September 19, 2024

ವಿದ್ಯಾರ್ಥಿಗಳಿಗಾಗಿ ಡಿ.20 ರಿಂದ 22 ರವರೆಗೆ 3 ದಿನಗಳ ತರಬೇತಿ ಶಿಬಿರ

0
ಎನ್‌ಎಸ್‌ಯುಐ ಜಿಲ್ಲೆಯ ಉಸ್ತುವಾರಿ ಸವಾರ್ ಸುಳ್ಯ ಪತ್ರಿಕಾಗೋಷ್ಠಿ

ಎನ್‌ಎಸ್‌ಯುಐ ಜಿಲ್ಲೆಯ ಉಸ್ತುವಾರಿ ಸವಾರ್ ಸುಳ್ಯ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆಯಾದ ಎನ್‌ಎಸ್‌ಯುಐ ವತಿಯಿಂದ ಮಲೆನಾಡು ಹಾಗೂ ಕರಾವಳಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಡಿ.೨೦ ರಿಂದ ೨೨ ರವರೆಗೆ ೩ ದಿನಗಳ ತರಬೇತಿ ಶಿಬಿರವನ್ನು ಕುಂದಾಪುರದ ಪ್ರಥಮ್ ವೈಲ್ಡ್ ವ್ಯಾಲಿ ರೆಸಾರ್ಟ್‌ನಲ್ಲಿ ಏರ್ಪಡಿಸಲಾಗಿದೆ.

ಎನ್‌ಎಸ್‌ಯುಐ ರಾಜ್ಯ ಘಟಕದ ಉಪಾಧ್ಯಕ್ಷರು ಹಾಗೂ ಈ ಜಿಲ್ಲೆಯ ಉಸ್ತುವಾರಿ ಆಗಿರುವ ಸವಾರ್ ಸುಳ್ಯ ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

’ಭದ್ರವಾದ ಭಾರತಕ್ಕಾಗಿ ವಿದ್ಯಾರ್ಥಿ ಒಕ್ಕೂಟ’ ಎಂಬ ದ್ಯೇಯವಾಕ್ಯದೊಂದಿಗೆ ವಿದ್ಯಾರ್ಥಿ ಸಂಘಟನೆಯನ್ನು ಬಲಿ?ಗೊಳಿಸುವ ಉದ್ದೇಶದಿಂದ ಈ ತರಬೇತಿ ಶಿಬಿರವನ್ನು ವ್ಯವಸ್ಥೆಗೊಳಿಸಿದ್ದು ೨೮೦ಕ್ಕೂ ಹೆಚ್ಚು ವಿದ್ಯಾರ್ಥಿ ಮುಖಂಡರು ಈ ಶಿಬಿರದಲ್ಲಿ ಭಾಗವಹಿಸಲಿದ್ದು ಜಿಲ್ಲೆಯಿಂದ ೬೦ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ರಾಜ್ಯದ ನಾಲ್ಕು ವಿಭಾಗಗಳಲ್ಲಿ ಈ ರೀತಿಯ ತರಬೇತಿ ಶಿಬಿರವನ್ನು ನಡೆಸುತ್ತಿದ್ದು ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳು ಸೇರಿ ಕರಾವಳಿ ಮತ್ತು ಮಲೆನಾಡು ಭಾಗದ ವಿದ್ಯಾರ್ಥಿಗಳಿಗಾಗಿ ಕುಂದಾಪುರದಲ್ಲಿ ಶಿಬಿರ ನಡೆಯಲಿದೆ. ಅದೇ ರೀತಿ ಬೆಳಗಾವಿಯಲ್ಲಿ ಮತ್ತು ಬೆಂಗಳೂರಿನಲ್ಲಿ ಶಿಬಿರ ನಡೆಯಲಿದ್ದು ಅಂತಿಮವಾಗಿ ಬೆಂಗಳೂರಿನಲ್ಲಿ ನಡೆಯುವ ಶಿಬಿರಕ್ಕೆ ೧೫೦೦ ಹೆಚ್ಚು ವಿದ್ಯಾರ್ಥಿ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಇವರ ನೇತೃತ್ವದಲ್ಲಿರುವ ಸಂಘಟನೆಯಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಪ್ರತಿ ಶಿಕ್ಷಣ ಸಂಸ್ಥೆಗಳಲ್ಲಿ ಗೇಟ್ ಕ್ಯಾಂಪ್ ಎಂಬ ಕಾರ್ಯಕ್ರಮ ರೂಪಿಸಿ ವಿದ್ಯಾರ್ಥಿಗಳ ಸಮಸ್ಯೆಗಳು ಹಾಗೂ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ತಲುಪುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು ಪರಿಹಾರಕ್ಕಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ತಿಳಿಸಿದರಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಉನ್ನತೀಕರಿಸಲು ಪಠ್ಯಪುಸ್ತಕ, ಸಮವಸ್ತ್ರ ವಿತರಣೆ, ಶಕ್ತಿದಾಯಕ ಆಹಾರ ಪೂರೈಕೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಅನು?ನಗೊಳಿಸಿದೆ ಎಂದರು.

ದೇಶಕ್ಕಾಗಿ ವಿದ್ಯಾರ್ಥಿ ನಾಯಕತ್ವವನ್ನು ಬಲಿ?ಗೊಳಿಸಲು ಎನ್‌ಎಸ್‌ಯುಐ ವತಿಯಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಎನ್‌ಎಸ್‌ಯುಐ ಮುಖಂಡರುಗಳಾದ ಸುಮಂತ್, ಧ್ರುವಕುಮಾರ್, ತರುಣ್, ಚೇತನ್, ಪ್ರಜ್ವಲ್ ಉಪಸ್ಥಿತರಿದ್ದರು.

NSUI district in-charge Savar Sulya press conference

About Author

Leave a Reply

Your email address will not be published. Required fields are marked *

You may have missed