September 20, 2024

ಅಂಚೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ

0
ಅಂಚೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ

ಅಂಚೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು:  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ೭ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುವಲ್ಲಿ ಮೀನಾಮೇಶ ಎಣಿಸುತ್ತಿರುವುದನ್ನು ಖಂಡಿಸಿ ಇಂದು ನಗರದ ಮುಖ್ಯ ಅಂಚೆ ಕಚೇರಿ ಮುಂದೆ ಒಂದು ದಿನದ ಸಾಂಕೇತಿಕ ಮು?ರವನ್ನು ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ಆಶ್ರಯದಲ್ಲಿ ನಡೆಸಲಾಯಿತು.

ಇಂದು ಬೆಳಗ್ಗೆ ಮುಖ್ಯ ಅಂಚೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಎಲ್ಲಾ ಗ್ರಾಮೀಣ ಅಂಚೆನೌರರು ತಮ್ಮ ಕಚೇರಿಗಳನ್ನು ಬಂದ್ ಮಾಡಿ ಮು?ರದಲ್ಲಿ ಭಾಗವಹಿಸಿದ್ದರು.

೮ ಗಂಟೆಗಳ ಕೆಲಸ ನೀಡುವುದು ಮತ್ತು ಪಿಂಚಣಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಅಂಚೆ ನೌಕರರಿಗೆ ನೀಡುವುದರ ಜೊತೆಗೆ ಸೇವಾ ಹಿರಿತನದ ಆಧಾರದ ಮೇಲೆ ೧೨-೨೪-೩೬ ಸೇವೆ ಸಲ್ಲಿಸಿದ ಜೆಡಿಎಸ್ ನೌಕರರಿಗೆ ವಿಶೇ? ಇಂಕ್ರಿಮೆಂಟ್ ಜಾರಿ ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು.

ವೈಜ್ಞಾನಿಕ ಗುರಿ ನೀಡಿ ಮೇಳಗಳನ್ನು ನಡೆಸುತ್ತಿರುವುದನ್ನು ನಿಲ್ಲಿಸಬೇಕು, ಗುಂಪು ವಿಮೆಯನ್ನು ೫ ಲಕ್ಷ ರೂ ಗಳ ವರೆಗೆ ಹೆಚ್ಚಿಸಬೇಕು. ಅವೈಜ್ಞಾನಿಕ ಗುರಿ ಸಾಧಿಸದಿರುವ ಜಿಡಿಎಸ್ ನೌಕರರಿಗೆ ನೀಡುತ್ತಿರುವ ಕಿರುಕುಳವನ್ನು ತಕ್ಷಣದಿಂದಲೇ ನಿಲ್ಲಿಸಬೇಕೆಂದು ಆಗ್ರಹಿಸಿದರು.

ಜಿಡಿಎಸ್ ಗ್ರ್ಯಾಚುಟಿ ಹಣವನ್ನು ೫ ಲಕ್ಷದವರೆಗೆ ಹೆಚ್ಚಿಸಬೇಕು. ೧೮೦ ದಿನಗಳ ರಜೆ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಜಿಡಿಎಸ್ ಮತ್ತು ಅವರ ಕುಟುಂಬದ ಸದಸ್ಯರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿರುವ ಬೇಡಿಕೆಯು ಸೇರಿದಂತೆ ಈ ಎಲ್ಲಾ ಬೇಡಿಕೆಗಳನ್ನು ಕೂಡಲೇ ಜಾರಿ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ವಿಭಾಗೀಯ ಅಧ್ಯಕ್ಷ ಟಿ.ಸಿ ಚಂದ್ರಪ್ರಕಾಶ್ ಖಜಾಂಚಿ ಭರತ್ ಕಾರ್ಯದರ್ಶಿ.ಟಿ, ಹನುಮಂತಪ್ಪ, ಶಿವಶಂಕರ್, ಹ?, ಗಂಗಾಧರ್, ಮಲ್ಲಿಕಾರ್ಜುನ, ಶೇಶಪ್ಪಗೌq, ವಿರೂಪಾಕ್ಷ ನಿಶಾಂತ್ ಮತ್ತಿತರು ವಹಿಸಿದ್ದರು.

Protest in front of post office

About Author

Leave a Reply

Your email address will not be published. Required fields are marked *