September 16, 2024

ಬಿಜೆಪಿಗೆ ಜಯ ಮುಂಬರುವ ಲೋಕಸಭಾ ಚುನಾವಣೆಯ ಫಲಿತಾಂಶದ ದಿಕ್ಸೂಚಿ

0
ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ ಕಲ್ಮರಡಪ್ಪ ಪತ್ರಿಕಾಗೋಷ್ಠಿ

ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ ಕಲ್ಮರಡಪ್ಪ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ಉತ್ತರ ಭಾರತದ ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಬಿಜೆಪಿಗೆ ಅಭೂತಪೂರ್ವ ಜಯ ತಂದುಕೊಟ್ಟಿದ್ದು ಮುಂಬರುವ ಲೋಕಸಭಾ ಚುನಾವಣೆಯ ಫಲಿತಾಂಶದ ದಿಕ್ಸೂಚಿ ಆಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ ಕಲ್ಮರಡಪ್ಪ ತಿಳಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮಧ್ಯಪ್ರದೇಶದಲ್ಲಿ ೧೬೩ ಸ್ಥಾನಗಳು, ರಾಜಸ್ಥಾನದಲ್ಲಿ ೧೧೫, ಛತ್ತೀಸ್‌ಗಡ್‌ನಲ್ಲಿ ೫೪ ಸ್ಥಾನಗಳನ್ನು ನೀಡುವ ಮೂಲಕ ಪ್ರಧಾನಿ ನರೇಂದ್ರಮೋದಿ ನಾಯಕತ್ವವನ್ನು ಒಪ್ಪಿ ಸರ್ಕಾರ ರಚಿಸಲು ಬಹುಮತ ನೀಡಿದ್ದು ಆ ರಾಜ್ಯದ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷ ೫ ಗ್ಯಾರಂಟಿಗಳನ್ನು ಜಾರಿಗೆ ತರುವ ಭರವಸೆ ನೀಡಿತ್ತಾದರೂ ಕರ್ನಾಟಕದಲ್ಲಿ ೫ ಗ್ಯಾರಂಟಿಗಳನ್ನು ಪೂರ್ಣವಾಗಿ ಜಾರಿಗೆ ತರದೆ ಜನರಿಗೆ ಮೋಸ ಮಾಡುತ್ತಿರುವುದು ಇಡೀ ದೇಶಕ್ಕೆ ಗೊತ್ತಾಗಿದೆ, ಈಗ ರಾಜ್ಯದಲ್ಲಿ ವಿದ್ಯುತ್ ದರ, ನೊಂದಣಿ ಶುಲ್ಕ, ಮದ್ಯದ ದರವನ್ನು ಹೆಚ್ಚಿಸಿ ಜನರ ದುಡ್ಡನ್ನು ಲೂಟಿ ಹೊಡೆಯುತ್ತಿದ್ದಾರೆ. ವರ್ಗಾವಣೆ ದಂಧೆಯಲ್ಲಿ ಕಾಲಹರಣ ಮಾಡುತ್ತಾ ಭ್ರ?ಚಾರದಲ್ಲಿ ಮುಳುಗಿದ್ದಾರೆ ಎಂದು ಟೀಕಿಸಿದರು.

ಈಗ ನಡೆದಿರುವ ಫಲಿತಾಂಶದಿಂದ ಮೋದಿಯವರ ನಾಯಕತ್ವಕ್ಕೆ ಮತ್ತೊಮ್ಮೆ ಜನಮನ್ನಣೆ ನೀಡುವ ದಿಕ್ಸೂಚಿ ವ್ಯಕ್ತವಾಗಿದ್ದು, ಐಎನ್‌ಡಿಐಅ ಕೂಟವನ್ನು ಕಟ್ಟಿಕೊಂಡು ದೇಶದ ವಿರುದ್ಧ ಮೋದಿ ವಿರುದ್ಧ ಅಪಪ್ರಚಾರ ಮಾಡುವುದನ್ನು ಇನ್ನಾದರೂ ನಿಲ್ಲಿಸಬೇಕು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ೨೮ ಸ್ಥಾನಗಳು ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ದಾಖಲೆ ಅಂತರದಲ್ಲಿ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ವಕೀಲರು ಹಾಗೂ ಪೋಲೀಸರ ನಡುವೆ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ನಿಷ್ಕ್ರಿಯವಾಗಿದ್ದಾರೆ, ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರು ಗಮನ ಹರಿಸಿ ಸಮಸ್ಯೆ ಬಗೆಹರಿಸದೆ ಇರುವುದು ವಿ?ಧದ ಸಂಗತಿ. ಜಿಲ್ಲೆಗೆ ನೇತಾರರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಬರಪರಿಸ್ಥಿತಿಯಿಂದ ಜಿಲ್ಲೆಯ ಜನರು ಸಂಕ?ದಲ್ಲಿದ್ದಾರೆ. ಕಾಟಾಚಾರಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ರಾಜ್ಯ ಸರ್ಕಾರ ಬಿಡುಗಾಸನ್ನು ಬಿಡುಗಡೆ ಮಾಡಿಲ್ಲ ಉಸ್ತುವಾರಿ ಸಚಿವರು ಈ ಜಿಲ್ಲೆಗೆ ಸಂಬಂಧವೇ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ, ಜಿಲ್ಲೆಯ ಶಾಸಕರುಗಳು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆರಂಭಗೊಂಡಿದ್ದ ಹಾಗೂ ಅರ್ಧಕ್ಕೆ ನಿಂತ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅನುಧಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಟಿ.ರಾಜಶೇಖರ್, ಮುಖಂಡರುಗಳಾದ ಮಧುಕುಮಾರ್ ರಾಜ್ ಅರಸ್, ದೇವರಾಜಶೆಟ್ಟಿ, ಪು?ರಾಜ್, ಹೆಚ್.ಎಸ್ ಪುಟ್ಟಸ್ವಾಮಿ, ಕೌಶಿಕ್ ಸಚಿನ್ ಮತ್ತಿತರರು ಉಪಸ್ಥಿತರಿದ್ದರು.

BJP district president HC Kalmardappa press conference

About Author

Leave a Reply

Your email address will not be published. Required fields are marked *