September 16, 2024

ಕರ್ನಾಟಕದಾದ್ಯಂತ ಪ್ರತಿ ಬ್ಲಾಕ್ ಮಟ್ಟದಲ್ಲಿ ಸಾಮಾಜಿಕ ನ್ಯಾಯ ಘಟಕಗಳ ರಚನೆ

0
ಕೆ.ಪಿ.ಸಿ.ಸಿ ಸಾಮಾಜಿಕ ನ್ಯಾಯ ಘಟಕದ ಅಧ್ಯಕ್ಷ ಸಿ.ಕೆ ದ್ವಾರಕಾನಾಥ್

ಕೆ.ಪಿ.ಸಿ.ಸಿ ಸಾಮಾಜಿಕ ನ್ಯಾಯ ಘಟಕದ ಅಧ್ಯಕ್ಷ ಸಿ.ಕೆ ದ್ವಾರಕಾನಾಥ್

ಚಿಕ್ಕಮಗಳೂರು: ಕರ್ನಾಟಕದಾದ್ಯಂತ ಪ್ರತಿ ಬ್ಲಾಕ್ ಮಟ್ಟದಲ್ಲಿ ಸಾಮಾಜಿಕ ನ್ಯಾಯ ಘಟಕಗಳನ್ನು ರಚಿಸಲಾಗುತ್ತಿದೆ ಎಂದು ರಾಜ್ಯ ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷರು ಆಗಿರುವ ಕೆ.ಪಿ.ಸಿ.ಸಿ ಸಾಮಾಜಿಕ ನ್ಯಾಯ ಘಟಕದ ಅಧ್ಯಕ್ಷ ಸಿ.ಕೆ ದ್ವಾರಕಾನಾಥ್ ತಿಳಿಸಿದರು.

ರಾಜ್ಯಾದ್ಯಂತ ಪ್ರವಾಸ ಕೈಗೊಂಡಿರುವ ಅವರು ಇಂದು ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಗರದ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯಾದಾದ್ಯಂತ ಸಾಮಾಜಿಕ ನ್ಯಾಯ ಸಮಿತಿಯನ್ನು ರಚನೆ ಮಾಡಲಿದ್ದು, ಈಗಾಗಲೇ ನಾಲ್ಕೈದು ಜಿಲ್ಲೆಗಳಲ್ಲಿ ಸಮಿತಿಗಳನ್ನು ರಚಿಸಿದ್ದು ಮುಂದಿನ ೪೫ ದಿನಗಳಲ್ಲಿ ಸಂಪೂರ್ಣವಾಗಿ ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಸಮಿತಿಗಳನ್ನು ರಚನೆ ಮಾಡಲಾಗುವುದೆಂದು ಹೇಳಿದರು.

ದೇಶದಲ್ಲಿ ಕಳೆದ ೮-೧೦ ವ?ಗಳಿಂದ ತಳ ಸಮುದಾಯದಲ್ಲಿ ಬರುವ ಆದಿವಾಸಿಗಳು, ದಲಿತರು ಅತ್ಯಂತ ಹಿಂದುಳಿದವರು ಹಾಗೂ ಸ್ತ್ರೀಯರ ಮೇಲೆ ದೌರ್ಜನ್ಯಗಳು ಹೆಚ್ಚಾಗಿ ಸಾಮಾಜಿಕವಾಗಿ ಸಮತೋಲನವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಸಂವಿಧಾನದ ಆಶಯದಡಿ ತಳ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವುದು ಅನಿವಾರ್ಯವಾಗಿದೆ ಎಂದರು.

ಸಂವಿಧಾನದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿದೆ ಈಗಿನ ಪರಿಸ್ಥಿತಿಯಲ್ಲಿ ಸಂವಿಧಾನ ರಕ್ಷಿಸುವುದು ಅತಿ ಮುಖ್ಯವಾಗಿದ್ದು ಸಂವಿಧಾನವೇ ನಮ್ಮ ಧರ್ಮ ಗ್ರಂಥವಾಗಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಡಿ ಸಾಮಾಜಿಕ ನ್ಯಾಯ ಒದಗಿಸಿ ತಳ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಬದ್ಧವಾಗಿದೆ ಎಂದರು.

ಕಾಂಗ್ರೆಸ್ ಪಕ್ಷದ ಬದ್ಧತೆಗೆ ಅನುಸಾರವಾಗಿ ರಾಜ್ಯಮಟ್ಟದಲ್ಲಿ ಸಾಮಾಜಿಕ ನ್ಯಾಯ ಸಮಿತಿಯನ್ನು ರಚನೆ ಮಾಡಲಾಗಿದ್ದು ಜಿಲ್ಲಾ, ತಾಲ್ಲೂಕು, ಬ್ಲಾಕ್ ಮಟ್ಟದವರೆಗೆ ಸಾಮಾಜಿಕ ನ್ಯಾಯ ಸಮಿತಿಗಳನ್ನು ರಚಿಸಲು ಕಾರ್ಯಕ್ರಮ ಹಾಕಿಕೊಂಡಿದ್ದು, ಇಂದು ಚಿಕ್ಕಮಗಳೂರು ಜಿಲ್ಲಾಮಟ್ಟದಸಮಿತಿಯನ್ನುರಚಿಸಲಾಗುವುದೆಂದು ಹೇಳಿದರು.

ತಮ್ಮ ಸಮಿತಿಯ ಪದಾಧಿಕಾರಿಗಳೊಂದಿಗೆ ಅತ್ಯಂತ ತಳ ಸಮುದಾಯದ ಜನರು ವಾಸಿಸುವ ಸ್ಥಳಗಳಿಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಅತ್ಯಂತ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕವಾಗಿ ಪ್ರಾತಿನಿಧ್ಯ ನೀಡುವ ಪ್ರಯತ್ನ ನಡೆಸಿರುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ನ್ಯಾಯ ಸಮಿತಿ ಸದಸ್ಯರುಗಳಾದ ಚಮನ್ ಪ್ರಸಾದ್, ಪದ್ಮಾ.ವಿ, ನಾಗರಾಜ್, ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಡಿ.ಸಿ ಪುಟ್ಟೇಗೌಡ, ಜಿಲ್ಲಾ ಕಾಂಗ್ರೆಸ್ ವಕ್ತಾರ ರೂಬಿನ್ ಮೊಸಸ್, ಈರಣ್ಣ ಮತ್ತಿತರರಿದ್ದರು.

Formation of social justice units at each block level

About Author

Leave a Reply

Your email address will not be published. Required fields are marked *