September 16, 2024

ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ಮೂರು ಕೆ ಪಿ ಎಸ್ ಶಾಲೆ

0
ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಗುಂಪು ಆಟದ ಕ್ರೀಡಾಕೂಟ

ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಗುಂಪು ಆಟದ ಕ್ರೀಡಾಕೂಟ

ತರೀಕೆರೆ : ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ತಲಾ ಮೂರು ಕೆ ಪಿ ಎಸ್ ಶಾಲೆಗಳನ್ನು ಮಂಜೂರು  ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು

ತರೀಕೆರೆ ತಾಲೂಕಿನ ಬಾವಿಕೆರೆಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಗುಂಪು ಆಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಿಯಾಗಿ ಓದಿ ಉತ್ತೀರ್ಣರಾಗಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ತಾವು ಈ ಬಾರಿ ಒಂದೇ  ಕೆಪಿಎಸ್ ಶಾಲೆಗಳನ್ನು ತೆರೆಯುವುದರಿಂದ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚುತ್ತದೆ ಜೊತೆಗೆ ಶಿಕ್ಷಕರ ಕೊರತೆ ನೀಗುತ್ತದೆ ಎಂದು ತಿಳಿಸಿದರು

ವರ್ಷದಲ್ಲಿ ಮೂರು ಬಾರಿ ಬೋರ್ಡ್ ಎಕ್ಸಾಮ್ ನಡೆಸಿರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು, ತಾವು ಒಂದೇ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಎಕ್ಸಾಮ್ ನಡೆಸಿದ್ದರಿಂದಾಗಿ ಫೇಲಾದ ವಿದ್ಯಾರ್ಥಿಗಳಿಗೆ ಒಂದು ವರ್ಷ ವೇಸ್ಟ್ ಆಗುವುದು ತಪ್ಪಿತು ರಾಜ್ಯದ 42 ಸಾವಿರ ವಿದ್ಯಾರ್ಥಿಗಳಿಗೆ ಆ ವರ್ಷದಲ್ಲೇ ಮತ್ತೆ ಪರೀಕ್ಷೆ ಎದುರಿಸಿ  ಪಾಸ್ ಆಗಲು ಸಾಧ್ಯವಾಯಿತು ಎಂದರು

ಒಂದೇ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಎಕ್ಸಾಮ್ ನಡೆಸಿರುವುದು ದೇಶದ ಇತಿಹಾಸದಲ್ಲಿ ಇದೇ ಪ್ರಥಮವಾಗಿದೆ ಎಂದ ಅವರು ಈ ಎಕ್ಸಾಮ್ ಗಳಲ್ಲಿ ರಾಜ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆದಿದ್ದು ಅದರಲ್ಲಿ 42 ಸಾವಿರ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಆ ಎಲ್ಲಾ ವಿದ್ಯಾರ್ಥಿಗಳು ಇದೇ ವರ್ಷ ಕಾಲೇಜಿಗೆ ದಾಖಲಾಗುತ್ತಾರೆ ಎಂದು ತಿಳಿಸಿದರು

ಮುಂದಿನ ವರ್ಷ ಎಸ್ ಎಸ್ ಎಲ್ ಸಿ ಗೂ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಎಕ್ಸಾಮ್ ನಡೆಸಲಾಗುವುದು ಎಂದು ಹೇಳಿದರು, ಈ ಹಿಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಮೊಟ್ಟೆ ನೀಡಲಾಗುತ್ತಿತ್ತು  ತಾವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಕ್ಕಳ ಪರಿಸ್ಥಿತಿಯನ್ನು ಮನವರಿಕೆ ಮಾಡಿ ಈಗ ಎರಡು ಮೊಟ್ಟೆ ನೀಡುವ ಕೆಲಸ ಆರಂಭಿಸಿದ್ದೇವೆ ಎಂದರು

ಮುಂದಿನ ವರ್ಷದಿಂದ ಮಕ್ಕಳ ಶಾಲಾ ಬ್ಯಾಗಿನ ಹೊರೆಯನ್ನು ಅರ್ಧದಷ್ಟು ಕಡಿಮೆ ಮಾಡಲಾಗುವುದು ಆ ದಿನಕ್ಕೆ ಅಗತ್ಯವಿರುವ ಪುಸ್ತಕಗಳನ್ನು ಮಾತ್ರ ತೆಗೆದುಕೊಂಡು ಹೋಗಲು ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು

ಶಿಕ್ಷಣ ಇಲಾಖೆ ಎದುರುಸುತ್ತಿರುವ ಸಮಸ್ಯೆಗಳು ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಲ್ಲವನ್ನೂ ಬಗೆಹರಿಸಲು ಸಾಧ್ಯವಾಗದಿದ್ದರೂ ಕೆಲವನ್ನಾದರೂ ಖಂಡಿತ ಪರಿಹರಿಸಲಾಗುವುದು ಎಂದ ಅವರು ಆ ಕಾರ್ಯಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ತಮ್ಮೊಂದಿಗೆ ಸಹಕರಿಸಬೇಕು

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಶ್ರೀನಿವಾಸ್ ತಮ್ಮ ಮನವಿಗೆ ಸ್ಪಂದಿಸಿ ಕ್ರೀಡಾಕೂಟಕ್ಕೆ ಆಗಮಿಸಿದ ಸಚಿವರು ಹಾಗೂ ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು

ಮಾಜಿ ಸಂಸದ ಚಂದ್ರಪ್ಪ ಮಾತನಾಡಿದರು. ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜು, ಸಾವ೯ಜನಿಕ ಶಿಕ್ಷಣ ಇಲಾಖೆ ಉಪನಿದೇ೯ಶಕ ರಂಗನಾಥಸ್ವಾಮಿ, ಮುಂತಾದವರು ಕಾಯ೯ಕ್ರಮದಲ್ಲಿ ಉಪಸ್ಥಿತರಿದ್ದರು.

District level senior primary schools group play sports event

About Author

Leave a Reply

Your email address will not be published. Required fields are marked *