September 16, 2024

ವಾರ ಪೂರ್ತಿ ಸರ್ಕಾರಿ ಬಸ್ ಓಡಿಸುವಂತೆ ಗ್ರಾಮಸ್ಥರ ಒತ್ತಾಯ

0
ವಾರ ಪೂರ್ತಿ ಸರ್ಕಾರಿ ಬಸ್ ಓಡಿಸುವಂತೆ ಗ್ರಾಮಸ್ಥರ ಒತ್ತಾಯ

ವಾರ ಪೂರ್ತಿ ಸರ್ಕಾರಿ ಬಸ್ ಓಡಿಸುವಂತೆ ಗ್ರಾಮಸ್ಥರ ಒತ್ತಾಯ

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ತಪ್ಪಲಿನಲ್ಲಿರುವ ಬರುವ ಮಹಲ್, ಅತ್ತಿಗುಂಡಿ, ಬಿಸಗ್ನಿಮಠ ಹಾಗೂ ದತ್ತಪೀಠಕ್ಕೆ ಕೆಎಸ್‌ಆರ್‌ಟಿಸಿ ಬಸ್ಸನ್ನು ವಾರ ಪೂರ್ತಿ ಓಡಿಸುವಂತೆ ಗ್ರಾಮಸ್ಥರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಅವರು ಬುಧವಾರ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರೆಡ್ಡಿ ಅವರಿಗೆ ಮನವಿ ಸಲ್ಲಿಸಿ, ಈ ಹಿಂದೆ ಗ್ರಾಮಗಳಿಗೆ ವಾರದ ಎಲ್ಲಾ ದಿನಗಳಲ್ಲೂ ಸರ್ಕಾರಿ ಬಸ್ ಸಂಚರಿಸಿ ಉತ್ತಮವಾದ ಸೇವೆಯನ್ನು ನೀಡುತ್ತಿತ್ತು. ಆದರೆ ಕಳೆದ ಒಂದು ತಿಂಗಳಿನಿಂದ ವಾರದಲ್ಲಿ ಮೂರು ದಿನ ಮಾತ್ರ ಸಂಚರಿಸುತ್ತಿದೆ ಎಂದು ಹೇಳಿದ್ದಾರೆ.

ಗ್ರಾಮಸ್ಥರು ಈ ಹಿಂದೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕುಗ್ರಾಮಗಳಿಗೆ ಸರ್ಕಾರಿ ಬಸ್ ಸೇವೆಯನ್ನು ಉತ್ತಮವಾಗಿ ಒದಗಿಸುವಂತೆ ಮನವಿ ಮಾಡಿದರೂ ಸಹ ನಮ್ಮ ಮನವಿಯನ್ನು ಪುರಸ್ಕರಿಸಿಲ್ಲ. ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಗ್ರಾಮಗಳಿಗೆ ಸರ್ಕಾರಿ ಬಸ್ ಸೇವೆಯನ್ನು ಸರಿಯಾಗಿ ಒದಗಿಸಿ ಎಂದು ಮನವಿ ಮಾಡಿದರೂ ಸಹ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ದೂರವಾಣಿ ಕರೆ ಮಾಡಿ ಈ ಭಾಗದ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ನಮ್ಮ ಅಳಲನ್ನು ತೋಡಿಕೊಂಡರೂ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ.

ನಮ್ಮ ಸಮಸ್ಯೆಗಳನ್ನು ಬಗೆಹರಿಸಲು ವಿಭಾಗೀಯ ನಿಯಂತ್ರಣಾಧಿಕಾರಿ ವಿಫಲರಾಗಿದ್ದು, ಜಿಲ್ಲಾಡಳಿತ ಸಂಬಂಧಿಸಿದವರಿಗೆ ಸೂಚನೆ ನೀಡುವ ಮೂಲಕ ಕುಗ್ರಾಮಗಳಿಗೆ ಸರ್ಕಾರಿ ಬಸ್ ಸೇವೆಯನ್ನು ಒದಗಿಸುವಂತೆ ಕ್ರಮಕೈಗೊಳ್ಳುವ ಜೊತೆಗೆ ಸರ್ಕಾರಿ ಬಸ್ ಚಾಲಕ ಮತ್ತು ನಿರ್ವಾಹಕರನ್ನು ಬದಲಾವಣೆ ಮಾಡುವಂತೆ ಮನವಿ ಮಾಡಿದ್ದಾರೆ.

ಮನವಿ ಸಲ್ಲಿಸುವಾಗ ಗ್ರಾಮದ ಮುಖಂಡರಾದ ಸುರೇಂದ್ರ, ಅಣ್ಣಪ್ಪ, ಮೋಹನ್, ಚನ್ನಕೇಶವ, ಗುರುವೇಶ್ ಗೌಡ ಸೇರಿದಂತೆ ಮತ್ತಿತರರು ಇದ್ದರು.

Villagers demand to run government bus for the whole week

About Author

Leave a Reply

Your email address will not be published. Required fields are marked *