September 16, 2024

ಅಕ್ರಮ ಭೂಮಂಜೂರಾತಿಗೆ ಸಂಬಂಧಿಸಿದಂತೆ ತಪ್ಪುಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ

0
ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ವತಿಯಿಂದ ಇಂದು ಹಮ್ಮಿಕೊಂಡಿದ್ದ ತಿಂಗಳ ಅತಿಥಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮ

ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ವತಿಯಿಂದ ಇಂದು ಹಮ್ಮಿಕೊಂಡಿದ್ದ ತಿಂಗಳ ಅತಿಥಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಭೂಮಂಜೂರಾತಿಗೆ ಸಂಬಂಧಿಸಿದಂತೆ ತಪ್ಪುಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಸೇರಿದಂತೆ ಮೂರು ರೀತಿಯ ಕ್ರಮ ಜರುಗಿಸಲಾಗುವುದು ಎಂದುಕಂದಾಯ ಇಲಾಖೆ ಪ್ರಧಾನಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ತಿಳಿಸಿದರು.

ಚಿಕ್ಕಮಗಳೂರು ಪ್ರೆಸ್‌ಕ್ಲಬ್‌ವತಿಯಿಂದ ಇಂದು ಹಮ್ಮಿಕೊಂಡಿದ್ದ ತಿಂಗಳ ಅತಿಥಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸರ್ಕಾರ ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪುಮಾಡಿರುವ ಅಧಿಕಾರಿ ವಿರುದ್ಧ ಕಂದಾಯ ಕಾಯ್ದೆ, ಕ್ರಿಮಿನಲ್‌ಕಾಯ್ದೆ ದಾಖಲಾಗುವುದರೊಂದಿಗೆ ಕಾನೂನು ಬಾಹಿರವಾಗಿ ಮಂಜೂರುಮಾಡಿದ್ದ ಭೂಮಿಯನ್ನು ರದ್ದುಗೊಳಿಸಿ ಕಂದಾಯ ಇಲಾಖೆಗೆ ವಾಪಸ್ ಪಡೆದುಕೊಳ್ಳಲಾಗುವುದು ಎಂದು ಹೇಳಿದರು.

ಅಕ್ರಮ ಭೂ ಮಂಜೂರಾತಿಗೆ ಸಂಬಂಧ ಜಿಲ್ಲೆಗೆ ಆಗಮಿಸಿದ್ದ ೧೫ ಮಂದಿ ತಹಶಿಲ್ದಾರ್ ದರ್ಜೆಯ ಅಧಿಕಾರಿಗಳ ತಂಡ ಸಂಗ್ರಹಿಸಿದ್ದ ೧೦ಸಾವಿರ ದಾಖಲೆಗಳು ಪೆಟ್ಟಿಗೆಯಲ್ಲಿ ಭದ್ರವಾಗಿದ್ದು,ತನಿಖೆಗೆ ಸಂಬಂಧಿಸಿದ ಸಮಗ್ರವರದಿಸರ್ಕಾರದ ಕೈಸೇರಿದೆ. ತಾರಾತುರಿಯಲ್ಲಿ ಕ್ರಮವಹಿಸಲು ಸಾಧ್ಯವಿಲ್ಲ. ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿ ಸರಕಾರ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಿದೆ ಎಂದರು.

ಈ ಪ್ರಕರಣ ಒಂದು ಹಂv ತಲುಪಿದ್ದು,ಮುಂದಿನ ದಿನಗಳಲ್ಲಿ ಏನಾಗಿದೆ ಎಂಬ ಮಾಹಿತಿ ತಿಳಿಯಲಿದೆ.ಜಿಲ್ಲೆಯಲ್ಲಿ ಅಕ್ರಮ ಭೂಮಂಜೂರಾತಿಯಲ್ಲಿ ಆಗಿರುವ ತಪ್ಪನ್ನು ಸರಿಪಡಿಸಲಾಗುವುದು ಎಂದರು.

ಆಟದ ಮೈದಾನ, ಸ್ಮಶಾನ, ಅಂಗನವಾಡಿ ಕಟ್ಟಡ ನಿರ್ಮಾಣ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಭೂಮಿಯನ್ನು ಕಾಯ್ದಿರಿಸಬೇಕಾಗಿದೆ. ಜನಸಾಮಾನ್ಯರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸೇರಿದಂತೆಸ್ಮಶಾನಕ್ಕೆ ಭೂಮಿ ನೀಡಲು ಭೂಮಿ ಖರೀದಿಗಾಗಿ ಅನಿವಾರ್ಯವಾಗಿ ಈ ಜಿಲ್ಲೆಗೆ ೨೦ ಕೋಟಿ ರೂ. ನೀಡಲಾಗಿದೆ ಮುಂದಿನ ದಿನಗಳಲ್ಲಿ ಸರ್ಕಾರಿ ಭೂಮಿ ಒತ್ತುವರಿ ಯಾಗುವುದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಫಿ ತೋಟಗಳ ಮಾಲಕರು, ಪ್ರಭಾವಿಗಳು ಮಾಡಿರುವ ಒತ್ತುವರಿ ಜಾಗವನ್ನು ಲೀಸ್‌ಗೆ ನೀಡುವ ಸರಕಾರದ ತೀರ್ಮಾನದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಟಾರಿಯ, ಒತ್ತುವರಿ ಜಾಗವನ್ನು ಲೀಸ್‌ಗೆ ನೀಡುವ ಅಥವ ಕೈಬಿಡುವ ತೀರ್ಮಾನವನ್ನು ರಾಜ್ಯ ಸರಕಾರವೇ ಕೈಗೊಳ್ಳಲಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದಾಜಿ ೨೦ ಸಾವಿರ ಹೆಕ್ಟೇರ್, ಹಾಸನ ಜಿಲ್ಲೆಯಲ್ಲಿ ೫೦ ಸಾವಿರ, ಕೊಡಗು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಪಪ್ರಮಾಣದಲ್ಲಿ ಸರಕಾರಿ ಜಾಗವನ್ನು ಒತ್ತುವರಿ ಮಾಡಿರುವ ಪ್ರಕರಣಗಳು ವರದಿಯಾಗಿದ್ದು, ಈ ಸಂಬಂಧ ಅಗತ್ಯ ತೀರ್ಮಾನ ಕೈಗೊಳ್ಳಲಿದೆ ಎಂದರು.

ಕಂದಾಯ ಮತ್ತು ಅರಣ್ಯ ಇಲಾಖೆ ಭೂಮಿಯನ್ನು ಗುರುತಿಸಲು ಜಂಟಿಸರ್ವೆನಡೆಸಬೇಕಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಸಭೆ ನಡೆಸಲಾಗಿದೆ. ಪಂಚಾಯಿತಿ ಮಟ್ಟದಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆ ಭೂಮಿಯನ್ನು ಗುರುತಿಸಿ ಪಟ್ಟಿಯನ್ನು ಬಹಿರಂಗಗೊಳಿಸುತ್ತಿದ್ದು ಶಿಘ್ರದಲ್ಲಿಯೇ ಸ್ಪಷ್ಟತೆ ಸಿಗಲಿದೆ. ಬೇರೆ ಜಿಲ್ಲೆಯಿಂದ ಭೂಮಾಪಕರನ್ನು ಕಳುಹಿಸಿಕೊಡಲಾಗುವುದು. ಜಂಟಿ ಸರ್ವೆಯ ಬಳಿಕ ಈಗಿರುವ ಗೊಂದಲಗಳಿಗೆ ತೆರೆ ಬೀಳಲಿದೆ ಎಂದರು.

ಕುದುರೆಮುಖದಲ್ಲಿರುವ ೩೬೦ ಕಾರ್ಮಿಕ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲಾಗುತ್ತಿದ್ದು, ಅಲ್ಲಿ ಸರ್ವೆ ನಡೆಸಿದ ಬಳಿಕ ಕಂದಾಯ ಭೂಮಿ ಎಷ್ಟಿದೆ ಎಂಬುದು ನಿಖರವಾಗಿ ತಿಳಿಯಲಿದೆ. ಕುಟುಂಬಗಳ ಸ್ಥಳಾಂತರಕ್ಕೆ ಭೂಮಿಯನ್ನು ಹುಡುಕುವ ಕೆಲಸ ನಡೆದಿದೆ ಎಂದು ಹೇಳಿದರು.

ಕಡೂರು ತಾಲೂಕಿನಲ್ಲಿ ನಡೆದಿರುವ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಈಗಾಗಲೇ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಲಾಗಿದೆ.ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ. ಪೋಷಕರೊಂದಿಗೂ ಸಮಾಲೋಚನೆ ನಡೆಸಲಾಗಿದೆ.ಅಲ್ಲಿ ನಿರ್ಭಿತ ವಾತಾವರಣ ಕಲ್ಪಿಸಲಾಗಿದೆ ಎಂದು ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಗೋಪಾಲಕೃಷ್ಣ ತಿಳಿಸಿದರು.

ಆರೋಗ್ಯ ಇಲಾಖೆಯಲ್ಲಿ ವೈದ್ಯರ ಹುದ್ದೆ ಭರ್ತಿಯಾಗಿಲ್ಲ, ಮೆಡಿಕಲ್ ಕಾಲೇಜು ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಬಸವನಹಳ್ಳಿ ಕೆರೆಯ ಸಮೀಪದ ರಸ್ತೆ ಪಕ್ಕದಲ್ಲಿ ವಿದ್ಯುತ್ ದೀಪಗಳು ಉರಿಯದಿರುವ ಕುರಿತು ಗಮನ ಸೆಳೆಯಲಾಯಿತು.

ಪ್ರೆಸ್‌ಕ್ಲಬ್ ಅಧ್ಯಕ್ಷ ರಾಜೇಶ್ ಪ್ರಾಸ್ತಾವಿಕ ಮಾತನಾಡಿ, ಪ್ರೆಸ್‌ಕ್ಲಬ್ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು, ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ನಿವೇಶನದ ಆವಶ್ಯಕತೆ ಇದೆ. ಜಿಲ್ಲಾಡಳಿತ ಪ್ರೆಸ್‌ಕ್ಲಬ್‌ಗೆ ನಗರದ ವ್ಯಾಪ್ತಿಯಲ್ಲಿ ಸೂಕ್ತ ನಿವೇಶನ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ರಾಜೇಶ್, ಚಿಕ್ಕಮಗಳೂರು ತಹಶೀಲ್ದಾರ್ ಡಾ. ಸುಮಂತ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜೇಗೌಡ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಆರ್. ತಾರಾನಾಥ್ ಉಪಸ್ಥಿತರಿದ್ದರು. ಖಜಾಂಚಿ ಗೋಪಿ ಸ್ವಾಗತಿಸಿದರು. ನಿರ್ದೇಶಕ ಶಿವಕುಮಾರ್ ವಂದಿಸಿದರು.

Criminal proceedings against officers

About Author

Leave a Reply

Your email address will not be published. Required fields are marked *