September 19, 2024

ಮುಜರಾಯಿ ಇಲಾಖೆ ನಿರ್ದೇಶನದಂತೆ ದತ್ತ ಜಯಂತಿಗೆ ಅವಕಾಶ

0
ಎಸ್ಪಿ ಡಾ. ವಿಕ್ರಮ್ ಅಮಟೆ ಹಾಗೂ ಜಿಲ್ಲಾಧಿಕಾರಿ ಮೀನಾನಾಗರಾಜ್ ಜಂಟಿ ಪತ್ರಿಕಾಗೋಷ್ಠಿ

ಎಸ್ಪಿ ಡಾ. ವಿಕ್ರಮ್ ಅಮಟೆ ಹಾಗೂ ಜಿಲ್ಲಾಧಿಕಾರಿ ಮೀನಾನಾಗರಾಜ್ ಜಂಟಿ ಪತ್ರಿಕಾಗೋಷ್ಠಿ

ಚಿಕ್ಕಮಗಳೂರು: ಇದೇ ತಿಂಗಳ ೨೪ ರಿಂದ ೨೬ರವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದ್ದು ಮುಜರಾಯಿ ಇಲಾಖೆಯ ನಿರ್ದೇಶನದಂತೆ ಹಿಂದಿನ ವ?ದಂತೆ ಈ ವ?ವೂ ಅವಕಾಶ ಕಲ್ಪಿಸಲಾಗುವುದೆಂದು ಜಿಲ್ಲಾಧಿಕಾರಿ ಮೀನಾನಾಗರಾಜ್ ತಿಳಿಸಿದರು.

ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಎಸ್ಪಿ ಡಾ. ವಿಕ್ರಮ್ ಅಮಟೆ ಹಾಗೂ ಜಿಲ್ಲಾಧಿಕಾರಿಗಳು ಕರೆದಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿ?ಯ ತಿಳಿಸಿದ್ದು, ಹಿಂದಿನ ವ?ಗಳಲ್ಲಿ ದತ್ತ ಜಯಂತಿ ನಡೆದ ಆಧಾರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವ ದೃಷ್ಠಿಯಿಂದ ಈ ಮೂರು ಆಯಾಮಗಳ ಆಧಾರದಲ್ಲಿ ಜಿಲ್ಲಾಡಳಿತ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ದತ್ತಪೀಠ ಮುಜರಾಯಿ ಸಂಸ್ಥೆ ಆಗಿರುವುದರಿಂದ ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ಮುಜರಾಯಿ ಇಲಾಖೆ ನಿರ್ದೇಶನದಂತೆ ದತ್ತಜಯಂತಿಗೆ ಅನುಮತಿ ನೀಡಿ ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಎಲ್ಲಾ ಧರ್ಮಗಳ ಮುಖಂಡರು ಹಾಗೂ ಸಂಘಟನೆಗಳ ಮುಖಂಡರೊಂದಿಗೆ ಜಿಲ್ಲಾಡಳಿತ ಚರ್ಚೆ ನಡೆಸಿದ್ದು, ಕಾನೂನು ವ್ಯವಸ್ಥೆ ಕಾಪಾಡುವ ಮೂಲಕ ಶಾಂತಿಯುತವಾಗಿ ಹಾಗೂ ವೈಭವಯುತವಾಗಿ ದತ್ತಜಯಂತಿ ಆಚರಣೆಗೆ ಸಹಕಾರ ನೀಡಲು ಎಲ್ಲರೂ ಒಪ್ಪಿಗೆ ನೀಡಿದ್ದಾರೆ ಎಂದರು.

ಡಿ.೨೪ ರಿಂದ ಆರಂಭವಾಗುವ ಅನುಸೂಯ ಜಯಂತಿ ಸಂಕೀರ್ತನಾ ಯಾತ್ರೆಗಳು ಹಾಗೂ ಈ ಮೂರು ದಿನಗಳ ಕಾಲ ಪೀಠಕ್ಕೆ ಬರುವ ಭಕ್ತರಿಗೆ ಪಾದುಕೆಗಳ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಮುಜರಾಯಿ ಇಲಾಖೆ ನಿರ್ದೇಶನದಂತೆ ಹಿಂದಿನ ೨೦೨೨ನೇ ಸಾಲಿನಲ್ಲಿ ನಡೆದ ಕಾರ್ಯಕ್ರಮದಂತೆ ಕೊನೆಯ ದಿನ ಗುಹೆಯ ಮುಂಭಾಗದಲ್ಲಿ ಹೋಮ, ಹವನ ನಡೆಸಲು ಅವಕಾಶ ಕಲ್ಪಿಸಲಾಗುವುದೆಂದು ಹೇಳಿದರು.

ದತ್ತ ಜಯಂತಿ ಸಂದರ್ಭದಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಕಾನೂನು ಪಾಲನೆ ದೃಷ್ಠಿಯಿಂದ ಮತ್ತು ಕ್ರಿಸ್‌ಮಸ್ ಪ್ರಯುಕ್ತ ರಜಾ ದಿನಗಳು ಹೆಚ್ಚು ಇರುವುದರಿಂದ ಜನಸಂದಣಿ ತಡೆಯುವ ಉದ್ದೇಶದಿಂದ ಒಂದು ವಾರಗಳ ಕಾಲ ಪ್ರವಾಸಿಗರ ಪ್ರವೇಶವನ್ನು ನಿಬಂಧಿಸಲಾಗಿದೆ ಎಂದು ತಿಳಿಸಿದರು.
ಕಟ್ಟುನಿಟ್ಟಿನ ಕ್ರಮ

ದತ್ತ ಜಯಂತಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಡಿ.೧೭ ರಿಂದ ೨೭ರವರೆಗೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆಯವರು ಸೇರಿದಂತೆ ಯಾರೇ ಆದರೂ ಕಾನೂನು ಕೈಗೆತ್ತಿಕೊಂಡರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಸ್ಪಿ ಡಾ|| ವಿಕ್ರಮ್ ಅಮಟೆ ತಿಳಿಸಿದರು.

ಜಿಲ್ಲೆಯ ಗಡಿಭಾಗ ಸೇರಿದಂತೆ ಅಗತ್ಯವಿರುವ ೨೭ ಸ್ಥಳಗಳಲ್ಲಿ ಚೆಕ್‌ಪೋಸ್ಟ್ ನಿರ್ಮಿಸಲಾಗಿದೆ. ನಗರದಿಂದ ದತ್ತಪೀಠದವರೆಗೂ ಬೃಹತ್ ಪ್ರಮಾಣದ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿ?ಧಿಸಲಾಗಿದೆ. ಹಿಂದಿನ ವ?ಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಿ.ಸಿ ಟಿವಿಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.

ಡಿ.೧೭ ರಿಂದ ಜಿಲ್ಲೆಯ ಬೇರೆ ಬೇರೆ ಸ್ಥಳಗಳಲ್ಲಿ ಸಂಕೀರ್ತನೆ ಯಾತ್ರೆಗಳು ನಡೆಯಲಿವೆ. ನಗರದಲ್ಲಿ ೨೪ ರಂದು ಸಂಕೀರ್ತನೆ ಯಾತ್ರೆ ಹಾಗೂ ಡಿ.೨೫ ರಂದು ಶೋಭಾಯಾತ್ರೆ ನಡೆಯಲಿದ್ದು ಈ ಎಲ್ಲಾ ಕಾರ್ಯಕ್ರಮಗಳಿಗೆ ಅಗತ್ಯ ಇರುವ? ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳಲಾಗಿದೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬ್ಯಾನರ್ ಬಂಟಿಂಗ್ಸ್‌ಗಳನ್ನು ಕಟೌಟ್‌ಗಳನ್ನು ಹಾಕಲು ಕಡ್ಡಾಯವಾಗಿ ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯುವ ಜೊತೆಗೆ ಪೊಲೀಸ್ ಇಲಾಖೆಯ ಸಮಕ್ಷಮದಲ್ಲಿ ಬಂಟಿಂಗ್ಸ್, ಬ್ಯಾನರ್‌ಗಳು ಹಾಗೂ ಕಟೌಟ್‌ಗಳನ್ನು ಹಾಕುವಂತೆ ಸಂಘಟಕರಿಗೆ ಸೂಚಿಸಲಾಗಿದೆ ಎಂದರು.

ಈಗಾಗಲೇ ಎಲ್ಲ ಧರ್ಮಗಳ ಮುಖಂಡರೊಂದಿಗೆ ಚರ್ಚೆ ನಡೆಸಿದ್ದು, ಎಲ್ಲರೂ ಕೂಡ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ. ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಶಾಂತಿ ಕಾಪಾಡಲು ಸಹಕರಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಉಪಸ್ಥಿತರಿದ್ದರು.

SP Dr. Vikram Amate and District Collector Meenanagaraj joint press conference

About Author

Leave a Reply

Your email address will not be published. Required fields are marked *

You may have missed