September 19, 2024

ಮೂಡಿಗೆರೆಯಲ್ಲಿ ಹುಲಿ ಉಗುರು ಧರಿಸಿದ್ದ ಇಬ್ಬರ ಬಂಧನ

0
ಮೂಡಿಗೆರೆಯಲ್ಲಿ ಹುಲಿ ಉಗುರು ಧರಿಸಿದ್ದ ಇಬ್ಬರ ಬಂಧನ

ಮೂಡಿಗೆರೆಯಲ್ಲಿ ಹುಲಿ ಉಗುರು ಧರಿಸಿದ್ದ ಇಬ್ಬರ ಬಂಧನ

ಚಿಕ್ಕಮಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಜೈಲುಪಾಲಾಗಿದ್ದು, ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ವರ್ತೂರು ಸಂತೋಷ್ ಅಸಲಿ ಉಗುರಿನ ಕಥೆ ಹೊರಬರುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲೂ ಬೆಳ್ಳಿ ಚೈನಿಗೆ ಹುಲಿ ಉಗುರು ಜೋಡಿಸಿ ಹಾಕಿಕೊಂಡಿದ್ದ ಇಬ್ಬರನ್ನ ಮೂಡಿಗೆರೆ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಮೂಡಿಗೆರೆ ಹಾಗೂ ಆಲ್ದೂರು ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಉಗುರಿನ ಡಾಲರ್ ಧರಿಸಿದ್ದ ಇಬ್ಬರನ್ನು ಬಂಧಿಸಿದ್ದು, ಮತ್ತಿಬ್ಬರು ಪಾರಾರಿಯಾಗಿದ್ದಾರೆ.

ದಾಳಿ ನಡೆಸಿದ ಅರಣ್ಯ ಅಧಿಕಾರಿಗಳು ಹುಲಿ ಉಗುರಿನ ಒಂದು ಡಾಲರನ್ನ ವಶಪಡಿಸಿಕೊಂಡಿದ್ದಾರೆ. ಬಂಧಿತರಿಬ್ಬರ ವಿರುದ್ಧ ಅರಣ್ಯ ಅಧಿಕಾರಿಗಳು ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ತಲೆಮರೆಸಿಕೊಂಡಿರುವ ಇಬ್ಬರು ಹುಲಿ ಉಗುರು ಮಾರಾಟಗಾರರ ಬಂಧನಕ್ಕೆ ಬಲೆ ಬೀಸಿದ್ದಾರೆ.
Two arrested for wearing tiger claws in Mudigere

About Author

Leave a Reply

Your email address will not be published. Required fields are marked *

You may have missed