September 16, 2024

ವಿದ್ಯಾರ್ಥಿಗಳಿಗೆ ಕ್ರೀಡೆಯು ಅವಶ್ಯಕವಾಗಿದ್ದು ಅದರಿಂದ ಆತ್ಮವಿಶ್ವಾಸ, ಆತ್ಮಸ್ಥೈರ್ಯ ಹೆಚ್ಚುತ್ತದೆ

0
ವಸ್ತಾರೆ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟನೆ

ವಸ್ತಾರೆ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟನೆ

ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಕ್ರೀಡೆಯು ಅವಶ್ಯಕವಾಗಿದ್ದು ಅದರಿಂದ ಆತ್ಮವಿಶ್ವಾಸ, ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಉದಯ್ ಕುಮಾರ್ ತಿಳಿಸಿದರು.

ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಆಟದ ಮೈದಾನದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ಕೆಸರಿಕೆ ಇವರ ಸಹಯೋಗದೊಂದಿಗೆ ಆಯೋಜನೆ ಮಾಡಲಾದ ವಸ್ತಾರೆ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಿಂದ ಜೀವನದಲ್ಲಿಎದುರಾಗುವ  ಸಮಸ್ಯೆಗಳು ಮತ್ತು ಸ್ಪರ್ಧೆಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಸೋಲು-ಗೆಲುವು ಆದಾಗ ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ಮುಂದಿನ ಯೋಜನೆ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ಮಾತನಾಡಿ ಕ್ರೀಡೆಗಳಲ್ಲಿ ಪರಿಣಿತರಾದ ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ಕ್ರೀಡಾಕೂಟ ಯಶಸ್ವಿಯಾಗಿ ನೆರೆವೇರಲಿ ಹಾಗೂ ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ನಿಷ್ಪಕ್ಷವಾದ ನ್ಯಾಯ ಸಿಗಲಿ, ಮುಂದಿನ ದಿನಗಳಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕ್ರೀಡಾಪಟುಗಳಾಗಿ ಹೊರಹೊಮ್ಮುವುದರ ಮೂಲಕ ರಾಜ್ಯಕ್ಕೆ, ತಂದೆ-ತಾಯಿ ಮತ್ತು ಶಾಲೆಗೆ ಕೀರ್ತಿ ತರುವಂತಾಗಲೆಂದು ಶುಭ ಹಾರೈಸಿದರು.

ಶಿಕ್ಷಣ ಸಂಯೋಜಕ ವೀರೇಶ್‌ಕೌಲಗಿ ಮಾತನಾಡಿ ಈ ಬಾರಿ ಮೂರು ಹಂತದ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದು, ೨೪ ರಂದು ಮೈಲಿಮನೆಯಲ್ಲಿ ಬಸವಕುಮಾರ್ ರವರ ನೇತೃತ್ವದಲ್ಲಿ ನಡೆದ ವಾಲಿಬಾಲ್‌ನಲ್ಲಿ ತಳಿಹಳ್ಳ ಶಾಲೆ ಪ್ರಥಮ ಬಹುಮಾನವನ್ನು ಪಡೆದು ಹೋಬಳಿಗೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ ಎಂದರು.

ಕಳೆದ ಎರಡು ವಾರಗಳಿಂದ ಶ್ರಮವಹಿಸಿ ಕ್ರೀಡಾಕೂಟದ ಸಿದ್ಧತೆಗಳನ್ನು ಮಾಡಿಕೊಳ್ಳುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜನೆ ಮಾಡಿದ ಕೆಸರಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಅಧ್ಯಕ್ಷರು ಮತ್ತು ಅವರ ತಂಡಕ್ಕೆ ಅಭಿನಂಧನೆಗಳನ್ನು ತಿಳಿಸಿದರು, ಇಂದಿನ ಕ್ರೀಡಾಕೂಟ ಯಶಸ್ವಿಯಾಗಲಿ ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಯಶಸ್ಸನ್ನು ಗಳಿಸಲೆಂದು ಶುಭ ಹಾರೈಸಿದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ ಮಾತನಾಡಿ ವಸ್ತಾರೆ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಕೆಸರಿಕೆ ಶಾಲೆ ಆಯೋಜನೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಕ್ರೇಡೆಯಲ್ಲಿ ಸ್ಪರ್ಧಾತ್ಮಕವಾಗಿ ಭಾಗವಹಿಸಬೇಕು, ಸೋಲು-ಗೆಲುವು ಮುಖ್ಯವಲ್ಲ, ಗೆದ್ದವರು ತಾಲ್ಲೂಕು ಮಟ್ಟದಲ್ಲಿ ಭಾಗವಹಿಸಿ ಶಾಲೆ ಮತ್ತು ಊರಿಗೆ ಕೀರ್ತಿ ತರಬೇಕೆಂದು ತಿಳಿಸಿದರು.

ವಕೀಲ ಅನಿಲ್‌ಕುಮಾರ್ ಮಾತನಾಡಿ ವಿದ್ಯಾರ್ಥಿಗಳಿಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಲು ಉತ್ತಮ ಅವಕಾಶಗಳಿವೆ, ಚಂದ್ರಯಾನ ೩ರ ಉಡಾವಣೆಯಲ್ಲಿ ವಿಜ್ಞಾನಿಗಳೆಲ್ಲರು ಕನ್ನಡ ಶಾಲೆಯಲ್ಲಿ ವಿದ್ಯಾಭ್ಯಾಸಮಾಡಿ ಇಂದು ಸಾಧನೆ ಮಾಡಿದ್ದಾರೆ, ನೀವು ಅವರಂತೆ ಆಗಬೇಕೆಂದು ತಿಳಿಸಿದರು.

ಈ ಸಂದರ್ಭದಲಿ ಕ್ಷೇತ್ರ ಸಮನ್ವಯ ಅಧಿಕಾರಿ ನಾಗರಾಜ್, ತಾಲ್ಲೂಕು ದೈಹಿಕ ಪರಿವೀಕ್ಷಕ ಪರಮೇಶ್, ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘ ಪ್ರಧಾನ ಕಾರ್ಯದರ್ಶಿ ಅಜ್ಜಯ್ಯ, ಸಿ.ಆರ್.ಪಿ ಬಸವರಾಜ್, ಚಂದ್ರಕಲಾ, ಗ್ರಾಮಸ್ಥರಾದ ಸುಧೀರ್, ಕೆ.ಸಿ.ರವಿ, ಲಕ್ಷ್ಮೀ, ಕೆಸರಿಕೆ ಶಾಲೆ ಮುಖ್ಯ ಶಿಕ್ಷಕ ಚಂದ್ರಯ್ಯ, ವೆಂಕಟೇಶ್ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಸುನೀಲ್ ಸ್ವಾಗತಿಸಿ ವಂದಿಸಿದರು.

Inauguration of Vastare Hobli Level Senior Primary Schools Sports

 

About Author

Leave a Reply

Your email address will not be published. Required fields are marked *