September 8, 2024

ಗ್ಯಾರೆಂಟಿ ಅನುಷ್ಠಾನಕ್ಕೆ ತರುವಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವಿಫಲ

0
ಗ್ಯಾರೆಂಟಿ ಅನುಷ್ಠಾನಕ್ಕೆ ತರುವಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವಿಫಲ

ಗ್ಯಾರೆಂಟಿ ಅನುಷ್ಠಾನಕ್ಕೆ ತರುವಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವಿಫಲ

ಚಿಕ್ಕಮಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಚುನಾವಣೆ ಪೂರ್ವ ನೀಡಿದ್ದ ಐದು ಗ್ಯಾರೆಂಟಿಗಳನ್ನು ಅನುಷ್ಠಾನಕ್ಕೆ ತರುವಲ್ಲಿ ವಿಫಲ ವಾಗಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ದೂರಿದರು.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದರೇ ಚುನಾವಣೆ ಪೂರ್ವದಲ್ಲಿ ಅವರು ನೀಡಿದ್ದ ಐದು ಗ್ಯಾರೆಂಟಿಗಳೇ ಕಾರಣ ಆದರೆ, ಅಧಿಕಾರಕ್ಕೆ ಬಂದ ಬಳಿಕ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿಲ್ಲ ಹಾಗೂ ಐದು ಗ್ಯಾರೆಂಟಿಗಳ ಜಾರಿಗೆ ಮುಂದಾಗಿರುವ ಸರ್ಕಾರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ. ಅಭಿವೃದ್ದಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲವೆಂದು ಶಾಸಕರೇ ಆರೋಪಿಸುತ್ತಿದ್ದಾರೆ ಎಂದರು.

ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದಲ್ಲಿ ೨ಕೋಟಿ ೧೩ಲಕ್ಷ ಮಹಿಳೆಯರು ನೋಂದಣಿಯಾಗಿದ್ದಾರೆ. ಮೊದಲ ಕಂತಿನಲ್ಲಿ ೧ಕೋಟಿ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ೨ಸಾವಿರ ರೂ. ನೀಡಲಾಗಿದೆ. ಉಳಿದ ಮಹಿಳೆಯರಿಗೆ ಹಣ ಬ್ಯಾಂಕ್ ಖಾತೆಗೆ ಜಮೆ ಮಾಡಿಲ್ಲ. ೨ನೇ ಕಂತಿನಲ್ಲಿ ೮೦ಲಕ್ಷ ಮಹಿಳೆಯರಿಗೆ ಮಾತ್ರ ಹಣ ಜಮೆ ಮಾಡಲಾಗಿದೆ. ನೀಡಿದ ಭರವಸೆಯಂತೆ ಸಮರ್ಪಕವಾಗಿ ಹಣ ನೀಡಬೇಕು ಎಂದು ಆಗ್ರಹಿಸಿದರು.

ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಮೂರು ಸಾವಿರ ಹಾಗೂ ಡಿಪ್ಲೋಮಾ ಮುಗಿಸಿದ ವಿದ್ಯಾರ್ಥಿಗಳಿಗೆ ಒಂದುವರೆ ಸಾವಿರ ರೂ. ಪ್ರತೀ ತಿಂಗಳು ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಈ ಗ್ಯಾರೆಂಟಿಯನ್ನು ಜಾರಿಗೊಳಿಸಿಲ್ಲ. ಇದರಿಂದ ವಿದ್ಯಾವಂತ ನಿರುದ್ಯೋಗಿಗಳು ಹತಾಶರಾಗಿದ್ದಾರೆ ಎಂದ ಅವರು ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆದರೆ, ಗ್ರಾಮೀಣ ಪ್ರದೇಶದ ಮಹಿಳೆಯರು ಈ ಯೋಜನೆಯಿಂದ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಖಾಸಗಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕೆಂದು ಹೇಳಿ ದರು.

ಅನ್ನಭಾಗ್ಯ ಯೋಜನೆಯಡಿಯಲ್ಲಿ ೧೦ಕೆ.ಜಿ.ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರು. ಈಗ ನಾವು ಐದು ಕೆ.ಜಿ.ಅಕ್ಕಿ ನೀಡುತ್ತೇವೆ. ಕೇಂದ್ರ ಐದು ಕೆ.ಜಿ.ಅಕ್ಕಿ ನೀಡಲಿದೆ ಎಂದರು. ನಂತರ ಅಕ್ಕಿಯ ಬದಲು ಹಣ ಪಡಿತರ ಚೀಟಿದಾರರ ಖಾತೆಗೆ ಹಾಕುವುದಾಗಿ ಹೇಳಿದರು.

ಮೊದಲ ತಿಂಗಳಲ್ಲಿ ಹಣ ಜಮೆ ಮಾಡಲಾಗಿದ್ದು, ಎರಡು ತಿಂಗಳಿಂದ ಹಣೆ ಜಮೆಯಾಗಿಲ್ಲ ಎಂದ ಅವರು, ಶಕ್ತಿ ಯೋಜನೆ ನ್ಯೂನತೆಗಳ ನಡುವೆ ಯೂ ಸ್ವಲ್ಪಮಟ್ಟಿಗೆ ಸಮರ್ಪಕವಾಗಿ ನೀಡುತ್ತಿರುವುದನ್ನು ಬಿಟ್ಟರೇ ಉಳಿದ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಜನತೆಗೆ ನೀಡಿದ ಭರವಸೆಯಂತೆ ಐದು ಗ್ಯಾರೆಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಜೆಡಿಎಸ್ ಮುಖಂಡ ಚಂದ್ರಪ್ಪ ಇದ್ದರು.

The Congress-led state government failed to implement the guarantee

About Author

Leave a Reply

Your email address will not be published. Required fields are marked *

You may have missed