September 16, 2024

ವಕೀಲ ಪ್ರೀತಮ್ ಮೇಲಿನ ಹಲ್ಲೆ ಪ್ರಕರಣದ ಸಿಐಡಿ ತನಿಖೆ ಆರಂಭ

0
CID investigation into the attack on lawyer Pritam has started

CID investigation into the attack on lawyer Pritam has started

ಚಿಕ್ಕಮಗಳೂರು: ಯುವ ವಕೀಲ ಪ್ರೀತಮ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಈ ಹಿನ್ನಲೆಯಲ್ಲಿ ಬುಧವಾರ ಸಿಐಡಿ ಅಧಿಕಾರಿಗಳು ನಗರಕ್ಕೆ ಆಗಮಿಸಿ ತನಿಖೆ ಆರಂಭಿಸಿದರು.

ಬೆಂಗಳೂರಿನಿಂದ ಬೆಳಿಗ್ಗೆ ಚಿಕ್ಕಮಗಳೂರು ಪ್ರವಾಸಿಮಂದಿರಕ್ಕೆ ಆಗಮಿಸಿದ ಸಿಐಡಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್, ಡಿವೈಎಸ್ಪಿ ಉಮೇಶ್ ಮತ್ತು ಕಾನೂನು ಸಲಹೆಗಾರ ಕಾಳೆ ಅವರು ಪ್ರಕರಣದಲ್ಲಿನ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ. ತನಿಖೆ ಇನ್ನೇರೆಡು ದಿನಗಳು ಮುಂದುವರೆಯುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಯುವ ವಕೀಲ ಪ್ರೀತಮ್ ಅವರ ಮೇಲಿನ ಹಲ್ಲೆ ಪ್ರಕರಣ ರಾಜ್ಯಮಟ್ಟದಲ್ಲಿ ಬಾರೀ ಸದ್ದು ಮಾಡಿತ್ತು. ಈ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿ ಸಿಕೊಂಡಿತ್ತು. ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಕೀಲರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು.

ಘಟನೆ ಖಂಡಿಸಿ ರಾಜ್ಯಾದ್ಯಂತ ವಕೀಲರು ಪ್ರತಿಭಟನೆ ನಡೆಸಿದ್ದರು. ಪ್ರತಿಯಾಗಿ ಪೊಲೀಸರು ತಮ್ಮ ಕರ್ತವ್ಯಕ್ಕೆ ವಕೀಲರು ಅಡ್ಡಿಪಡಿಸಿದ್ದಾರೆ ಅವರ ವಿರುದ್ಧ ಕ್ರಮಕೈಗೊಳ್ಳಬೇ ಕೆಂದು ಆಗ್ರಹಿಸಿ ಪೊಲೀಸರು ಪ್ರತಿಭಟನೆ ನಡೆಸಿದ್ದರು. ಪ್ರಕರಣದ ಗಂಭೀರತೆಯನ್ನು ಅರಿತ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ತನಿಖೆ ಹೊಣೆಯನ್ನು ಸಿಐಡಿವಹಿಸಿರುವುದಕ್ಕೆ ಉಚ್ಚ ನ್ಯಾಯಾಲಯ ಸಮ್ಮತಿಸಿದೆ.

ಪ್ರಕರಣದ ವಿಚಾರಣೆಯನ್ನು ಮಂಗಳವಾರ ಮುಖ್ಯನ್ಯಾಯಾಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಾಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರನ್ನೊಳಗೊಂಡ ವಿಭಾಗೀಯ ಪೀಠ ಕೈಗೆತ್ತಿಕೊಂಡು ಡಿ.೧೨ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೆ ಸಿಐಡಿ ಪೊಲೀಸರು ನಗರಕ್ಕೆ ಆಗಮಿಸಿ ಪ್ರಕರಣದ ತನಿಖೆಗೆ ಮುಂದಾಗಿದ್ದಾರೆ.

CID investigation into the attack on lawyer Pritam has started

About Author

Leave a Reply

Your email address will not be published. Required fields are marked *