September 19, 2024

ಚಿಕ್ಕಮಗಳೂರು ಜಿಲ್ಲೆ ಭ್ರಷ್ಟಾಚಾರ ಮುಕ್ತ ಜಿಲ್ಲೆಯಾಗಿಸಲು ಮನವಿ

0
ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ಜನ್ಮ ದಿನದ ವಾರದ ಜಾಗೃತಿ ಅರಿವು ಸಪ್ತಾಹ ಸಮಾರಂಭ

ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ಜನ್ಮ ದಿನದ ವಾರದ ಜಾಗೃತಿ ಅರಿವು ಸಪ್ತಾಹ ಸಮಾರಂಭ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯನ್ನು ಭ್ರಷ್ಟಾಚಾರ ಮುಕ್ತ ಜಿಲ್ಲೆಯಾಗಿಸಲು ಎಲ್ಲ ಸರ್ಕಾರಿ ಅಧಿಕಾರಿಗಳು, ನೌಕರರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಹೇಳಿದ್ದಾರೆ.

ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ಲೋಕಾಯುಕ್ತ ಇವರುಗಳ ಸಹಯೋಗದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಭ್ರಷ್ಟಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಅರಿವು ಮೂಡಿಸುವ ಸಂಬಂಧ ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ಜನ್ಮ ದಿನದ ವಾರದ ಜಾಗೃತಿ ಅರಿವು ಸಪ್ತಾಹ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಅಧಿಕಾರಿಗಳು, ನೌಕರರು ನಾವು ಸರ್ಕಾರಿ ಅಧಿಕಾರಿಗಳು ಅನ್ನುವುದಕ್ಕಿಂತ ಸಾರ್ವಜನಿಕ ಸೇವಕರು ಅನ್ನುವ ಮನೋಭಾವ ಹೊಂದಿರಬೇಕಾಗುತ್ತದೆ. ಕಾಯಕ ವೇ ಕೈಲಾಸ ಅನ್ನುವ ಮನಸ್ಥಿತಿಯನ್ನು ಹೊಂದಿ ತಮ್ಮ ಕರ್ತವ್ಯಗಳನ್ನು ಮಾಡಿದರೆ ಸಮಾಜಕ್ಕೆ ಏನಾದರೂ ಕೊಡುಗೆ ನೀಡಿದಂತಾಗುತ್ತದೆ ಎಂದ ಅವರು ಸರ್ಕಾರದ ವಿವಿಧ ಕಛೇರಿಗಳಲ್ಲಿ ಸಿಬ್ಬಂದಿ ಕೊರತೆಯ ಮಧ್ಯೆ ಉತ್ತಮ ಕೆಲಸಗಳಾಗುತ್ತಿವೆ. ಇತ್ತೀಚೆಗೆ  ಜನತಾ ದರ್ಶನ ಕಾರ್ಯಕ್ರಮಗಳಲ್ಲಿ ಸುಮಾರು ಹಳೆಯ ಕೆಲಸಗಳು ಆಗದೆ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದು, ಗ್ರಾಮೀಣ ಪ್ರದೇಶಗಳ ಸಮಸ್ಯೆಗಳು ತಾಲ್ಲೂಕು ಅಧಿಕಾರಿಗಳು ಗಮನಿಸಿದರೆ. ಸಮಸ್ಯೆಗಳು ಜಿಲ್ಲಾ ಮಟ್ಟಕ್ಕೆ ಬದಲು ಬಿಡದೆ ಸ್ಥಳೀಯವಾಗಿ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸಿಕೊಳ್ಳಬೇಕು. ತಮ್ಮ ಕರ್ತವ್ಯಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು.

ಜನತೆ ಮನವಿ ಸಲ್ಲಿಸಲು ಬರುವವರನ್ನು ತಾಳ್ಮೇಯಿಂದ ಕೂರಿಸಿ ಕೇಳುವ ವ್ಯವಧಾನ ಇಟ್ಟು ಕೊಂಡು ತಮ್ಮ ಕರ್ತವ್ಯಗಳನ್ನು ಮಾಡಿ ಜನರಿಗೆ ಸ್ಪಂದಿಸಿ ಕೆಲಸ ಮಾಡಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಕೆಲಸ ಮಾಡದೇ ಸತಾಹಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದೇ ಇದ್ದರೆ ಅವರುಗಳು ಬೇಸತ್ತು ಲೋಕಾಯುಕ್ತರ ಮುಂದೆ ದೂರು ನೀಡುವುದು ಸಾಮಾನ್ಯವಾಗಿದೆ.

ಈ ರೀತಿಯ ಸಮಸ್ಯೆಗಳಿಂದ ದೂರವಿದ್ದು, ಜನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಕಾಲದಲ್ಲಿ ಅವರಿಗೆ ವಿಳಂಬ ಧೋರಣೆ ಅನುಸರಿಸದೆ ಉತ್ತಮವಾಗಿ ಕೆಲಸ ಮಾಡಿ ಕಛೇರಿಗೆ ಹಾಗೂ ಇಲಾಖೆಗಳಿಗೆ ಉತ್ತಮ ಹೆಸರು ತರುವಂತೆ ಕೆಲಸ ಮಾಡಬೇಕು ಎಂದು ಹೇಳಿದರು.

ಎಲ್ಲ ಕೆಲಸಗಳು ಒಂದೇ ದಿನದಲ್ಲಿ ಕೆಲಸ ಮಾಡಲಾಗುವುದಿಲ್ಲ, ಅಂತ ಕೆಲಸಗಳನ್ನು ಮೇಲಾಧಿಕಾರಿಗಳ ಮೂಲಕ ಅವರ ಗಮನಕ್ಕೆ ತಂದು ಕಾನೂನಿನ ಚೌಕಟ್ಟಿನಲ್ಲಿ ಅವರ ಕೆಲಸ ಮಾಡಲು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ. ಗೋಪಾಲಕೃಷ್ಣ ಅವರು ಮಾತನಾಡಿ ದೇಶದ ಅಭಿವೃದ್ಧಿಗೆ ಭ್ರಷ್ಟಾಚಾರ ಬಹಳ ಕಂಟಕವಾಗಿ ವ್ಯಾಪಿಸಿದೆ ಎಂದ ಅವರು ಇದರಿಂದ ರಾಜಕೀಯವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಬಹಳ ಸಮಸ್ಯೆಗಳನ್ನು ಸೃಷ್ಟಿ ಮಾಡುತ್ತಿದೆ. ಇದರಿಂದ ಸರ್ಕಾರಿ ನೌಕರರು ದೂರವಿದ್ದು, ತಮ್ಮ ಕರ್ತವ್ಯಗಳನ್ನು ಸರಿಯಾಗಿ ನಿಭಾಯಿಸಿ ಉತ್ತಮ ಸೇವೆ ನೀಡಲು ಎಲ್ಲರೂ ಮುಂದಾಗಬೇಕು ಎಂದು ಅವರು.

ಪ್ರತಿಯೊಬ್ಬರು ಒಂದಲ್ಲ ರೀತಿಯಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಇದೊಂದು ಸಾಮಾಜಿಕ ಪೀಡುಗಾಗಿದ್ದು, ಇದನ್ನು ತೆಗೆದು ಹಾಕಲು ಪ್ರತಿಯೊಬ್ಬರು ಪಾರದರ್ಶಕವಾಗಿ ಸಾಮಾಜಿಕ ಸೇವೆಗಳನ್ನು ಮಾಡಲು ಮುಂದಾಗ ಬೇಕು ಎಂದರು.

ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸಿ. ಮಲ್ಲಿಕ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು.

ಸರ್ಕಾರಿ ಅಧಿಕಾರಿಗಳು ಮತ್ತು ಅವರ ಅಧೀನ ಸಿಬ್ಬಂದಿಗಳ ಕಾರ್ಯ ವಿಧಾನ ಅವರ ಚಲನ ವಲನಗಳ ಮೇಲೆ ನಿಗಾ ಇಡಬೇಕು. ಸಾಮಾನ್ಯ ಜನರ ಕೆಲಸಗಳು ಯಾವ ರೀತಿಯಲ್ಲಿ ವಿಳಂಬವಿಲ್ಲದೆ ಮಾಡುತ್ತಿದ್ದಾರೆ ಎಂಬುದನ್ನು ಪರಿಶೀಲಿಸಬೇಕಾಗುತ್ತದೆ. ಇಲ್ಲದಿದ್ದರೆ ಯಾರೋ ಮಾಡಿದ ತಪ್ಪಿಗೆ ಇನ್ನಾರಿಗೊ ಶಿಕ್ಷೆ ಅಥವಾ ಕೆಟ್ಟ ಹೆಸರು ಬರುವ ಸಾಧ್ಯತೆ ಇದ್ದು ಇದನ್ನು ಎಲ್ಲ ಹಂತದ ಮೇಲಾಧಿಕಾರಿಗಳು ಪರಿಶೀಲಿಸಬೇಕು ಎಂದ ಅವರು ಲೋಕಾಯುಕ್ತ ಸಂಸ್ಥೆಯ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ಮಾತನಾಡಿದರು. ಯಾವುದೇ ಸರ್ಕಾರಿ ನೌಕರರು ತಮ್ಮ ಕರ್ತವ್ಯಗಳನ್ನು ಸರಿಯಾಗಿ ನಿಭಾಯಿಸಿದರೆ ಸಮಸ್ಯೆಗಳು ಕಡಿಮೆ ಆಗಿ ನೆಮ್ಮದಿಯ ಜೀವನ ಸಾಗಿಸಬಹುದು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಸೋಮ ಎ.ಎಸ್., ವಿಶೇಷ ಸರ್ಕಾರಿ ಅಭಿಯೋಜಕರಾದ ವಿ.ಟಿ. ಥಾಮಸ್ ಅವರುಗಳು ಸಮಾರಂಭದಲ್ಲಿ ಮಾತನಾಡಿದರು.
ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ತಿರುಮಲೇಶ್ ಅವರು ಭ್ರಷ್ಟಾಚಾರ ಜಾಗೃತಿ ಬಗ್ಗೆ ಪ್ರಮಾಣ ವಚನ ಬೋಧಿಸಿ ಎಲ್ಲರನ್ನು ಸ್ವಾಗತಿಸಿದರು. ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಅನಿಲ್ ರಾಥೋಡ್ ವಂದಿಸಿದರು.

Request to make Chikmagalur district corruption free

About Author

Leave a Reply

Your email address will not be published. Required fields are marked *

You may have missed