September 19, 2024
ಕಾಡಾನೆ ದಾಳಿ ಖಂಡಿಸಿ ಸ್ಥಳೀಯರ ಪ್ರತಿಭಟನೆ

ಕಾಡಾನೆ ದಾಳಿ ಖಂಡಿಸಿ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳದಿಂದ ಕಳೆದ ೨ ತಿಂಗಳಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿರುವುದನ್ನು ಖಂಡಿಸಿ ಸ್ಥಳೀಯರು ಆಲ್ದೂರು ಪಟ್ಟಣದಲ್ಲಿ ಬುಧವಾರ ರಾಜ್ಯ ಹೆದ್ದಾರಿ ಚಿಕ್ಕಮಗಳೂರು-ಶೃಂಗೇರಿ ಮಾರ್ಗದ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಆಲ್ದೂರು ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ಹೋರಾಟಗಾರರು ಅರಣ್ಯ ಇಲಾಖೆಯ ಈ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ತೋಟಗಳಿಗೆ ನುಗ್ಗುತ್ತಿರುವ ಆನೆಗಳು ಭತ್ತ, ಕಾಫಿ ಸೇರಿದಂತೆ ನಾನಾ ಬೆಳೆಗಳಿಗೆ ಹಾನಿ ಮಾಡಿವೆ ಎಂದರು.

ಕಾಡಾನೆಗಳ ದಾಳಿಯಿಂದ ಬೆಳೆ ಹಾನಿಯಾಗಿದ್ದು, ರೈತರು ನಷ್ಟದ ಆತಂಕ ಎದುರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಪ್ರಾಣಹಾನಿ ಕೂಡ ಆಗಿದೆ. ಈ ಸಂಬಂಧ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸುವಂತೆ ಸ್ಥಳೀಯರು ಎಷ್ಟೇ ಒತ್ತಾಯಿಸಿದರು ಏನು ಪ್ರಯೋಜನ ಆಗಿಲ್ಲ ಎಂದು ದೂರಿದರು.

ಬುಧವಾರ ಬೆಳಗ್ಗೆ ಕಾಡಾನೆ ದಾಳಿಗೆ ಮೀನಾ ಯವತಿ ಸಾವನ್ನಪ್ಪಿದ್ದಾರೆ. ೨ ತಿಂಗಳ ಹಿಂದೆ ಅರೆನೂರು ಬಳಿ ಚಿನ್ನಿ ಎಂಬುವವರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ನಿಮಗೆ ಇನ್ನೆಷ್ಟು ಬಲಿ ಬೇಕು ಎಂದು ಡಿಎಫ್‌ಓರನ್ನು ತರಾಟೆ ತೆಗೆದುಕೊಂಡು ಸಾರ್ವಜನಿಕರು ಪ್ರಶ್ನೆ ಮಾಡಿದರು.

ಸ್ಥಳಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಭೇಟಿ ನೀಡಿದ್ದು, ಶಾಸಕರ ಎದುರು ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಅಗಮಿಸಿದ ಡಿಎಫ್‌ಓ ಅನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು.

ಮಹಿಳೆಯ ಮೇಲೆ ದಾಳಿ ನಡೆಸಿ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಒತ್ತಾಯಿಸಿದರು, ಕಾಡಾನೆ ಹಾವಳಿಗೆ ತಡೆ ಹಾಕುವಂತೆ ಚಿಕ್ಕಮಗಳೂರಿಗೆ ಮೇಲಿಂದ ಮೇಲೆ ಒತ್ತಾಯಿಸುತ್ತು ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಂತೆ ಕಂಡು ಬರುತ್ತಿಲ್ಲ. ಹೀಗಾಗಿ ಇನ್ನಾದರೂ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ನೀಡಬೇಕು ಎನ್ನುವುದು ಸ್ಥಳೀಯರು ಒತ್ತಾಯಿಸಿದರು.

Locals protest against forest attack

 

About Author

Leave a Reply

Your email address will not be published. Required fields are marked *

You may have missed