September 19, 2024

ಜಿಲ್ಲಾ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

0
ಜಿಲ್ಲಾ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರು: ಭಾರತದ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ಹೊರಗಿಟ್ಟು ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಕೇಂದ್ರ ಸರ್ಕಾರದ ಪ್ರಯತ್ನವನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.

ಇಂದು ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ನಗರದ ಜಿಲ್ಲಾ ನ್ಯಾಯಾಲಯದ ಎದುರಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ವಿರುದ್ಧ ಆಕೋಶ ವ್ಯಕ್ತಪಡಿಸಿದರು

ಭಾರತ ಸಂವಿಧಾನದ ಪ್ರಕಾರ ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ವಿಚಾರದಲ್ಲಿ ದೇಶದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರನ್ನೊಳಗೊಂಡಂತೆ ಪ್ರಧಾನಮಂತ್ರಿ ವಿರೋಧ ಪಕ್ಷದ ನಾಯಕರನ್ನೊಳಗೊಂಡ ಸಮಿತಿಯ ಶಿಫಾರಸ್ಸಿನಂತೆ ರಾ?ಪತಿಗಳ ನೇಮಕ ಮಾಡಬೇಕು ಆದರೆ ಮುಖ್ಯ ನ್ಯಾಯಾಧೀಶರನ್ನು ಹೊರಗಿಟ್ಟು ಅವರ ಬದಲಿಗೆ ಕೇಂದ್ರ ಸರ್ಕಾರದ ಸಂಪುಟದರ್ಜೆ ಸಚಿವರನ್ನು ಸೇರಿಸಿಕೊಂಡು ತೀರ್ಮಾನ ಕೈಗೊಳ್ಳಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರಾರಂಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ ಮಂಜೇಗೌಡ ಅವರು ಕಳೆದ ೯ ವ?ಗಳಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನಾತ್ಮಕ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಲಗೊಳಿಸಿ ಅವುಗಳ ದುರುಪಯೋಗ ಮಾಡಿಕೊಂಡು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯುವ ಉದ್ದೇಶದಿಂದ ನ್ಯಾಯಾಧೀಶರನ್ನು ಹೊರಗಿಟ್ಟು ತಮಗೆ ಬೇಕಾದ ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡಿಕೊಳ್ಳುವ ಮೂಲಕ ಸಂಚಿನ ವಿರುದ್ಧ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ದೇಶದಲ್ಲಿ ೬೦ ವ?ಗಳ ಕಾಲ ಅಧಿಕಾರ ನಡೆಸಿದ ಕಾಂಗ್ರೆಸ್ ಸರ್ಕಾರ ಯಾವುದೆ ಸ್ವಾಯತ್ತ ಸಂಸ್ಥೆಗಳ ದುರುಪಯೋಗಪಡಿಸಿಕೊಂಡಿರಲಿಲ್ಲ ಆದರೆ ೯ ವ?ಗಳಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿಯವರು ಇ.ಡಿ, ಸಿಬಿಐ ಮುಂತಾದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಅಧಿಕಾರ ಹಿಡಿಯುತ್ತಾ ಬಂದಿದೆ ಎಂದು ಆರೋಪಿಸಿದರು.

ಮುಂಬರುವ ಚುನಾವಣೆಯಲ್ಲಿ ವಾಮಮಾರ್ಗದಲ್ಲಿ ಗೆಲ್ಲುವ ಸಲುವಾಗಿ ನ್ಯಾಯಾಧೀಶರನ್ನು ಹೊರಗಿಟ್ಟು ತಮಗೆ ಬೇಕಾದ ಮುಖ್ಯ ಚುನಾವಣಾ ಆಯುಕ್ತರನ್ನು ನೇಮಕ ಮಾಡಿಕೊಳ್ಳವ ಹುನ್ನಾರ ನಡೆಸುತ್ತಿದೆ ಎಂದು ದೂರಿದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನ್ಯಾಯಾಂಗದ ಮೇಲೆ ಹಲ್ಲೆ ನಡೆಯುತ್ತಿದೆ, ಅನೇಕ ಪ್ರಕರಣಗಳಲ್ಲಿ ವಿಚಾರಣೆ ನಡೆಸಲು ನ್ಯಾಯಾಧೀಶರು ಹಿಂದೆ ಸರಿಯುತ್ತಿದ್ದಾರೆ ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದ್ದು ಇತ್ತೀಚೆಗೆ ನ್ಯಾಯಾಲಯ ಕೇಂದ್ರ ಸರ್ಕಾರದ ನಡುವಳಿಕೆಗಳ ಮೇಲೆ ಚಾಟಿ ಬೀಸಿರುವ ಪ್ರಸಂಗವು ನಡೆಯುತ್ತಿದೆ ಎಂದರು.

ಮುಖ್ಯ ಚುನಾವಣಾ ಆಯುಕ್ತರ ನೇಮಕ ಮಾಡಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಒಳಗೊಂಡ ಪ್ರಧಾನಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರ ಸಮತಿಯಲ್ಲೇ ತೀರ್ಮಾನ ಮಾಡಬೇಕೆಂದು ಸಂವಿಧಾನ ಹೇಳುತ್ತದೆ ಆದರೆ ನ್ಯಾಯಾಧೀಶರು ಸಮಿತಿಯಲ್ಲಿದ್ದರೆ ತಮಗೆ ಇ? ಬಂದವರನ್ನು ನೇಮಕ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ನ್ಯಾಯಾಧೀಶರನ್ನು ಹೊರಗಿಟ್ಟು ಪ್ರಧಾನಮಂತ್ರಿಯವರು ಮುಖ್ಯ ಆಯುಕ್ತರನ್ನು ನೇಮಕ ಮಾಡಿಕೊಳ್ಳುವ ಪ್ರಯತ್ನಕ್ಕೆ ಕೈ ಹಾಕಿರುವ ವಿರುದ್ಧ ಈ ಪ್ರತಿಭಟನೆ ನಡೆಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ಮಾಜಿ ಅಧ್ಯಕ್ಷ ಡಾ|| ಡಿ.ಎಲ್.ವಿಜಯಕುಮಾರ್ ಮಾತನಾಡಿ ಮುಖ್ಯ ಚುನಾವಣಾ ಆಯುಕ್ತರ ಹುದ್ದೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಹುದ್ದೆಗೆ ಸಮಾನವಾದ ಪವಿತ್ರ ಸ್ಥಾನವಾಗಿದೆ ಟಿ.ಎನ್. ಶೇಷನ್‌ರವರು ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಸಂದರ್ಭದಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ಚಾಟಿ ಬೀಸಿ ಸುಧಾರಣೆ ತಂದಿದ್ದರು ಆದರೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಂಬರುವ ಚುನಾವಣೆಯಲ್ಲಿ ಹಿನ್ನಡೆ ಆಗುವ ಸೂಚನೆಗಳು ಕಂಡುಬರುತ್ತಿರುವುದರಿಂದ ವಾಮಮಾರ್ಗದಲ್ಲಿ ಗೆಲ್ಲುವ ತಮಗೆ ಬೇಕಾದ ಕೈಗೊಂಬೆಯಾಗಿ ಕೆಲಸ ಮಾಡುವ ಚುನಾವಣಾ ಆಯುಕ್ತರನ್ನು ನೇಮಕ ಮಾಡಿಕೊಳ್ಳಲು ನ್ಯಾಯಾಧೀಶರನ್ನು ಹೊರಗಿಡುವ ಪ್ರಯತ್ನ ನಡೆಸಿದ್ದು ಇದಕ್ಕೆ ಆಸ್ಪದ ನೀಡಬಾರದೆಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳಾದ ಕೆ ಮಹಮದ್, ಹಿರೇಮಗಳೂರು ರಾಮಚಂದ್ರ, ಸೈಯದ್ ಹನೀಫ್, ನಯಾಜ್ ಅಹಮದ್, ಶಿವರಾಮ್, ಕೆ.ಭರತ್, ಪ್ರಸಾದ್‌ಅಮೀನ್ ಮತ್ತಿತರರು ಭಾಗವಹಿಸಿದ್ದರು

Protest by District Congress against Central Govt

About Author

Leave a Reply

Your email address will not be published. Required fields are marked *

You may have missed