September 20, 2024

ಮೂರು ಹೋಬಳಿ ಬರ ಪಟ್ಟಿಗೆ ಸೇರಿಸಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಿ

0
ಬಿಜೆಪಿ ಜಿಲ್ಲಾ ವಕ್ತಾರ ಟಿ. ರಾಜಶೇಖರ್ ಪತ್ರಿಕಾಗೋಷ್ಠಿ

ಬಿಜೆಪಿ ಜಿಲ್ಲಾ ವಕ್ತಾರ ಟಿ. ರಾಜಶೇಖರ್ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ತಾಲೂಕಿನಲ್ಲಿ ಲಕ್ಯಾ, ಸಖರಾಯಪಟ್ಟಣ, ದೇವನೂರು ಹೋಬಳಿಯನ್ನು ಬರಪಟ್ಟಿಗೆ ಸೇರಿಸಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಬಿಜೆಪಿ ಜಿಲ್ಲಾ ವಕ್ತಾರ ಟಿ. ರಾಜಶೇಖರ್ ಒತ್ತಾಯಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ ಚಿಕ್ಕಮಗಳೂರು ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಸಂಕ?ದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕೆಂದು ಆಗ್ರಹಿಸಿದರು.

ಶೀಘ್ರದಲ್ಲಿ ಈ ಕಾರ್ಯಕ್ರಮಗಳು ಆಗದಿದ್ದರೆ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಸಿದ ಅವರು ಅನಿಯಮಿತ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದನ್ನು ನಿಲ್ಲಿಸದಿದ್ದರೆ ಹಾಗೂ ರೈತರ ಪಂಪ್ ಸೆಟ್‌ಗಳಿಗೆ ನಿರಂತರ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವಂತೆ ಒತ್ತಾಯಿಸಿ ಮೆಸ್ಕಾಂ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಕ್ಷೇತ್ರದ ಜ್ವಲಂತ ಸಮಸ್ಯೆಗಳ ಬಗ್ಗೆ ಶಾಸಕರು ಹೆಚ್ಚು ಗಮನ ಹರಿಸಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸಲಹೆ ನೀಡಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಷೇತ್ರದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ವೈಯಕ್ತಿಕ ಫಲಾನುಭವಿಗಳಿಗೆ ಮಂಜೂರಾಗಿರುವ ವಿವಿಧ ಯೋಜನೆಗಳಿಗೆ ಅನುದಾನ ಮಂಜೂರಾಗಿದ್ದು ಕೆಲವೊಂದು ಕಾಮಗಾರಿಗಳು ಮುಗಿದಿದ್ದು ಇನ್ನುಳಿದ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ನಿರ್ವಹಿಸುವ ಹಂತದಲ್ಲಿ ಇದೆ ಎಂದರು.

ಇದರಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಮಂಜೂರಾಗಿ ಭೂಸೇನೆ ಅಭಿವೃದ್ಧಿ ನಿಗಮದಿಂದ ನಿರ್ವಹಿಸಲ್ಪಡುತ್ತಿರುವ ೮ ಕೋಟಿ ೨೦ ಲಕ್ಷ ರೂ ಅನುದಾನದ ೨೪ ಕಾಮಗಾರಿಗಳು ನಿರ್ವಹಿಸಬೇಕಾಗಿತ್ತು ಚುನಾವಣೆ ನೀತಿ ಸಂಹಿತೆ ಇದ್ದ ಕಾರಣ ಸದರಿ ಕಾಮಗಾರಿಗಳನ್ನು ನಿರ್ವಹಿಸಲು ಸಾಧ್ಯವಾಗಿರುವುದಿಲ್ಲ ಎಂದು ಹೇಳಿದರು.

ಇದಲ್ಲದೇ ಈ ಹಿಂದೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಬಿಸಿಎಂ ಹಾಗೂ ಒಕ್ಕಲಿಗ ಮತ್ತು ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ ೨೦೨೧-೨೨ ಹಾಗೂ ೨೨-೨೩ನೇ ಸಾಲಿನಲ್ಲಿ ೧೦೫ ಫಲಾನುಭವಿಗಳಿಗೆ ವೈಯಕ್ತಿಕ ಗಂಗಾಕಲ್ಯಾಣ ಯೋಜನೆ ಮಂಜೂರಾಗಿತ್ತು ಇದಲ್ಲದೇ ವಿವಿಧ ಇಲಾಖೆಗಳಡಿಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಹಲವಾರು ಕಾಮಗಾರಿಗಳು ಪ್ರಾರಂಭವಾಗಿದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್‌ನ ಶಾಸಕರು ಈ ಹಿಂದಿನ ಎಲ್ಲಾ ಯೋಜನೆಗಳನ್ನು ಹಾಗೂ ವೈಯಕ್ತಿಕ ಫಲಾನುಭವಿಗಳನ್ನು ನಾನೇ ಆಯ್ಕೆ ಮಾಡಿದ್ದು ಹಾಗೂ ಕಾಂಗ್ರೆಸ್ ಸರ್ಕಾರದ ಅನುದಾನ ಅನ್ನುವ ರೀತಿಯಲ್ಲಿ ಕಾಮಗಾರಿಗಳನ್ನು ಅವರದೇ ಪಕ್ಷದ ಕಾರ್ಯಕರ್ತರಿಗೆ ಹಂಚಿಕೆ ಮಾಡಿದ್ದಲ್ಲದೆ ವೈಯಕ್ತಿಕ ಫಲಾನುಭವಿಗಳನ್ನು ತಮ್ಮನ್ನು ಬಂದು ಭೇಟಿ ಮಾಡಿಲ್ಲದೇ ಇದರ ಯೋಜನೆಯನ್ನು ರದ್ದುಗೊಳಿಸುವುದಾಗಿ ಅಧಿಕಾರಿಗಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೂಲಕ ಬೆದರಿಕೆ ಒತ್ತುತ್ತಿದ್ದಾರೆ ಎಂದು ದೂರಿದರು.

ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮಂಜೂರಾಗಿರುವ ಕಾಮಗಾರಿಗಳಿಗೆ ಕಾಂಗ್ರೆಸ್ ಸರ್ಕಾರದ ಲೇಬಲ್ ಹಾಕುವುದನ್ನು ಬಿಟ್ಟು ಸರ್ಕಾರದಿಂದ ಕಾಮಗಾರಿಗಳನ್ನು ಮಂಜೂರು ಮಾಡಿಸುವಂತೆ ಒತ್ತಾಯಿಸಿದರು.

ಇಂತಹ ಕ್ಷುಲ್ಲಕ ರಾಜಕೀಯ ಮಾಡುವುದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರದ ಮೂಲಕ ನೂತನ ಕಾಮಗಾರಿಗಳನ್ನು ಹಾಗೂ ವೈಯಕ್ತಿಕ ಫಲಾನುಭವಿಗಳನ್ನು ಆಯ್ಕೆ ಮಾಡುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿಪಡಿಸುವಂತೆ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಗರ ಬಿಜೆಪಿ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್ ಮಾಜಿನಗರ ಸಭೆ ಅಧ್ಯಕ್ಷರಾದ ಕವಿತಾ ಶೇಖರ್ ಪು?ರಾಜ್ ಆಲ್ದೂರು ಮಂಡಲ ಅಧ್ಯಕ್ಷ ದಿನೇಶ್ ಉಪಸ್ಥಿತರಿದ್ದರು.

BJP district spokesperson T. Rajasekhar press conference

About Author

Leave a Reply

Your email address will not be published. Required fields are marked *