September 16, 2024

ದಲಿತ-ಶೋಷಿತರ ಹಕ್ಕುಗಳ ಜಾರಿಗೆ ರಾಜ್ಯಾದ್ಯಂತ ಸಮಾವೇಶ

0
ರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ರಾಜ್ಯ ಸಂಚಾಲಕ ಮಲ್ಲೇಶ್ ಅಂಬುಗ ಸುದ್ದಿಗೋಷ್ಠಿ

ರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ರಾಜ್ಯ ಸಂಚಾಲಕ ಮಲ್ಲೇಶ್ ಅಂಬುಗ ಸುದ್ದಿಗೋಷ್ಠಿ

ಚಿಕ್ಕಮಗಳೂರು: ಮುಂಬರುವ ೨೦೨೪ ರ ಲೋಕಸಭಾ ಚುನಾವಣೆಗೆ ಜಾಗೃತಿ ಮೂಡಿಸುವ ಸಲುವಾಗಿ ದಲಿತರ, ಶೋಷಿತರ ಹಕ್ಕುಗಳಿಗಾಗಿ ಆಗ್ರಹಿಸಿ ರಾಜ್ಯದ ೩೦ ಜಿಲ್ಲೆಗಳಲ್ಲಿ ಸಮಾವೇಶ ನಡೆಸಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ರಾಜ್ಯ ಸಂಚಾಲಕ ಮಲ್ಲೇಶ್ ಅಂಬುಗ ತಿಳಿಸಿದರು.

ನಗರಕ್ಕೆ ಆಗಮಿಸಿದ ಅವರು ಸಂವಿಧಾನ ರಕ್ಷಣೆಗಾಗಿ ಪ್ರಜಾಪ್ರಭುತ್ವ ಉಳಿವಿಗಾಗಿ ಹಾಗೂ ಶೋಷಿತ ಸಮುದಾಯಗಳ ಹಕ್ಕುಗಳ ಜಾರಿಗಾಗಿ ೩೦ ಜಿಲ್ಲೆಗಳಲ್ಲಿಯೂ ಸಮಾವೇಶಗಳನ್ನು ಆಯೋಜಿಸಿದ್ದು ಈಗಾಗಲೇ ಚಾಮರಾಜನಗರ, ಮೈಸೂರಿನಲ್ಲಿ ನಡೆದಿದ್ದು, ಡಿ.೩ ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಮಾವೇಶ ನಡೆಯಲಿದೆ ಎಂದರು.

ಜಿಲ್ಲಾ ಸಂಚಾಲಕ ಮರ್ಲೆ ಅಣ್ಣಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾವೇಶವನ್ನು ದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಉದ್ಘಾಟಿಸಲಿದ್ದು, ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ಚಿಂತಕರಾಗಿರುವ ಪ್ರೊ|| ಚಿನ್ನಸ್ವಾಮಿ ಸೋಸಲೆ ಅವರು ವಿಚಾರ ಮಂಡನೆ ಮಾಡಲಿದ್ದು ದಲಿತ ಮುಖಂಡರು, ಶಾಸಕರುಗಳು, ಜಿಲ್ಲೆಯ ಎಲ್ಲಾ ಪಕ್ಷಗಳ ಪ್ರಮುಖರನ್ನು ಸಮಾವೇಶಕ್ಕೆ ಆಹ್ವಾನಿಸಲಾಗಿದೆ ಎಂದು ಹೇಳಿದರು.

ಈ ಸಮಾವೇಶಗಳಲ್ಲಿ ಜಾತಿ ಜನಗಣತಿ ವರದಿ ಹಾಗೂ ನ್ಯಾಯಮೂರ್ತಿ ಕಾಂತರಾಜ್ ಆಯೋಗದ ವರದಿಯನ್ನು ಕಡ್ಡಾಯವಾಗಿ ಜಾರಿಗೊಳಿಸುವುದು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಹಣವನ್ನು ಸಂಪೂರ್ಣವಾಗಿ ದಲಿತ ಸಮೂಹಕ್ಕೆ ಸೀಮಿತವಾಗಿ ಬಳಸುವಂತೆ ಒತ್ತಾಯಿಸಲಾಗುವುದೆಂದು ತಿಳಿಸಿದರು.

ಜಾತಿಗಳ ಜನಗಣತಿ ವರದಿ ಜಾರಿಗೆ ಕೆಲವರು ವಿರೋಧಿಸುತ್ತಿದ್ದು, ಸರ್ಕಾರವು ಈ ವರದಿಯ ಮೂಲ ಪ್ರತಿ ಕಾಣೆಯಾಗಿರುವುದಾಗಿ ಹೇಳುತ್ತಿರುವುದು ಸಮಂಜಸವಲ್ಲ. ಸುಮಾರು ೧೮ ಕೋಟಿ ರೂ ಖರ್ಚು ಮಾಡಿ ಸಮಗ್ರವಾಗಿ ಸಿದ್ಧಪಡಿಸಿರುವ ಜಾತಿ ಜನಗಣತಿ ವರದಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಅದೇ ರೀತಿ ನ್ಯಾಯ ಮೂರ್ತಿ ಸದಾಶಿವ ಆಯೋಗದ ವರದಿಯ ಜಾರಿಗೆ ಯಾರ ವಿರೋಧವೂ ಇಲ್ಲ ಈ ಎಲ್ಲಾ ವರದಿಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದಲ್ಲಿ ಸುಮಾರು ೧.೦೮ ಕೋಟಿ ಜನಸಂಖ್ಯೆ ಹೊಂದಿರುವ ದಲಿತ ಸಮೂಹಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ನೀಡಬೇಕೆಂಬುದು ದಲಿತ ಪರ ಸಂಘಟನೆಗಳ ಆಗ್ರಹವಾಗಿದೆ ಎಂದು ತಿಳಿಸಿದರು.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೋಮುವಾದಿ ಪಕ್ಷ ಆಡಳಿತಕ್ಕೆ ಬರುವುದನ್ನು ತಡೆಯಲು ಎಲ್ಲಾ ದಲಿತ ಸಂಘಟನೆಗಳು ಶ್ರಮಿಸಿದ್ದವು. ಅದೇ ರೀತಿ ಮುಂಬರುವ ಲೋಕಸಭಾ ಚುನಾವಣೆಗೂ ಕೋಮುವಾದಿ ಪಕ್ಷಗಳು ಅಧಿಕಾರಕ್ಕೆ ಬರದಂತೆ ತಡೆಯಲು ಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿವರಿಸಿದರು.

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಹೊಸ ಸಂಸತ್ ಭವನದ ಎದುರು ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲು ಪ್ರಯತ್ನಿಸಲಿಲ್ಲ, ಸುಪ್ರೀಂಕೋರ್ಟ್ ಆದೇಶದಂತೆ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವ ನಿರ್ಧಾರ ಮಾಡಿದೆ. ಅದೇ ರೀತಿ ಹೊಸ ಸಂಸತ್ ಭವನ ಉದ್ಘಾಟನೆಗೆ ಶೂದ್ರ ಸಮುದಾಯದಿಂದ ಬಂದಿರುವ ಮಹಿಳೆ ರಾ?ಪತಿಯವರನ್ನು ಆಹ್ವಾನಿಸದಿರುವುದು ಖಂಡನೀಯ ಎಂದರು.

ಪತ್ರಿಕಾಗೋಷ್ಠಿಯಲ್ಲಿ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಸಂತೋ? ಲಕ್ಯ, ಹರೀಶ್, ಮಂಜುನಾಥ್, ಸಣ್ಣಪ್ಪ ಉಪಸ್ಥಿತರಿದ್ದರು.

Karnataka Dalit Sangharsh Samiti (Ambedkarism) State Coordinator Mallesh Ambuga Press Conference

About Author

Leave a Reply

Your email address will not be published. Required fields are marked *