September 20, 2024
ಮಾಜಿ ಪ್ರಧಾನಮಂತ್ರಿ ದಿವಂಗತ ಇಂದಿರಾಗಾಂಧಿಯವರ ಪುಣ್ಯ ಸ್ಮರಣೆ

ಮಾಜಿ ಪ್ರಧಾನಮಂತ್ರಿ ದಿವಂಗತ ಇಂದಿರಾಗಾಂಧಿಯವರ ಪುಣ್ಯ ಸ್ಮರಣೆ

ಚಿಕ್ಕಮಗಳೂರು: ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಸ್ಮರಣೆಯನ್ನು ಮಾಡುವ ಮೂಲಕ ಅವರ ಆಶಯಗಳನ್ನು ಈಡೇರಿಸಲು ಪ್ರತಿಯೊಬ್ಬರೂ ಪಣತೊಡಬೇಕೆಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಕರೆ ನೀಡಿದರು.

ಅವರು ಮಂಗಳವಾರ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನಮಂತ್ರಿ ದಿವಂಗತ ಇಂದಿರಾಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ಧಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.

ಇಂದಿರಾಗಾಂಧಿಯವರು ಕೈಗೊಂಡ ದಿಟ್ಟ ನಿರ್ಧಾರ ಹಾಗೂ ಹೋರಾಟಗಳಿಂದ ದೇಶದಲ್ಲಿ ಹಲವಾರು ಕ್ರಾಂತಿಕಾರಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವುಗಳನ್ನು ಮುನ್ನೆಡೆಸಿಕೊಂಡು ಹೋಗಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ ಮಾತನಾಡಿ, ಇಂದಿರಾಗಾಂಧಿಯವರು ಅಂದು ಜಾರಿಗೆ ತಂದ ೨೧ ಅಂಶಗಳ ಕಾರ್ಯಕ್ರಮಗಳು ಪ್ರಸ್ತುತವಾಗಿ ಕಾರ್ಯನಿರ್ವಹಿಸುತ್ತಿವೆ. ಉಳುವವನೆ ಭೂ ಒಡೆಯ ಕಾರ್ಯಕ್ರಮ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ ಎಂದರು.

ಇಂದಿರಾಗಾಂಧಿಯವರು ಪ್ರಧಾನಮಂತ್ರಿ ಆದ ಸಂದರ್ಭದಲ್ಲಿ ಉತ್ತಮವಾಗಿ ಆಡಳಿತ ನಡೆಸಿದ್ದಾರೆ. ದೇಶದ ಎಲ್ಲಾ ಜನರ ಏಳಿಗೆಗಾಗಿ ದುಡಿದ ಮಹಾನ್ ಮಹಿಳೆ. ವಸತಿ ಯೋಜನೆಗಳು ಅವರ ಹೆಸರನ್ನು ಅಚ್ಚಳಿಯದೆ ಉಳಿದಿವೆ ಎಂದು ಹೇಳಿದರು.

ಕೆಪಿಸಿಸಿ ಸದಸ್ಯ ಎ.ಎನ್.ಮಹೇಶ್ ಮಾತನಾಡಿ, ಸ್ವಾತಂತ್ರ್ಯ ಬಂದ ನಂತರ ಭಾರತ ದೇಶದಲ್ಲಿ ಇಷ್ಟೊಂದು ಕ್ರಾಂತಿಕಾರಕ ಬದಲಾವಣೆಗಳು ಕಂಡಿರುವುದು ಇಂದಿರಾಗಾಂಧಿಯವರು ಪ್ರಧಾನಮಂತ್ರಿ ಆದ ಸಂದರ್ಭದಲ್ಲಿ ಮಾತ್ರ ಎಂದು ಹೇಳಿದರು.

ಇಂದಿರಾಗಾಂಧಿಯವರು ದೇಶದ ಉಳಿವಿಗೆ ತನ್ನ ಪ್ರಾಣವನ್ನು ತ್ಯಜಿಸಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮಕ್ಕೆ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ದೇಶದ ಐಕ್ಯತೆ, ಅಖಂಡತೆಗಾಗಿ ಹೋರಾಡಿದ್ದಾರೆ. ಅವರ ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ಎಲ್ಲರೂ ಸಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಸದೃಡ ಭಾರತವನ್ನು ಕಟ್ಟುವ ಜೊತೆಗೆ ಇಂದಿರಾಗಾಂಧಿ ಹಾಗೂ ಸರ್ಧಾರ್ ವಲ್ಲಭಬಾಯಿ ಅವರುಗಳ ಆದರ್ಶ, ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮನವಿ ಮಾಡಿದರು.

ಇಂದಿರಾಗಾಂಧಿಯವರು ತನ್ನ ಅಧಿಕಾರದ ಅವಧಿಯಲ್ಲಿ ಉತ್ತಮವಾದ ಜನಪರವಾದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಅವುಗಳು ಇಂದು ಉಳಿದಿವೆ. ಅವುಗಳನ್ನು ನಾವುಗಳು ಜೀವನದಲ್ಲಿ ಬಳಸಿಕೊಳ್ಳುವಂತೆ ಮನವಿ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇಂದಿರಾಗಾಂಧಿಯವರ ಭಾವಚಿತ್ರಕ್ಕೆ ಸಾಮೂಹಿಕವಾಗಿ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರ ರವೀಶ್ ಬಸಪ್ಪ, ನಗರಸಭೆ ಸದಸ್ಯರಾದ ಶಾದಬ್ ಆಲಂ ಖಾನ್, ಪರಮೇಶ್ ರಾಜ್ ಅರಸ್, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ನಾಯ್ಡು, ಎಸ್.ಸಿ.ಘಟಕದ ಜಿಲ್ಲಾಧ್ಯಕ್ಷ ಮಲ್ಲೇಶಸ್ವಾಮಿ, ಜಿಲ್ಲಾ ಕಾಂಗ್ರೆಸ್ ಪದವೀಧರ ಘಟಕ ಜಿಲ್ಲಾಧ್ಯಕ್ಷ ಜೆ.ಬಿ.ಪವನ್, ಮುಖಂಡರಾದ ವೆಂಕಟೇಶ್ ನಾಯ್ಡು, ಪ್ರಸಾದ್ ಅಮಿನ್, ಹಿರೇಮಗಳೂರು ರಾಮಚಂದ್ರ, ಬಿ.ಎಲ್.ಪ್ರವೀಣ್, ಶೃದೀಪ್, ಜೈರಾಜ್ ಅರಸ್, ನಾಗೇಶ್, ಗಂಗಾಧರ್, ಸುರೇಶ್, ಜಗದೀಶ್, ಪ್ರಕಾಶ್ ರೈ, ಯಶೋಧ, ಚಂದ್ರಪ್ಪ, ಪುನೀತ್, ನೂರಿ, ಜಯಣ್ಣ, ನಾಗೇಶ್ ರಾಜ್ ಅರಸ್, ರಾಘವೇಂದ್ರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Good memory of Indira Gandhi

About Author

Leave a Reply

Your email address will not be published. Required fields are marked *