September 19, 2024

ಶಾಂತಿಯುತ ದತ್ತ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ

0
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಿನ್ನೆ ನಡೆದ ದತ್ತ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಿನ್ನೆ ನಡೆದ ದತ್ತ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ

ಚಿಕ್ಕಮಗಳೂರು: ಡಿಸೆಂಬರ್ ೨೪ ರಿಂದ ೨೬ ರವರೆಗೆ ನಡೆಯುವ ದತ್ತ ಜಯಂತಿ ಕಾರ್ಯಕ್ರಮವನ್ನು ಶಾಂತಿಯುತವಾಗಿ  ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಿನ್ನೆ ನಡೆದ ದತ್ತ ಜಯಂತಿ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರ ಮತ್ತು ನ್ಯಾಯಲಯದ ಸೂಚನೆಯಂತೆ ವ್ಯವಸ್ಥಾಪನ ಸಮಿತಿ ಮೂಲಕ ಮೂರು ದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಇದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದ ಅವರು. ಈ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನೇಮಿಸಿ ಶಿಷ್ಟಾಚಾರದಂತೆ ದತ್ತ ಜಯಂತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಹಲವು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ನೀಡಲಾಗಿದೆ.

ದತ್ತ ಜಯಂತಿ ಕಾರ್ಯಕ್ರಮಕ್ಕೆ ಅಲ್ಲಂಪುರದಿಂದ ಐ.ಡಿ ಪೀಠದವರೆಗೆ ರಸ್ತೆ, ಕುಡಿಯುವ ನೀರು, ಪಾರ್ಕಿಂಗ್, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ, ಆರೋಗ್ಯ ಸೇವೆ ಮತ್ತು ವಾಹನಗಳ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದ ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಶಾಂತಿ ಮತ್ತು ವ್ಯವಸ್ಥಿತವಾಗಿ ನಡೆಯಲು ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ವ್ಯವಸ್ಥಾಪನ ಸಮಿತಿಯು ಪೂಜಾ ವಿಧಿ ವಿಧಾನಗಳನ್ನು ಮಾಡಲು ಎಲ್ಲ ರೀತಿಯ ಸಹಕಾರವನ್ನು ನೀಡಲಾಗಿದ್ದು, ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಸೇರಿದಂತೆ ಡಿಸೆಂಬರ್ ೨೪ ಮತ್ತು ೨೬ ರಂದು ಐ.ಡಿ ಪೀಠಕ್ಕೆ ಬರುವ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹೊರ ಜಿಲ್ಲೆಗಳಿಂದ ಬರುವ ಭಕ್ತರು ಲಾಂಗ್‌ಚಾರ್ಸಿ ಹೊಂದಿದ ಬಸ್ ಅಥವಾ ಇತರೆ ವಾಹನಗಳನ್ನು ಬಳಸದೆ ಸಣ್ಣ-ಸಣ್ಣ ವಾಹನಗಳಲ್ಲಿ ಭಕ್ತರು ಬಂದು ದರ್ಶನ ಪಡೆದುಕೊಳ್ಳಬೇಕು.

ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಅದೇ ಸ್ಥಳದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿಕೊಳ್ಳಬೇಕಾಗಿದೆ. ಬರುವ ಭಕ್ತರಿಗೆ ಅನುಕೂಲವಾಗುವಂತೆ ಫಲಕಗಳನ್ನು ಹಾಕಲಾಗಿದ್ದು, ಅವುಗಳನ್ನು ಪಾಲಿಸುವಂತೆ ಹಾಗೂ ಬರುವ ಭಕ್ತರು ಯಾವುದೇ ಕಾರಣಕ್ಕೂ ಅಹಿತಕರ ವಾತಾವರಣ ಉಂಟಾಗದಿರುವಂತೆ ಸಹಕರಿಸಬೇಕು ೨೪ ರಂದು ಬೆಳಿಗ್ಗೆ  ೮.೦೦ ಗಂಟೆಗೆ ಯಿಂದ ಪ್ರಾರಂಭವಾಗುವ ಪೂಜಾ ವಿಧಿ ವಿಧಾನಗಳ ಜೊತೆಗೆ ಅನುಸೂಯ ಜಯಂತಿ ಇರಲಿದ್ದು, ೨೫ ರಂದು ಅದೇ ರೀತಿ ಪೂಜಾ ಕಾರ್ಯಕ್ರಮಗಳ ಜೊತೆ ೨೬ ರಂದು ದತ್ತ ಜಯಂತಿ ಜರುಗಲಿದ್ದು, ಪ್ರತಿಯೊಬ್ಬರು ಶಾಂತಿಯಿಂದ ಐ.ಡಿ ಪೀಠಕ್ಕೆ ಭೇಟಿ ನೀಡಿ ದರ್ಶನ ಪಡೆಯಬೇಕು ಎಂದು ಹೇಳಿದರು.

ಜಿ.ಪಂ. ಕಾರ್ಯ ನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಪೊಲೀಸ್ ವರಿಷ್ಠಾಧಿಕಾರಿಗಳಾದ ವಿಕ್ರಂ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಕೃಷ್ಣಮೂರ್ತಿ, ಉಪವಿಭಾಗಾಧಿಕಾರಿ ರಾಜೇಶ್, ತಹಸೀಲ್ದಾರ್ ಡಾ. ಸುಮಂತ್, ಐ.ಡಿ ಪೀಠದ ಕಾರ್ಯ ನಿರ್ವಾಹಕಾಧಿಕಾರಿ ಕೆ.ಎನ್. ಯೋಗೇಶ ಹಾಗೂ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರುಗಳು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು, ಮುಖಂಡರುಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು  ಸಭೆಯಲ್ಲಿ ಹಾಜರಿದ್ದರು.

The district administration is fully prepared for the peaceful Dutta Jayanti programme

About Author

Leave a Reply

Your email address will not be published. Required fields are marked *

You may have missed