September 19, 2024

ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಬೇಕಾದರೇ ಸ್ಪರ್ಧಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು

0
ಮಲೆನಾಡು ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ

ಮಲೆನಾಡು ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ

ಚಿಕ್ಕಮಗಳೂರು: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಬೇಕಾದರೇ, ಸ್ಪರ್ಧಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ ಹೇಳಿದರು.

ಭಾನುವಾರ ನಗರದ ಮಲೆನಾಡು ವಿದ್ಯಾ ಸಂಸ್ಥೆಯಲ್ಲಿ ರಾಮಕೃಷ್ಣ ವಿದ್ಯಾಲಯ ಮೈಸೂರು ಹಳೇ ವಿದ್ಯಾರ್ಥಿಗಳ ಸಂಘ ೨೫ ವರ್ಷ ಪೂರ್ಣಗೊಳಿಸಿದ ಸವಿನೆನಪಿನ ಹಿನ್ನಲೆಯಲ್ಲಿ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ರಸಪ್ರಶ್ನೆ ಸ್ಪರ್ಧೆ ಸೇರಿದಂತೆ ಇತರೆ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ತಮ್ಮ ಜೀವನದಲ್ಲಿ ಯಶಸ್ಸುಗಳಿಸಬಹುದು ಹಾಗೂ ಸಮಾಜದಲ್ಲಿ ಸದೃಢ ಪ್ರಜೆಗಳಾಗಲು ಸಾಧ್ಯವಾಗುತ್ತವೆ ಎಂದ ಅವರು, ಇಂತಹ ಕಾರ್ಯಕ್ರಮ ಗಳು ನಿರಂತರವಾಗಿ ನಡೆಯಬೇಕು ಎಂದರು.

ಹದಿಹರೆಯದ ವಯಸ್ಸು ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಅತ್ಯಂತ ಮಹತ್ವದ ಮತ್ತು ತಮ್ಮ ಜೀವನ ನಿರ್ಧರಿಸುವ ಕಾಲಘಟ್ಟ. ಆದರೆ, ಇದರ ಅರಿವಿಲ್ಲದೆ ಸಹವಾಸ ದೋಷದಿಂದ ಅಪರಾಧ ಕೃತ್ಯಗಳನ್ನು ನಡೆಸಿ ಅನೇಕರು ತಮ್ಮ ಜೀವನವನ್ನು ಹಾಳು ಮಾಡಿಕೊಂಡಿರುವ ಅನೇಕ ನಿದರ್ಶನಗಳು ನಮ್ಮ ಮುಂದಿವೆ ಎಂದರು.

ವಿದ್ಯಾರ್ಥಿ ಜೀವನ ಪ್ರತಿ ವ್ಯಕ್ತಿಯಲ್ಲಿನ ಸುವರ್ಣಯುಗ, ಇದನ್ನು ನಾವು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳದಿದ್ದರೇ, ಮುಂದೇ ನಾವು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ ಎಂದು ಕಿವಿಮಾತು ಹೇಳಿದ ಅವರು, ಇಂದಿನ ಅನೇಕ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನ ಮೋಜು ಮಸ್ತಿಯ ಜೀವನ ಎಂದುಕೊಂಡಿದ್ದಾರೆ. ಇದು ತಪ್ಪು ವಿದ್ಯಾರ್ಥಿ ಜೀವನ ಕ್ಷಣಗಳನ್ನು ಸರಿಯಾದ ಮಾರ್ಗ ದಲ್ಲಿ ಬಳಸಿಕೊಂಡಿದ್ದೇ ಆದಲ್ಲಿ ನಾವು ಮುಂದೇ ಉತ್ತಮ ಜೀವನ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜೀವನವೆನ್ನುವುದು ವಾಹನ ಚಾಲನೆಯಂತೆ ನಮ್ಮ ಜೀವನದ ಸ್ಟೇರಿಂಗ್ ಇನ್ನೊಬ್ಬರಿಗೆ ನೀಡಿದರೇ ಜೀವನದ ದಿಕ್ಕು ತಪ್ಪುತ್ತದೆ ಇದನ್ನು ಅರ್ಥಮಾಡಿಕೊಳ್ಳಬೇಕು ಎಂದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕಾನೂನು ಅರಿವು ಬೆಳೆಸಿಕೊಳ್ಳಬೇಕು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಅಣಿಯಾಗಬೇಕು ಎಂದು ಕಿವಿಮಾತು ಹೇಳಿದರು.

ಸಾಹಿತಿ, ಉಪನ್ಯಾಸಕ ಬೆಳವಾಡಿ ಮಂಜುನಾಥ್ ಮಾತನಾಡಿ, ಅನೇಕ ಶಾಲಾ ಕಾಲೇಜುಗಳಲ್ಲಿ ಫಲಿತಾಂಶದಲ್ಲಿ ಹಿನ್ನಡೆ ಸಾಧಿಸು ವಂತಹ ಸನ್ನಿವೇಶಗಳನ್ನು ಇಂದು ನಾವು ಕಾಣುತ್ತಿದ್ದೇವೆ. ಇದಕ್ಕೆ ಬಹುಮುಖ್ಯ ಕಾರಣ ಶಾಲಾ ತರಗತಿಯಲ್ಲಿ ಅಧ್ಯಾಪಕರು ಹೇಳಿದ ಪಾಠವನ್ನು ಕೇಳಿಸಿಕೊಳ್ಳುವ ವ್ಯವಧಾನ ಇಲ್ಲದಿರುವುದುದೇ ಕಾರಣ ಎಂದರು.

ಶಿಸ್ತು ಎಲ್ಲಿರುತ್ತದೆ ಅಲ್ಲಿ ವಿಧ್ಯೆ ಅಡಗಿದೆ. ಜ್ಞಾನಕ್ಕೆ ಸಮಾನವಾದದ್ದು ಮತ್ತೊಂದು ಇಲ್ಲ. ಇದನ್ನು ಸಂಪಾದಿಸಬೇಕಾದರೇ ವಿನ ಯ, ಶಿಸ್ತು, ಸಜ್ಜನಿಕೆ ಅಗತ್ಯವಾಗಿ ಬೇಕಿದೆ ಎಂದ ಅವರು, ಶಾಲಾ ಪಾಠಕ್ಕೂ ಜೀವನ ಪಾಠಕ್ಕೂ ವ್ಯತ್ಯಾಸವಿದ್ದು, ಶಾಲೆಯಲ್ಲಿ ಪಾಠ ಮಾಡಿ ಪರೀಕ್ಷೆಯನ್ನು ನೀಡಲಾಗುತ್ತದೆ. ಜೀವನದಲ್ಲಿ ಪರೀಕ್ಷೆ ಮಾಡಿದ ಮೇಲೆ ಪಾಠ ಕಲಿಸುತ್ತದೆ ಎಂದು ಹೇಳಿದರು.

ಹಳೇ ವಿದ್ಯಾರ್ಥಿ ಹಾಗೂ ಕಾರ್ಯಕ್ರಮ ಉಸ್ತುವಾರಿ ಡಾ| ಪ್ರಸನ್ನ ಮಾತನಾಡಿ, ಸ್ಫರ್ಧೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಡಿ.೩೦ರಂದು ಮೈಸೂರಿನಲ್ಲಿ ಬಹುಮಾನ ವಿತರಿಸಲಾಗುವುದು. ಇಂದು ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿರುವುದು ವಿಶೇಷ ಎಂದರು.

ಜೀನವ ಸಂಧ್ಯಾ ವೃದ್ದಾಶ್ರಮದ ಅಧ್ಯಕ್ಷ ಎಂ.ಎಸ್.ನಂಜುಂಡಸ್ವಾಮಿ ಸಮಾರಂಭದ ಅಧ್ಯಕ್ಷತೆವಹಿಸಿದ್ದರು. ಹಳೇ ವಿದ್ಯಾರ್ಥಿ ಬಿ. ಎನ್.ರಾಮದಾಸ್, ಬಿ.ಇಡಿ ಕಾಲೇಜು ಪ್ರಾಂಶುಪಾಲ ಡಾ| ಗಣೇಶ್, ಹಳಸೆ ಶಿವಣ್ಣ, ಬಾಲಾಜಿ, ಡಾ| ಅಂಶುಮಂತ್, ಲೋ ಕೇಶ್, ಸಿದ್ಧಪ್ಪ ಇದ್ದರು.

Quiz competition program organized by Malenadu Vidya Institute

 

About Author

Leave a Reply

Your email address will not be published. Required fields are marked *

You may have missed