September 20, 2024

ದತ್ತ ಮಾಲೆ, ದತ್ತ ಜಯಂತಿ ಕಾರ್ಯಕ್ರಮ-ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

0
ದತ್ತ ಮಾಲೆ ಮತ್ತು ದತ್ತ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ

ದತ್ತ ಮಾಲೆ ಮತ್ತು ದತ್ತ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ

ಚಿಕ್ಕಮಗಳೂರು: ದತ್ತ ಮಾಲೆ ಹಾಗೂ ದತ್ತ ಜಯಂತಿ ಕಾರ್ಯಕ್ರಮ ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ೨೦೨೩ನೇ ಸಾಲಿನ ದತ್ತ ಮಾಲೆ ಮತ್ತು ದತ್ತ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯಿಂದ ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕು. ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಸ್ತೆಗಳ ದುರಸ್ಥಿ ಪಡಿಸುವಂತೆ ತಿಳಿಸಿದ ಅವರು ಚಿಕ್ಕಮಗಳೂರು ತಹಸೀಲ್ದಾರ್ ಕಛೇರಿ, ಅಲ್ಲಂಪುರ ಗ್ರಾಮ ಪಂಚಾಯಿತಿ ವತಿಯಿಂದ ಅಲ್ಲಂಪುರ ಹಾಗೂ ಕೈಮರದ ಬಳಿ ಅಗತ್ಯ ಪಾರ್ಕಿಂಗ್, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ, ಮಾಡಬೇಕಲ್ಲದೆ ಜವರಾಯಿ ಬಳಿ ಪೊಲೀಸ್ ಚೆಕ್ ಪೋಸ್ಟ್, ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತಾತ್ಕಾಲಿಕ ಆಸ್ಪತ್ರೆ ತೆರೆದು ಅಗತ್ಯ ವೈದ್ಯರು ಮತ್ತು ಸಿಬ್ಬಂದಿಗಳನ್ನು ನೇಮಿಸಲಬೇಕಲ್ಲದೆ ಆಂಬುಲೆನ್ಸ್‌ಗಳ ವ್ಯವಸ್ಥೆ ಮಾಡಬೇಕು. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಕೆ ಎಸ್ ಆರ್ ಟಿಸಿ, ವಿಭಾಗೀಯ ನಿಯಂತ್ರಣಾಧಿಕಾರಿಗಳು ಅಗತ್ಯ ಬಸ್ ವ್ಯವಸ್ಥೆ, ಕ್ರೇನ್, ನಗರಸಭೆಯಿಂದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.

ನಿರ್ಮಿತಿ ಕೇಂದ್ರದಿಂದ ತಾತ್ಕಾಲಿಕ ಮೊಬೈಲ್ ಶೌಚಾಯಲ, ಕಾರ್ಯಕ್ರಮ ನಡೆಯುವ ದಿನಗಳಲ್ಲಿ ತೆರೆಯುವ ಚೆಕ್ ಪೋಸ್ಟ್‌ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಹೇಳಿದ ಅವರು. ಎರಡು ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಲು ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿ. ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮ್ಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರಡ್ಡಿ, ಉಪವಿಭಾಗಾಧಿಕಾರಿ ರಾಜೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Preparatory meeting of Dutta Male and Dutta Jayanti programme

About Author

Leave a Reply

Your email address will not be published. Required fields are marked *