September 16, 2024
ಅಂಬಾರ್ ವ್ಯಾಲಿ ರೆಸಿಡೆನ್ಸಿಯಲ್ ಸ್ಕೂಲ್ ಆವರಣದಲ್ಲಿ ನಡೆದಂತಹ ಕ್ರಿಕೆಟ್ ಮ್ಯಾಚ್‌

ಅಂಬಾರ್ ವ್ಯಾಲಿ ರೆಸಿಡೆನ್ಸಿಯಲ್ ಸ್ಕೂಲ್ ಆವರಣದಲ್ಲಿ ನಡೆದಂತಹ ಕ್ರಿಕೆಟ್ ಮ್ಯಾಚ್‌

ಚಿಕ್ಕಮಗಳೂರು: ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ಹೇಳಿದರು.

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾದಕ ವಿರೋಧಿ ಅಭಿಯಾನ ಕಪ್ ಜಾಥಾಗೆ ಚಾಲನೆ ನೀಡಿ ಬಳಿಕ ಸಉದ್ದಿಗಾರರೊಂದಿಗೆ ಮಾತನಾಡಿ ತಮ್ಮ ಬಡಾವಣೆ, ಗ್ರಾಮಗಳಲ್ಲಿ ಮಾದಕ ವಸ್ತು ಸೇವನೆ, ಮಾರಾಟ ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಮಾದಕ ವಸ್ತುಗಳ ಬಳಕೆ , ಮಾರಾಟಕ್ಕೆ ಕಡಿವಾಣ ಹಾಕಲುಇಲಾS ಯೊಂದಿಗೆ ಸಹಕರಿಸಬೇಕೆಂದರು.

ಮಾದಕ ವಸ್ತು ಸೇವನೆ ಎಲ್ಲ ವಲಯದಲ್ಲೂ ವ್ಯಾಪಕವಾಗಿ ಹರಡಿ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಿದಾಗ ಮಾತ್ರ ಇದನ್ನು ತಡೆಗಟ್ಟಲು ಸಾಧ್ಯ ಎಂದರು.

ಸಾರ್ವಜನಿಕರಲ್ಲಿ ಮಾದಕ ವಸ್ತು ಸೇವನೆ ಹಾಗೂ ಅದರಿಂದ ಉಂಟಾಗುವ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಅದರ ಬಳಕೆಯಿಂದ ದೂರವಿರುವಂತೆ ಮಾಡುವುದೇ ನಮ್ಮ ಈ ಜಾಥಾದ ಉದ್ದೇಶವಾಗಿದೆ.

ಇದರ ಅಂಗವಾಗಿ ಇಂದು ನಗರದ ಹೊರವಲಯದ ಅಂಬಾರ್ ವ್ಯಾಲಿ ರೆಸಿಡೆನ್ಸಿಯಲ್ ಸ್ಕೂಲ್ ಆವರಣದಲ್ಲಿ ನಡೆದಂತಹ ಕ್ರಿಕೆಟ್ ಮ್ಯಾಚ್‌ನಲ್ಲಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪತ್ರಕರ್ತರು, ವಕೀಲರ ತಂಡಗಳು ಭಾಗವಹಿಸುತ್ತಿರುವುದು ಸಂತಸ ತಂದಿದೆ ಎಂದರು.

ಈ ರೀತಿಯಾಗಿ ಎಲ್ಲರೂ ಒಟ್ಟಾಗಿ ಒಂದು ಕ್ರೀಡೆಯನ್ನು ಆಯೋಜನೆ ಮಾಡುವುದರಿಂದ ಎಲ್ಲ ಇಲಾಖೆಯವರು ಕೂಡ ಒಟ್ಟಿಗೆ ಸೇರಿ ಒಂದು ತಂಡದಂತೆ ಕೆಲಸ ಮಾಡಿದರೆ ಎಂತಹ ಸಮಸ್ಯೆ ಬಂದರೂ ಕೂಡ ಎಲ್ಲರೂ ಒಗ್ಗಟ್ಟಿನಿಂದ ನಿಭಾಯಿಸುತ್ತಿದ್ದಾರೆ ಎಂಬ ಸಂದೇಶ ಸಮಾಜಕ್ಕೆ ರವಾನೆ ಆಗಲಿದೆ. ಆ ನಿಟ್ಟಿನಲ್ಲಿ ನಾವು ಈ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಎಸ್ಪಿ ವಿಕ್ರಂ ಅಮಟೆ ತಿಳಿಸಿದರು

ಅಂಬರ್ ವ್ಯಾಲಿ ರೆಸಿಡೆನ್ಸಿಯಲ್ ಸ್ಕೂಲ್ ಆವರಣದಲ್ಲಿ ನಡೆದ ಕ್ರಿಕೆಟ್ ಮ್ಯಾಚ್‌ನಲ್ಲಿ ಪೊಲೀಸ್ ಇಲಾಖೆ ತಂಡದ ನೇತೃತ್ವವನ್ನು ಎಸ್ಪಿ ಡ. ವಿಕ್ರಮ ಅಮಟೆ, ಕಂದಾಯ ಇಲಾಖೆಯ ತಂಡದ ಜವಾಬ್ದಾರಿಯನ್ನ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗೋಪಾಲಕೃಷ್ಣ, ಪತ್ರಕರ್ತರ ತಂಡದ ಜವಾಬ್ದಾರಿಯನ್ನ ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ. ರಾಜೇಶ್, ವಕೀಲರ ತಂಡದ ಜವಾಬ್ದಾರಿಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸುಧಾಕರ್ ವಹಿಸಿಕೊಂಡಿದ್ದರು.

ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಬಳಿಯಿಂದ ಬೋಳರಾಮೇಶ್ವರ ದೇವಾಲಯದವರೆಗೂ ಸಾಂಕೇತಿಕವಾಗಿ ಕಾಲ್ನಡಿಗೆ ಜಾಥಾವನ್ನು ಹಮ್ಮಿಳ್ಳಲಾಗಿತ್ತು. ಈ ಜಾಥಾದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ಕಂದಾಯ ಇಲಾಖೆ, ಆರ್‌ಡಿ.ಪಿಆರ್ ಇಲಾಖೆ, ಪತ್ರಕರ್ತರು ಹಾಗೂ ವಕೀಲರು ಭಾಗವಹಿಸಿದ್ದರು.

ನಗರದ ಹೊರವಲಯದ ಅಂಬರ್ ವ್ಯಾಲಿ ರೆಸಿಡೆನ್ಸಿಯಲ್ ಶಾಲೆಯ ಆವರಣದಲ್ಲಿ ನಡೆದ ಕ್ರಿಕೆಟ್ ಮ್ಯಾಚ್‌ಗೆ ಜಿಲ್ಲಾಧಿಕಾರಿ ಮೀನಾನಾಗರಾಜ್ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಶುಭಕೋರಿದರು. ಮೊದಲು ಕಂದಾಯ ಇಲಾಖೆ ಮತ್ತು ಪತ್ರಕರ್ತರ ತಂಡಗಳು ಆಯ್ಕೆಯಾಗಿದ್ದು, ಕಂದಾಯ ಇಲಾಖೆಯ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಬಳಿಕ ನಡೆದ ಎರಡನೇ ಮ್ಯಾಚ್‌ನಲ್ಲಿ ಪೊಲೀಸ್ ಇಲಾಖೆ ಮತ್ತು ವಕೀಲರ ತಂಡಗಳು ಆಟವಾಡಿದ್ದು, ಪೊಲೀಸ್ ಇಲಾಖೆಯ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅಂತಿಮವಾಗಿ ನಡೆದ ಮ್ಯಾಚ್ ನಲ್ಲಿ ಪೋಲೀಸ್ ವರಿಷ್ಟಾಧಿಕಾರಿ ಡಾ. ವಿಕ್ರಮ್ ಅಮಟೆ ನೇತೃತ್ವದ ಇಲಾಖೆ ತಂಡ ಕಪ್ ತನ್ನದಾಗಿಸಿಕೊಂಡಿತ್ತು.

Anti-Narcotics Campaign Cup Jatha

 

About Author

Leave a Reply

Your email address will not be published. Required fields are marked *