September 20, 2024

ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರ ವಿಜಯೋತ್ಸವ

0
ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ

ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ

ಚಿಕ್ಕಮಗಳೂರು:  ಮಹಿಳೆಯರಿಗೆ ಶೇ.೩೩ ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ಲೋಕಸಭೆ ಅನುಮೋದಿಸಿರುವ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು.

ಬಿಜೆಪಿ ಕಚೇರಿ ಪಾಂಚಜನ್ಯದಿಂದ ಆಜಾದ್ ಪಾರ್ಕ್ ಸರ್ಕಲ್ ವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತೆಯರು ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಜೈಕಾರ ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ವೇಳೆ ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ರತ್ನಾಕರ ಶೆಟ್ಟಿ ಮಾತನಾಡಿ, ೨೭ ವರ್ಷದ ಹೋರಾಟಕ್ಕೆ ಇಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಯ ದೊರಕಿಸಿಕೊಟ್ಟಿದೆ. ಶೇ.೩೩ ರಷ್ಟು ಮೀಸಲಾತಿ ಕಲ್ಪಿಸಿರುವುದು ಇಡೀ ದೇಶದ ಮಹಿಳೆಯರು ಹೆಮ್ಮೆ ಪಡುವ ವಿಷಯ ಎಂದರು.

ಕೇಂದ್ರ ಸಂಪುಟದಲ್ಲೂ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನಗಳನ್ನು ನೀಡಲಾಗಿದೆ. ಅವರು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿರುವುದನ್ನು ಗಮನಿಸಿರುವ ಮೋದಿ ಅವರು ಮಹಿಳೆಯರಿಗೆ ಹೆಚ್ಚು ಮೀಸಲಾತಿ ಸಿಕ್ಕಲ್ಲಿ ದೇಶವನ್ನೂ ಉತ್ತಮವಾಗಿ ಮುನ್ನಡೆಸುತ್ತಾರೆ ಎನ್ನುವುದನ್ನು ಮನಗಂಡು ಮೀಸಲಾತಿ ಮಸೂದೆ ಮಂಡಿಸಿ ಅನುಮೋದನೆ ಪಡೆದಿದ್ದಾರೆ ಎಂದು ಹೇಳಿದರು.

ಮೋದಿ ಅವರೊಂದಿಗೆ ಕೈಜೋಡಿಸಿ ದೇಶವನ್ನು ಮುನ್ನಡೆಸುವ ನಿಟ್ಟಿನಲ್ಲಿ ಶ್ರಮಿಸುತ್ತೇವೆ ಎಂದು ಭರವಸೆ ನೀಡುತ್ತೇವೆ. ಇಡೀ ದೇಶದ ಮಹಿಳೆಯರ ಪರವಾಗಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರೆ ಕವಿತಾ ಶೇಖರ್ ಮಾತನಾಡಿ, ಮಹಿಳೆಯರಿಗೆ ಶೇ.೩೩ ಮೀಸಲಾತಿ ನೀಡುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ. ಮಹಿಳೆ ಮನೆಯನ್ನು ಸಂವೃದ್ಧಿಯಾಗಿ ನಿರ್ವಸಿದ ರೀತಿ ದೇಶವನ್ನೂ ಮುನ್ನಡೆಸಬಲ್ಲಳು ಎನ್ನುವ ಅಚಲ ನಂಬಿಕೆ ಮೋದಿ ಅವರದ್ದಾಗಿದೆ ಎಂದರು.

ಇಡೀ ದೇಶದ ಮಹಿಳೆಯರು ಇದು ಹೆಮ್ಮೆ ಪಡುವ ವಿಷಯವಾಗಿದೆ ನರೇಂದ್ರ ಮೋದಿ ಅವರಿಗೆ ಎಲ್ಲಾ ಹೆಣ್ಣು ಮಕ್ಕಳ ಪರವಾಗಿ ವಿಶೇಷ ಅಭಿನಂದನೆಯನ್ನು ತಿಳಿಸುತ್ತೇವೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಮಾತನಾಡಿ, ನಾರೀಶಕ್ತಿ ಹೆಸರಲ್ಲಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿರುವುದು ಇಡೀ ದೇಶದ ಮಹಿಳೆಯರು ಸಂಭ್ರಮಸಿಸುವ ವಿಚಾರವಾಗಿದೆ ಎಂದರು.

ಹಲವು ಸರ್ಕಾರಗಳು ದೇಶವನ್ನು ಆಳಿವೆ. ಇಂದಿರಾಗಾಂಧಿ ಅವರು ಸತಃ ಮಹಿಳೆಯಾಗಿದ್ದರೂ ಈ ರೀತಿಯಾದ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿರಲಿಲ್ಲ. ಆದರೆ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಆಲೋಚಿಸಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಕಳೆದ ಹಲವು ದಶಕಗಳಿಂದ ಆಗದ ಕಾರ್ಯವನ್ನು ನರೇಂದ್ರ ಮೋದಿ ಅವರು ಸಾಕಾರಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆಯರಿಗೆ ರಾಜಕೀಯವಾಗಿ ಬಲ ತುಂಬುವಂತಹ ಮಹತ್ತರವಾದ ಕೆಲಸವಾಗಿದೆ ಎಂದು ಹೇಳಿದರು.

ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಿಂತ ಅನಿಲ್ ಕುಮಾರ್, ಕಾರ್ಯದರ್ಶಿ ಲೀಲಾ, ಜಿಲ್ಲಾ ಉಪಾಧ್ಯಕ್ಷೆ ಪುಷ್ಪಾ ಮೋಹನ್, ನಗರಸಭಾ ಸದಸ್ಯೆ ರೂಪಾ, ಸುಜಾತ, ಅನು ಇತರರು ಭಾಗವಹಿಸಿದ್ದರು.

BJP Mahila Morcha workers celebrate victory in the city

About Author

Leave a Reply

Your email address will not be published. Required fields are marked *