September 16, 2024

ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡುತ್ತಿಲ್ಲ

0
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್ ಸುದ್ದಿಗೋಷ್ಟಿ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್ ಸುದ್ದಿಗೋಷ್ಟಿ

ಚಿಕ್ಕಮಗಳೂರು: ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ನಮ್ಮ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡುತ್ತಿಲ್ಲ, ಜನರ ನೋವುಗಳಿಗೆ ಸ್ಪಂದಿಸುತ್ತಿಲ್ಲವೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್ ಆರೋಪಿಸಿದರು.

ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಮಾತನಾಡಿ, ಜಿಲ್ಲೆಯ ಜನರು ಸಂಕಷ್ಟದಲ್ಲಿರುವಾಗ ಅವರುಗಳಿಗೆ ಸಾಂತ್ವನ ಹೇಳುತ್ತಿಲ್ಲ, ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುತ್ತಿಲ್ಲ, ನೆರೆಯಿಂದ ಭೂಮಿ ಕಳೆದುಕೊಂಡಿರುವ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿಲ್ಲವೆಂದು ದೂರಿದರು.

ಮಳೆಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಜಿಲ್ಲೆಯಲ್ಲಿ ತಲೆ ಎತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸಚಿವರು ಅಗತ್ಯ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆಂದು ಟೀಕಿಸಿದರು.

ಕಸ್ತೂರಿರಂಗನ್ ವರದಿಯ ತೂಗಗತ್ತಿ ನೇತಾಡುತ್ತಿದೆ. ಇದರಿಂದ ಸಂಕಟ ಎದುರಾಗಿದ್ದು, ಸಮಸ್ಯೆ ನಿವಾರಣೆಯ ನಿಟ್ಟಿನಲ್ಲಿ ಸರ್ವಪಕ್ಷದ ನಿಯೋಗವನ್ನು ದೆಹಲಿಗೆ ಕರೆದೊಯ್ಯಲು ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ಮುಂದಾಗುತ್ತಿಲ್ಲ, ಕಾಫಿಯನ್ನು ಸರ್ಪೆಸಿಕಾಯ್ದೆಯಿಂದ ಹೊರಗಿಡುವಲ್ಲಿ ಸಾಧ್ಯವಾಗಿಲ್ಲವೆಂದರು.

ಕೇಂದ್ರ ಸಚಿವರು ಮತ್ತು ಬಿಜೆಪಿ ಮುಖಂಡರು ಕಾಂಗ್ರೆಸ್ ನಾಯಕರ ವಿರುದ್ಧ ರಾಜಕೀಯ ಅಪಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಜನರ ಪರವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕಂದಾಯ ಮತ್ತು ಪರಿಭಾವಿತ ಅರಣ್ಯ ಸಮಸ್ಯೆ ಬಗೆಹರಿಸಲು ಬೆಂಗಳೂರಿನಲ್ಲಿ ಅರಣ್ಯ ಮತ್ತು ಜಿಲ್ಲೆಯ ಶಾಸಕರನ್ನೊಳಗೊಂಡಂತೆ ಸಭೆ ನಡೆಸಿದ್ದಾರೆಂದರು.

ತೆಂಗು ಬೆಳೆಗಾರರ ಸಮಸ್ಯೆ ಬಗೆಹರಿದಿಲ್ಲ, ಅವರ ನೆರವಿಗೆ ಧಾವಿಸಬೇಕಾಗಿದೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಅವುಗಳನ್ನು ಬಗೆಹರಿಸಬೇಕಾದ ಕೇಂದ್ರಸಚಿವೆ ನಾಪತ್ತೆಯಾಗಿದ್ದು, ಅವರನ್ನು ಹುಡುಕಿಕೊಡಬೇಕಾಗಿದೆ. ಯಾರು ನಾಪತ್ತೆಯಾಗಿದ್ದಾರೆಂಬುದು ಜಿಲ್ಲೆಯ ಜನರಿಗೆ ತಿಳಿದಿರುವ ವಿಷಯವೆಂದರು ಹೇಳಿದರು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನೆ ತೆರೆಯಲಿಲ್ಲ, ಈಗ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿಹಿಡಿದಿದ್ದು, ಜನರ ಸಮಸ್ಯೆ ನಿವಾರಣೆಗೆ ಜಿಲ್ಲಾಉಸ್ತುವಾರಿ ಸಚಿವರು ಕಚೇರಿ ತೆರೆದು ಜನರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದಾರೆ.ಸದ್ಯದಲ್ಲೆ ಅಭಿವೃದ್ಧಿ ಕೆಲಸಗಳು ಭರದಿಂದ ಸಾಗುತ್ತಿದ್ದು, ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ತಾಲೂಕಿನಾದ್ಯಂತ ಜನತಾದರ್ಶನ ಏರ್ಪಡಿಸುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ. ಜಿಲ್ಲಾಡಳಿತ ಚುರುಕಿನಿಂದ ಕೆಲಸ ನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಜಿಲ್ಲಾಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ರಾಜ್ಯ ಪ್ರಚಾರ ಸಮಿತಿ ಮುಖಂಡ ಬಿ.ಹೆಚ್.ಹರೀಶ್, ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ನಗರಕಾಂಗ್ರೆಸ್ ಅಧ್ಯಕ್ಷ ತನೋಜ್‌ಕುಮಾರ್ ಇದ್ದರು.

District Congress President Dr. Anshumant news conference

About Author

Leave a Reply

Your email address will not be published. Required fields are marked *