ ಭಾಗಿಯಾದವರಿಗೆ ಕಾನೂನಾತ್ಮಕ ಶಿಕ್ಷೆಯಾಗಲಿದೆ ಎಂದರು.

ಸುದ್ದಿಗೋಷ್ಟಿಯಲ್ಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್, ಶಾಸಕ ಎಚ್.ಡಿ.ತಮ್ಮಯ್ಯ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿ.ಪಂ.ಸಿಇಓ ಡಾ|ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸೇರಿದಂತೆ ಅನೇಕರು ಇದ್ದರು.

Electrical load shedding will be solved soon

About Author

Leave a Reply

Your email address will not be published. Required fields are marked *

You may have missed