September 16, 2024

ಜಾನಪದ ಪರಿಷತ್ತಿನ ಕಾರ್ಯಕ್ರಮದ ಅನುದಾನಕ್ಕೆ ಮುಖ್ಯಮಂತ್ರಿಗೆ ಮನವಿ

0
ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನ ಶಾಸಕ ಎಚ್.ಡಿ.ತಮ್ಮಯ್ಯ ಉದ್ಘಾಟನೆ

ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನ ಶಾಸಕ ಎಚ್.ಡಿ.ತಮ್ಮಯ್ಯ ಉದ್ಘಾಟನೆ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ನೀಡುವ ರೀತಿ ಕರ್ನಾಟಕ ಜಾನಪದ ಪರಿಷತ್ತಿನ ಕಾರ್ಯಕ್ರಮಗಳಿಗೂ ಅನುದಾನ ನೀಡುವಂತೆ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಲಾಗುವುದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಕುವೆಂಪು ಕಲಾ ಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ ಸದ್ಯದಲ್ಲೇ ತಾವು ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯದಲ್ಲಿ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಜಾನಪದ ಪರಿಷತ್ತಿನ ಕಾರ್ಯಕ್ರಮ ಗಳಿಗೂ ಅನುದಾನ ನೀಡುವಂತೆ ಮನವೊಲಿಸಲಾಗುವುದು ಎಂದು ಭರವಸೆ ನೀಡಿದರು.

ಸಾಹಿತ್ಯ, ಸಂಸ್ಕೃತಿ ಮತ್ತು ಕಲೆ ಉಳಿದಿರುವುದು ಪ್ರಪಂಚದಲ್ಲಿ ಭಾರತದಲ್ಲಿ ಮಾತ್ರ ಅದೇ ರೀತಿ ಜಾನಪದ ಕಲೆ ಉಳಿದಿರುವುದು ನಮ್ಮ ರಾಜ್ಯ ಮತ್ತು ನಮ್ಮ ಜಿಲ್ಲೆ ಯಲ್ಲಿ ಮಾತ್ರ ಎಂದ ಅವರು, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಉಳಿಸುವ ಮಹತ್ತರ ಜವಾಬ್ದಾರಿ ಎಲ್ಲರ ಮೇಲಿದೆ ಎಂ ದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ, ದಾಸಸಾಹಿತ್ಯ, ತತ್ವಪದ ಮತ್ತು ವಚನ ಸಾಹಿ ತ್ಯದ ಅಡಿಯಲ್ಲಿ ಮತ್ತು ಸಂಬಂಧಗಳ ಅಡಿಯಲ್ಲಿ ನಮ್ಮ ಹಿರಿಯರು ಈ ನಾಡ ನ್ನು ಕಟ್ಟಿ ಬೆಳೆಸಿದ್ದಾರೆ. ಆದರೆ, ಇಂದು ತಂದೆ ತಾಯಿ, ಅಕ್ಕ ತಂಗಿ, ಅಣ್ಣ ತಮ್ಮ ಸೇರಿದಂತೆ ಯಾವುದೇ ಸಂಬಂಧಗಳೂ ಉಳಿದಿಲ್ಲ ಎಂದು ವಿಷಾಧಿಸಿದರು.

ಜಾನಪದವನ್ನು ಪುನರುತ್ತಾನಗೊಳಿಸಿ ಶ್ರೀಮಂತಗೊಳಿಸಿದರೆ ನಮ್ಮ ಬದುಕು, ನಮ್ಮ ನಾಡು ಶ್ರೀಮಂತವಾಗುತ್ತದೆ ಹಾಹಾಗಿ ಜಾನಪದವನ್ನು ಶ್ರೀಮಂತಗೊಳಿಸ ಲಾಗಿದೆ. ನಾಡಿನಲ್ಲಿ ಮಾನವೀಯ ಮೌಲ್ಯಗಳು ಉಳಿಯಬೇಕಾದರೆ ನಮ್ಮಲ್ಲಿನ ಸ್ವಾರ್ಥ ತೊಲಗಿ ಸಂಬಂಧಗಳು ಗಟ್ಟಿಯಾಗಬೇಕಾದರೆ ಜಾನಪದವನ್ನು ಶ್ರೀಮಂತ ಗೊಳಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ಬೆಳವಾಡಿ ಪರಮೇಶ್ವರಪ್ಪ ಮಾತನಾಡಿ ರಾಜ್ಯ ಸರ್ಕಾರ ಕಲಾವಿದರ ವಯಸ್ಸನ್ನು ಪರಿಗಣಿಸದೆ ಯುವ ಕಲಾವಿದರಿಗೂ ಮಾಶಾಸನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಜಾನಪದ ಕಲಾವಿದರಿಗೆ ಮಾಶಾಸನ ನೀಡಲು ರಾಜ್ಯ ಸರ್ಕಾರ ೬೦ರ್ಷ ವಯ ಸ್ಸನ್ನು ನಿಗಧಿಗೊಳಿಸಿದೆ. ಇದರಿಂದಾಗಿ ವಯೋವೃದ್ಧ ಕಲಾವಿದರು ಮಾತ್ರ ಕಂಡು ಬರುತ್ತಿದ್ದಾರೆ. ಯುವ ಜನತೆ ಕಲೆ ಕಲಿಯಲು ಆಸಕ್ತಿ ತೋರುತ್ತಿಲ್ಲ ಎಂದು ವಿಷಾ ಧಿಸಿದರು.

ರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನಗಳಿಗೆ ನೀಡುತ್ತಿರುವಂತೆ ರಾಜ್ಯ ಸರ್ಕಾರ ಜಾನಪದ ಸಮ್ಮೇಳನಗಳಿಗೂ ಅನುದಾನವನ್ನು ನೀಡಬೇಕು ಎಂದು ಒತ್ತಾಯಿಸಿದರು. ಈ ಕುರಿತು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಂತೆ ವೇದಿಯಲ್ಲಿದ್ದ ಶಾಸಕರಾದ ಎಚ್.ಡಿ.ತಮ್ಮಯ್ಯ ಮತ್ತು ಎಸ್.ಎಲ್.ಭೋಜೇಗೌಡ ಅವರಿಗೆ ಮನವಿ ಮಾಡಿದರು.

Appeal to Chief Minister for grant of program of Folk Parishad

 

 

About Author

Leave a Reply

Your email address will not be published. Required fields are marked *