September 20, 2024
ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಕೋಟೆ ಸುದ್ದಿಗೋಷ್ಠಿ

ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಕೋಟೆ ಸುದ್ದಿಗೋಷ್ಠಿ

ಚಿಕ್ಕಮಗಳೂರು: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಗುರುಗಳ ಸ್ವರಣಾರ್ಥ “ಶ್ರೀ ಮಹರ್ಷಿ ವಾಲ್ಮೀಕಿ ಕಪ್-೨೦೨೩ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿಯನ್ನು ಅ.೨೭ ರಂದು ಶುಕ್ರವಾರ ಬೆಳಗ್ಗೆ ೯ ಗಂಟೆಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಹರ್ಷಿ ವಾಲ್ಮೀಕಿ ನಾಯಕ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಕೋಟೆ ದೇಸಿ ಕ್ರೀಡೆಯನ್ನು ಪ್ರೋತ್ಸಾಹಿಸಲು ಆಯೋಜಿಸಿರುವ ಈ ಖೋ ಖೋ ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳು ಅ.೨೬ರ ಸಂಜೆ ೪ ಗಂಟೆ ಒಳಗೆ ಹೆಸರು ನೊಂದಾಯಿಸಲು ಮನವಿ ಮಾಡಿದರು.

ಅ.೨೮ರಂದು ಶನಿವಾರ ಬೆಳಗ್ಗೆ ೯:೩೦ಕ್ಕೆ ನಗರದ ತಾಲೂಕು ಕಚೇರಿ ಆವರಣದಿಂದ ಶ್ರೀ ಮಹರ್ಷಿ ಗುರುಗಳ ಭಾವಚಿತ್ರದೊಂದಿಗೆ ವಿವಿಧ ಕಲಾ ತಂಡದೊಂದಿಗೆ ಎಂ.ಜಿ ರಸ್ತೆ ಮೂಲಕ ಕುವೆಂಪು ಕಲಾಮಂದಿರದವರೆಗೆ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.

ಬೆಳಗ್ಗೆ ೧೧:೦೦ ಗಂಟೆಗೆ ಕಲಾಮಂದಿರದಲ್ಲಿ ನಡೆಯಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡದ ಸಮಾಜ ಬಾಂಧವರು, ದಲಿತ ಪರ ಸಂಘಟನೆಗಳು. ಎಲ್ಲಾ ಸಮಾಜದ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸಮಾಜ ಬಂಧುಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು.

ತಿಂಗಳ ೪ನೇ ಶನಿವಾರದಂತೆ ವಾಲ್ಮೀಕಿ ಜಯಂತಿ ನಡೆಯುತ್ತಿರುವುದರಿಂದ ಸಮಾಜದ ಸರ್ಕಾರಿ ನೌಕರರು ಭಾಗವಹಿಸುವಂತೆ ಕೋರಿದರು. ಈ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಕ್ಕೆ ಪ್ರಥಮ ಬಹುಮಾನ ೯ ಸಾವಿರರೂ, ದ್ವಿತೀಯ ಬಹುಮಾನ ೬ ಸಾವಿರರೂ, ಹಾಗೂ ತೃತೀಯ ಬಹುಮಾನ ೩ ಸಾವಿರರೂ ನಗದು ಬಹುಮಾನ ನೀಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮಧುಕುಮಾರ್ ಎಚ್.ಎಂ, ಗೌರವ ಸಲಹೆಗಾರ ಬಿ.ಟಿ ಕುಮಾರನಾಯಕ್, ತಾಲೂಕು ಅಧ್ಯಕ್ಷ ಪ್ರದೀಪ್ ಬಿ.ಆರ್ ಇದ್ದರು.

District level kho kho tournament on 27th

About Author

Leave a Reply

Your email address will not be published. Required fields are marked *