September 19, 2024

ಕೋಟೆಕೆರೆ ಅಭಿವೃದ್ಧಿಗೆ 4 ಕೋಟಿ ರೂ ಪ್ರಸ್ತಾವನೆ

0
ಮುಂಗಡ ಪತ್ರ ತಯಾರಿಸುವ ಸಲುವಾಗಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆ

ಮುಂಗಡ ಪತ್ರ ತಯಾರಿಸುವ ಸಲುವಾಗಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆ

ಚಿಕ್ಕಮಗಳೂರು: ನಗರದಲ್ಲಿ ವ?ಕ್ಕೊಂದು ಸ್ಮಶಾನ ಅಭಿವೃದ್ದಿಪಡಿಸುವಂತೆ ಹಾಗೂ ನಗರದ ಎಲ್ಲಾ ಪಾರ್ಕುಗಳ ಅಭಿವೃದ್ಧಿ ಜೊತೆಗೆ ಕೋಟೆಕೆರೆ ಅಭಿವೃದ್ಧಿಗೆ ೪ ಕೋಟಿ ರೂ ವೆಚ್ಚದ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳಿಸಿಕೊಡಲಾಗಿದೆ ಎಂದು ನಗರಸಭಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು.

ಅವರು ಇಂದು ನಗರಸಭೆ ಸಭಾಂಗಣದಲ್ಲಿ ಮುಂದಿನ ೨೦೨೪-೨೫ನೇ ಸಾಲಿನ ಮುಂಗಡ ಪತ್ರ ತಯಾರಿಸುವ ಸಲುವಾಗಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ವಿವಿಧ ಪಕ್ಷ ಮತ್ತು ಸಂಘಟನೆಗಳ ಮುಖಂಡರುಗಳ ಸಲಹೆ ಸೂಚನೆಗಳನ್ನು ಆಲಿಸಿ ಮಾತನಾಡಿದರು.

ಹಿಂದಿನ ವ?ದ ಆಯವ್ಯಯ ಮಂಡಿಸುವ ಮುಂಚಿತವಾಗಿ ಕರೆಯಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮೂಡಿಬಂದಿದಂತಹ ಸಲಹೆಗಳನ್ನು ಕಳೆದ ವ?ದ ಆಯ-ವ್ಯಯದಲ್ಲಿ ಸೇರಿಸಿ ಬಹುಪಾಲು ಕಾರ್ಯಕ್ರಮಗಳು ಮುಕ್ತಾಯದ ಹಂತದಲ್ಲಿದ್ದು ಇನ್ನೂ ಕೆಲವು ಕಾರ್ಯಕ್ರಮಗಳು ಪರಿಶೀಲನೆ ಹಂತದಲ್ಲಿವೆ ಎಂದು ತಿಳಿಸಿದರು.

ಕಳೆದ ಬಾರಿ ಮಂಡಿಸಿದ್ದ ಬೇಡಿಕೆಯಂತೆ ಕಣಿವೆ ರುದ್ರೇಶ್ವರ ದೇವಸ್ಥಾನದಿಂದ ಕತ್ರಿಮಾರಮ್ಮ ದೇವಸ್ಥಾನದವರೆಗೆ ಬೀದಿದೀಪ ಅಳವಡಿಸುವ ಸುಮಾರು ೧.೬೭ ಕೋಟಿ ರೂ ವೆಚ್ಚದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಕತ್ರಿಮಾರಮ್ಮ ದೇವಸ್ಥಾನದಿಂದ ಐ.ಜಿ ರಸ್ತೆ ಮೂಲಕ ಬೋಳರಾಮೇಶ್ವರ ದೇವಸ್ಥಾನದವರೆಗೆ ಸುಮಾರು ೫೦ ಲಕ್ಷ ರೂ ವೆಚ್ಚದಲ್ಲಿ ಹೈಮಾಸ್ಕ್ ದೀಪ ಅಳವಡಿಸುವ ಯೋಜನೆ ಕೈಗೊತ್ತಿಕೊಂಡಿದ್ದು ಜನವರಿ ೨೪ರ ಅಂತ್ಯಕ್ಕೆ ಈ ಕಾರ್ಯಕ್ರಮ ಪೂರ್ಣವಾಗಲಿದೆ ಎಂದು ಹೇಳಿದರು.

ಪ್ರತಿ ವ? ಒಂದು ಸ್ಮಶಾನ ಅಭಿವೃದ್ಧಿಪಡಿಸುವ ಯೋಜನೆಯನ್ನು ಆಯ-ವ್ಯಯದಲ್ಲಿ ಅಳವಡಿಸಿಕೊಂಡಿದ್ದು ಕಳೆದ ವ? ಹೌಸಿಂಗ್ ಬೋರ್ಡ್‌ನಲ್ಲಿರುವ ಸ್ಮಶಾನ ಅಭಿವೃದ್ಧಿಪಡಿಸಲಾಗಿತ್ತು. ಈ ವ? ಚಂದ್ರಕಟ್ಟೆಯಲ್ಲಿರುವ ಸ್ಮಶಾನ ಅಭಿವೃದ್ಧಿಪಡಿಸಲು ಉದ್ದೇಶಲಾಗಿದೆ ಎಂದರು.

ನಗರದಲ್ಲಿರುವ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಬೇಕು ಎಂಬ ಹಿಂದಿನಿಂದಲೂ ಬೇಡಿಕೆ ಇದ್ದು ಈಗಾಗಲೇ ಹಲವು ಪಾರ್ಕುಗಳನ್ನು ಅಭಿವೃದ್ಧಿಪಡಿಸಲಾಗಿದೆ ಇನ್ನು ಉಳಿದಿರುವ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಅದೇ ರೀತಿ ನಗರದ ಮಧ್ಯೆ ಇರುವ ಕೆರೆಗಳನ್ನು ಅಭಿವೃದ್ಧಿಪಡಿಸಬೇಕೆಂಬ ನಾಗರಿಕರ ಬೇಡಿಕೆ ಇದ್ದು ಕೋಟೆಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ನಾಲ್ಕು ಕೋಟಿ ರೂ ಅಂದಾಜು ವೆಚ್ಚದ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳಿಸಿಕೊಡಲಾಗಿದೆ ಎಂದರು.

ನಗರಸಭೆಯಿಂದ ಸಾರ್ವಜನಿಕರಿಗೆ ಆಗುವ ಕೆಲಸ ಕಾರ್ಯಗಳನ್ನು ಮಾಡಿಕೊಡಲಾಗುತ್ತಿದೆ ಯಾವುದೇ ಸಮಸ್ಯೆ ಅಥವಾ ಗೊಂದಲ ಇದ್ದರೆ ನೇರವಾಗಿ ತಮ್ಮನ್ನು ಭೇಟಿ ಮಾಡುವಂತೆ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಸರ್ಜನ್ ಡಾ|| ಮೋಹನ್‌ಕುಮಾರ್ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ಗಿಡಮರಗಳಿದ್ದು ಅವುಗಳಿಗೆ ರಕ್ಷಣಾ ಬೇಲಿ ನಿರ್ಮಿಸಿಕೊಡುವಂತೆ ತಿಳಿಸಿದರಲ್ಲದೆ ಮೆಡಿಕಲ್ ಕಾಲೇಜು ಹಾಗೂ ನಸಿಂಗ್ ಕಾಲೇಜ್ ಸೇರಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆ ಆವರಣದಿಂದ ಮಹಿಳಾ ಆಸ್ಪತ್ರೆಗೆ ನಿರಂತರವಾಗಿ ಹೋಗಿ ಬರುವ ಸಂದರ್ಭ ಇರುವುದರಿಂದ ಸ್ಕೈವಾಕ್ (ಮೇಲ್ಸೇತುವೆ) ನಿರ್ಮಾಣ ಮಾಡುವಂತೆ ಹಾಗೂ ಮಕ್ಕಳ ಆಸ್ಪತ್ರೆಗೆ ಒಳಚರಂಡಿ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡ ರಸೂಲ್‌ಖಾನ್ ಮತ್ತಿತರರು ಮಾತನಾಡಿ ನಗರದ ಹೊರಭಾಗದಲ್ಲಿರುವ ಬಡಾವಣೆಗಳಲ್ಲಿ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಇತರ ಇ-ಖಾತೆಯ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿದರು.

ಸಭೆಯಲ್ಲಿ ಹಲವು ಸಂಘಟನೆಗಳ ಮುಖಂಡರು ಭಾಗವಹಿಸಿದ್ದು, ನಗರದ ಅನೇಕ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಸಭೆಯಲ್ಲಿ ನಗರಸಭೆ ಪೌರಾಯುಕ್ತ ಬಿ.ಸಿ ಬಸವರಾಜ್, ಉಪಾಧ್ಯಕ್ಷ ಅಮೃತೇಶ್ ಚನ್ನಕೇಶವ ಉಪಸ್ಥಿತರಿದ್ದರು.

A preliminary meeting was called to gather public opinion

About Author

Leave a Reply

Your email address will not be published. Required fields are marked *

You may have missed