September 19, 2024

ಆಮ್ ಆದ್ಮಿ ಪಕ್ಷವನ್ನು ತಳಮಟ್ಟದಿಂದ ಸಂಘನೆಗೆ ಅರಳೀಕಟ್ಟೆ ಸಂವಾದ

0
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಸುದ್ದಿಗೊಷ್ಠಿ

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಸುದ್ದಿಗೊಷ್ಠಿ

ಚಿಕ್ಕಮಗಳೂರು: ಆಮ್ ಆದ್ಮಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಪಕ್ಷದಿಂದ ಅರಳೀಕಟ್ಟೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕ್ರೇಜಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಭ್ರಷ್ಟಚಾರ ಮುಕ್ತ ಉತ್ತಮ ಆಡಳಿತ ನೀಡುತ್ತಿದೆ. ಪಂಜಾಬ್ ಮತ್ತು ಹರಿಯಾಣದಲ್ಲಿ ಅಧಿಕಾರ ಹಿಡಿದಿದೆ. ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಪಕ್ಷದ ಮುಖಂಡರು ಹಳ್ಳಿ ಹಳ್ಳಿಗೆ ಭೇಟಿ ನೀಡಿ ಅಲ್ಲಿನ ಜನರು ಎದುರಿಸುತ್ತಿರುವ ಕಷ್ಟನಷ್ಟಗಳನ್ನು ಆಲಿಸಿ, ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ವರ್ಷ ಕಳೆದಿದೆ. ಇಂದಿಗೂ ಗ್ರಾಮೀಣ ಪ್ರದೇಶದ ಜನರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ನಮ್ಮ ಮತಗಳನ್ನು ಪಡೆದು ನಿಮ್ಮ ಸೇವಕರಾಗಿ ಕೆಲಸ ಮಾಡುತ್ತೇವೆ ಎನ್ನುವ ಜನಪ್ರತಿನಿಧಿಗಳು ಗೆದ್ದು ಬಂದ ಮೇಲೆ ಜನರನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆ. ಹಿಂದೆ ಬ್ರಿಟಿಷರನ್ನು ಭಾರತ ಬಿಟ್ಟು ತೊಲಗಿ ಎನ್ನುವಂತೆ ಇಂದಿನ ಜನಪ್ರತಿನಿಧಿಗಳಿಗೆ ರಾಜಕೀಯ, ಅಧಿಕಾರ ಬಿಟ್ಟು ತೊಲಗಿ ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಎಲ್ಲಾ ಕಡೆಗಳಲ್ಲೂ ಅನುಕೂಲ ಸಿಂಧು ರಾಜಕಾರಣ ಮಾಡಲಾಗುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಭ್ರಷ್ಟಚಾರ ಮುಕ್ತ ಆಡಳಿತ ನೀಡುತ್ತೇವೆಂದು ಅದಕ್ಕೆ ವಿರುದ್ಧವಾಗಿ ಭ್ರಷ್ಟಚಾರದಲ್ಲಿ ಮುಳುಗಿವೆ. ರಾಷ್ಟ್ರೀಯ ಪಕ್ಷಗಳ ಎದುರು ವಿಭಿನ್ನವಾಗಿರುವ ಕ್ರೇಜಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭ್ರಷ್ಟ ಮುಕ್ತ ಉತ್ತಮ ಆಡಳಿತ ನೀಡುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು ಶ್ಲಾಘಿಸಿದರು.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಜನತೆಗೆ ನೀಡಿದ್ದ ಐದು ಗ್ಯಾರೆಂಟಿ ಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಯೋಜನೆ ಎಲ್ಲರಿಗೂ ತಲುಪುತ್ತಿಲ್ಲ. ರಾಜ್ಯದಲ್ಲಿ ಕನ್ನಡ ಶಾಲೆಗಳು ಬಾಗಿಲು ಮುಚ್ಚುತ್ತಿವೆ. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ಬರ ಪರಿಸ್ಥಿತಿ ರಾಜ್ಯದಲ್ಲಿ ತಾಂಡವಾಡುತ್ತಿದ್ದು ಸರ್ಕಾರ ಕ್ರಮಕೈಗೊಂಡಿಲ್ಲ ಎಂದು ದೂರಿದರು.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ವಿತರಣೆ ಮಾಡಲು ಇನ್ನೂ ಟೆಂಡರ್ ಪ್ರಕ್ರಿಯೆ ನಡೆಯದೆ ಔಷಧಿ ಕೊರತೆ ಎದುರಾಗಿದೆ. ಶಾಲೆ ಆಸ್ಪತ್ರೆಗಳ ಸ್ಥಿತಿ ಶೋಚನೀಯವಾ ಗಿದೆ. ಮನೆ ಬಾಗಿಲಿಗೆ ಯೋಜನೆಗಳು ಯೋಜನೆ ನಿಂತು ಹೋಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುಧಾನ ನೀಡಿಲ್ಲ. ಕನ್ನಡ ಪರ ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಅಧಿಕಾರಿಗಳ ನೇಮಕವಾಗಿಲ್ಲ ಎಂದು ಹೇಳಿದರು.

ರೈತರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆನೆ. ರಾಜ್ಯ ಸರ್ಕಾರ ಜನರು ದಿನನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಮುಂದಾಗದಿದ್ದರೇ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ದೊಡ್ಡಮಟ್ಟದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದ ಅವರು, ಉತ್ತಮ ಆಡಳಿತ ನೀಡುತ್ತಿರುವ ಕ್ರೇಜಿವಾಲ್ ಹಾಗೂ ಆಮ್ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷಗಳು ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಹತ್ತಿಕ್ಕುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷವನ್ನು ಸದೃಢವಾಗಿ ಕಟ್ಟಲು ಮುಂದಾಗಿರುವುದಾಗಿ ತಿಳಿಸಿದರು.

ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ನಾಗಣ್ಣ ಮಾತನಾಡಿ, ಆಮ್ ಆದ್ಮಿ ಪಕ್ಷದಿಂದ ಅರಳೀಕಟ್ಟೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗ್ರಾಮದಲ್ಲಿನ ಗ್ರಾಮ ಪಂಚಾಯತ್ ಸದಸ್ಯರು, ನಿವೃತ್ತ ಶಿಕ್ಷಕರು, ಮಹಿಳೆಯರು, ರೈತರು ಹಾಗೂ ಗ್ರಾಮೀಣ ಪ್ರದೇಶದ ಮುಖಂಡರನ್ನು ಆಹ್ವಾನಿಸಲಾಗಿದೆ. ಹಳ್ಳಿಗಳಲ್ಲಿನ ಜನರ ಸಮಸ್ಯೆಗಳನ್ನು ಖುದ್ದು ಆಲಿಸಲಾಗುವುದು ಎಂದರು.

ಅರಳೀಕಟ್ಟೆ ಸಂವಾದವನ್ನು ಉತ್ತರ ಕರ್ನಾಟಕ ೭ ಜಿಲ್ಲೆಗಳಲ್ಲಿ ಈಗಾಗಲೇ ನಡೆಸಲಾಗಿದೆ. ದಕ್ಷಿಣ ಕರ್ನಾಟಕದ ೫ ಜಿಲ್ಲೆಗಳಲ್ಲಿ ನಡೆಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿನ ವಾಸ್ತವ ಅಂಶಗಳನ್ನು ಅರಿತುಕೊಳ್ಳಲಾಗುವುದು. ಹಾಗೇ ಮುಂಬುರವ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲಾಗುವುದು ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಆಮ್ ಆದ್ಮಿ ಪಕ್ಷದ ಡಾ|ಕೆ.ಸುಂದರಗೌಡ, ಲಿಂಗರಾಧ್ಯ, ಈರೇಗೌಡ ಸೇರಿದಂತೆ ಅನೇಕರು ಇದ್ದರು.

Aam Aadmi Party blossomed from the grassroots to the organization

 

About Author

Leave a Reply

Your email address will not be published. Required fields are marked *

You may have missed