September 19, 2024

ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಬೇಕಾದರೆ ವಿದ್ಯಾರ್ಥಿಗಳಲ್ಲಿ ಪ್ರೀತಿ, ವಾತ್ಸಲ್ಯ ತುಂಬಿರಬೇಕು

0
ಎ.ಐ.ಟಿ ವೃತ್ತದಲ್ಲಿ ಇರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಸಹ್ಯಾದ್ರಿ ಇನ್ಸಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್‌ಸೈನ್ಸ್ ಏರ್ಪಡಿಸಲಾಗಿದ್ದ ವಿದ್ಯಾರ್ಥಿ ಸಂಘಟನೆ ಹಾಗೂ ವಾರ್ಷಿಕೋತ್ಸವ

ಎ.ಐ.ಟಿ ವೃತ್ತದಲ್ಲಿ ಇರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಸಹ್ಯಾದ್ರಿ ಇನ್ಸಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್‌ಸೈನ್ಸ್ ಏರ್ಪಡಿಸಲಾಗಿದ್ದ ವಿದ್ಯಾರ್ಥಿ ಸಂಘಟನೆ ಹಾಗೂ ವಾರ್ಷಿಕೋತ್ಸವ

ಚಿಕ್ಕಮಗಳೂರು: ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಬೇಕಾದರೆ ವಿದ್ಯಾರ್ಥಿಗಳಲ್ಲಿ ಶಾಂತಿ, ಸಹಬಾಳ್ವೆ, ಸಹನೆ, ಪ್ರೀತಿ, ವಾತ್ಸಲ್ಯ ತುಂಬಿರಬೇಕು ಇವುಗಳನ್ನು ಅಳವಡಿಸಿಕೊಂಡಾಗ ಮಾತ್ರ ದೇಶ ಅತ್ಯಂತ ಬಲಿಷ್ಠವಾಗಿರುತ್ತದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಗೌರವ ಕಾರ್ಯದರ್ಶಿ ಎಂ.ಸಿ.ಪ್ರಕಾಶ್ ತಿಳಿಸಿದರು.

ಅವರು ಇಂದು ಎ.ಐ.ಟಿ ವೃತ್ತದಲ್ಲಿ ಇರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಸಹ್ಯಾದ್ರಿ ಇನ್ಸಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್‌ಸೈನ್ಸ್ ಏರ್ಪಡಿಸಲಾಗಿದ್ದ ವಿದ್ಯಾರ್ಥಿ ಸಂಘಟನೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಪ್ರತಿಯೊಬ್ಬ ವ್ಯಕ್ತಿಯು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದಾಗ ವಿದ್ಯಾರ್ಥಿಗಳಲ್ಲಿ ಇರುವ ಸುಪ್ತ ಪ್ರತಿಭೆಗಳನ್ನು ಹೊರ ತರಲು ಸಾದ್ಯ, ಈ ನಿಟ್ಟಿನಲ್ಲಿ ಪ್ಯಾರಾ ಮೆಡಿಕಲ್ ಕಾಲೇಜು ಉತ್ತಮ ಶಿಕ್ಷಣ ಸೇವೆ ನೀಡುತ್ತಿದೆ ಎಂದು ಶ್ಲಾಘಿಸಿದರು.

ವಿದ್ಯಾರ್ಥಿ ಯುವಜನರಯ ಹಗಲಿರುಳು ದೇಶದ ಬಗ್ಗೆ ಚಿಂತನೆ ನೆಡೆಸುವುದು ಉತ್ತಮ ಸಮಾಜ ನಿರ್ಮಾಣ ಮಾಡವಲ್ಲಿ ವಿದ್ಯಾರ್ಥಿನಿಯರ ಪಾತ್ರ ಪ್ರಶಂಸನೀಯ ಎಂದು ಹೇಳಿದರು.

ಟಿಬೆಟ್, ನಾರ್ವೆ ಮುಂತಾದ ದೇಶಗಳಲ್ಲಿ ಒಂದು ಕುಟುಂಬದ ವ್ಯವಸ್ಥೆಯ ರೀತಿ ಇರುತ್ತದೆ, ಶಾಂತಿ ಕದಡುವ ಯಾವುದೇ ರೀತಿಯ ಘಟನೆಗಳಿಗೆ ಅವಕಾಶ ಇರುವುದಿಲ್ಲ, ವಿದ್ಯಾರ್ಥಿಗಳು ಸ್ವ-ಇಚ್ಚೆಯಿಂದ ಈ ಶಿಕ್ಷಣಕ್ಕೆ ತೊಡಗಿಸಿಕೊಂಡಿದ್ದರೆ, ತಮ್ಮನ್ನು ತಾವು ಸಮಾಜ ಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪೂರಕ, ಪ್ರೇರಕ ಎಂದು ಬಣ್ಣಿಸಿದರು.

ನಾಯಕತ್ವದ ಗುಣ ಹೊಂದಲು ಶಿಕ್ಷಣ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳ ಆಶೋತ್ತರಗಳನ್ನು ಈಡೇರಿಸಿಕೊಳ್ಳಲು ಹಾಗೂ ಮುಂದಿನ ರಾಜಕೀಯ ಭವಿಷ್ಯವನ್ನು ಉಜ್ವಲಗೊಳಿಸಲು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಇಂದು ವಿದ್ಯಾರ್ಥಿ ಸಂಘಟನೆ ಸ್ಥಾಪನೆಯಾಗಿರುವುದು ತುಂಬಾ ಪ್ರಯೋಜನಕಾರಿ ಎಂದರು.

ಜಿಲ್ಲಾ ಶಿಕ್ಷಣ ಸಂಯೋಜಕ ಮಂಜುನಾಥ್ ಮಾತನಾಡಿ ಮಹಿಳೆಯರು ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಾಯಕಿಯರಾಗಬೇಕು, ಜೊತೆಗೆ ಸ್ತ್ರೀ ಶಕ್ತಿ ಹೊರಹೊಮ್ಮಬೇಕು, ಪುರುಷ ಪ್ರಧಾನ ಸಮಾಜದಲ್ಲಿ ಇತ್ತೀಚೆಗೆ ಮಹಿಳೆಯರು ಹೆಚ್ಚು-ಹೆಚ್ಚು ನಾಯಕರಾಗುತ್ತಿರುವುದು ಶ್ಲಾಘನೀಯ ಎಂದರು.
ವಿದ್ಯಾರ್ಥಿಗಳು ಕಲಿತ ಶಿಕ್ಷಣ ಉತ್ತಮ ಜೀವನ ನಡೆಸಲು ಪ್ರೀಸಿಯಸ್ ದಿನ ಆಚರಣೆಗೆ ನಿಜ ಅರ್ಥ ಬರುತ್ತದೆ, ಈ ನಿಟ್ಟಿನಲ್ಲಿ ಪ್ರತಿಯೊಬ್ಬರಯ ಇದು ನನ್ನ ಕಾಲೇಜು, ನನ್ನ ಶಾಲೆ ಎಂಬ ಅಭಿಮಾನ ಬೆಳೆಸಿಕೊಂಡು ಗೌರವಿಸಬೇಕಾಗಿದೆ ಎಂದು ಹೇಳಿದರು.

ಶಾಲಾ ಕಾಲೇಜುಗಳಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ವೃತ್ತಿ ಜೀವನವನ್ನು ನಿರ್ಧರಿಸುವ ಕೇಂದ್ರಗಳಾಗಿವೆ, ಅವುಗಳನ್ನು ಸ್ಮರಿಸಿಕೊಳ್ಳುವ ಮೂಲಕ ಸ್ವಚ್ಚತೆಯ ಕಡೆಗೂ ವಿದ್ಯಾರ್ಥಿಗಳು ಆದ್ಯಗಮನ ನೀಡಬೇಕು ಎಂದು ಕರೆ ನೀಡಿದರು.

ಸಹ್ಯಾದ್ರಿ ಪ್ಯಾರಾ ಮೆಡಿಕಲ್ ಕಾಲೇಜು ಸಂಸ್ಥಾಪಕಿ ನಳಿನಾಡಿಸಾ ಮಾತನಾಡಿ ನಮ್ಮ ಕಾಲೇಜಿನಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ನೀಡಲಾಗುತ್ತದೆ, ನಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಇಂದು ಉತ್ತಮ ಸ್ಥಾನದಲ್ಲಿದ್ದಾರೆ ಎಂದರು ಪ್ರಾಂಶುಪಾಲರಾದ ಉಲ್ಲಾಸ್, ಉಪಾಧ್ಯಾಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Anniversary organized by Sahyadri Institute of Para Medical Sciences

About Author

Leave a Reply

Your email address will not be published. Required fields are marked *

You may have missed