September 20, 2024

ಜಾತ್ಯಾತೀತ ಜನತಾದಳದ ರಾಜ್ಯಮಟ್ಟದ ಕೋರ್ ಕಮಿಟಿ ತೀರ್ಮಾನಕ್ಕೆ ಸಂಪೂರ್ಣ ಬೆಂಬಲ

0
ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್ ಪತ್ರಿಕಾಗೋಷ್ಠಿ

ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ಜಾತ್ಯಾತೀತ ಜನತಾದಳದ ರಾಜ್ಯಮಟ್ಟದ ಕೋರ್ ಕಮಿಟಿ ತೀರ್ಮಾನಕ್ಕೆ ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಿ ಜಿಲ್ಲಾ ಸಮಿತಿ ನಿರ್ಣಯ ಕೈಗೊಂಡಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್ ತಿಳಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದಿ:೧೪-೯-೨೩ ರಂದು ಪಕ್ಷದ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ ದೇವೇಗೌಡರು ಜಿಲ್ಲಾ ಸಮಿತಿಗೆ ಪತ್ರ ಬರೆದು ಅಭಿಪ್ರಾಯ ಕೇಳಿದ ಮೇರೆಗೆ ಜಿಲ್ಲಾ ಸಮಿತಿಯ ಪಕ್ಷದ ಮುಖಂಡರುಗಳು, ಮಾಜಿ ಮತ್ತು ಹಾಲಿ ಜನಪ್ರತಿನಿಧಿಗಳು, ವಿವಿಧ ಘಟಕಗಳ ಅಧ್ಯಕ್ಷರುಗಳು ಕ್ಷೇತ್ರ ಸಮಿತಿ ಅಧ್ಯಕ್ಷರುಗಳೊಂದಿಗೆ ಚರ್ಚೆ ನಡೆಸಿ ರಾಜ್ಯ ಕೋರ್ ಕಮಿಟಿ ತೀರ್ಮಾನಕ್ಕೆ ಸರ್ವಾನುಮತದ ಬೆಂಬಲ ಇರುವುದಾಗಿ ರಾಜ್ಯ ಸಮಿತಿಗೆ ಕಳಿಸಿಕೊಡಲಾಗಿದೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ಸೇರಿದಂತೆ ರಾಜ್ಯ ಸಮಿತಿಯಲ್ಲಿ ತೆಗೆದುಕೊಳ್ಳುವ ವರಿ?ರ ತೀರ್ಮಾನಕ್ಕೆ ಅಂತಿಮವಾಗಿದ್ದು, ರಾಜ್ಯ ಸಮಿತಿ ತೀರ್ಮಾನವನ್ನು ಜಿಲ್ಲಾ ಘಟಕ ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬಯಲು ಸೀಮೆ ಭಾಗದಲ್ಲಿ ಎಲ್ಲಾ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ, ಮಲೆನಾಡು ಭಾಗದಲ್ಲಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಾದ ಕಾಫಿ, ಮೆಣಸು, ಅಡಿಕೆ, ಬೆಳೆಗಳು ಸಂಪೂರ್ಣ ನಾಶವಾಗಿದೆ ಎಂದರು.

ಇಂತಹ ಪರಿಸ್ಥಿತಿಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುವ ಸಂಸದೆ ಶೋಭಾ ಕರಂದ್ಲಾಜೆ ಅವರು ಹಾನಿಯಾದ ಪ್ರದೇಶಗಳಿಗೆ ಭೇಟಿನೀಡಿ ಪರಿಶೀಲನೆ ನಡೆಸದಿರುವುದು ವಿ?ದನೀಯ ಎಂದು ಹೇಳಿದರು.

ಮೂಡಿಗೆರೆ ಮತ್ತಿತರೆ ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ರೈತರು ಕಂಗಾಲಾಗಿದ್ದಾರೆ, ಕಾಡಾನೆ ಹಾವಳಿ ತಡೆಗೆ ಶಾಶ್ವತ ಯೋಜನೆಯನ್ನು ರೂಪಿಸಿ ಹಾನಿಗೊಳಗಾದ ರೈತರಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು.

ಮಳೆ ಕೊರತೆಯಿಂದ ರೈತರು ಅತ್ಯಂತ ಸಂಕ?ದಲ್ಲಿದ್ದು, ಜಿಲ್ಲೆಯ ಐದು ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋ?ಣೆ ಮಾಡಿ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಒತ್ತುವರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಲ್ಲಾ ಬೆಳೆಗಾರರನ್ನು ಭೂಗಳ್ಳವರೆಂದು ಬಿಂಬಿಸಲಾಗುತ್ತಿದೆ, ಇದೀಗ ನಡೆದಿರುವ ತನಿಖೆಯಲ್ಲಿ ನಿಜವಾದ ಭೂಗಳ್ಳರಿಗೆ ಕ್ರಮ ಕೈಗೊಳ್ಳಲಿ. ಅದೇ ರೀತಿ ಅರ್ಹತೆ ಇರುವ ಬೆಳಗಾರರಿಗೆ ಫಾರಂ ೫೩, ೫೭ ರಡಿ ಮಂಜೂರಾತಿ ನೀಡುವಂತೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ಇನ್ನೋರ್ವ ಪ್ರಧಾನ ಕಾರ್ಯದರ್ಶಿ ಹೆಚ್.ವಿ ಲಕ್ಷ್ಮಣಗೌಡ, ಮುಖಂಡರಾದ ಶ್ರೀಮತಿ ಶ್ರೀದೇವಿ ಉಪಸ್ಥಿತರಿದ್ದರು.

JDS district president Ranjan Ajithkumar press conference

About Author

Leave a Reply

Your email address will not be published. Required fields are marked *