September 19, 2024

ಜಿಲ್ಲೆಯಲ್ಲಿ ಈ ವರ್ಷ 256 ಡೆಂಗ್ಯೂ ಪ್ರಕರಣಗಳು ಪತ್ತೆ 

0
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್ ಬಾಬು

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್ ಬಾಬು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ವರ್ಷ ೨೪೬ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ನಿಯಂತ್ರಣಕ್ಕೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್ ಬಾಬು ತಿಳಿಸಿದರು.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಡೆಂಗ್ಯೂ ಜ್ವರದಿಂದ ಈ ವೆರೆಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಡೆಂಗ್ಯೂ ಹೆಚ್ಚಾಗುವ ಕಡೆಗಳಲ್ಲಿ ಜಿಲ್ಲಾದ್ಯಂತ ಸರ್ವೇಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ನಿರ್ಧಿಷ್ಟ ಪ್ರದೇಶದಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಅಲ್ಲಿಯೇ ಫೀವರ್ ಕ್ಲಿನಿಕ್‌ಗಳನ್ನು ಆರಂಭಿಸಿ ವೈದ್ಯಾಧಿಕಾರಿಗಳಿಂದ ಚಿಕಿತ್ಸೆ ಆರಂಭಿಸಲಾಗುವುದು ಎಂದು ತಿಳಿಸಿದರು.

ಡೆಂಗ್ಯು ಹೆಚ್ಚಾಗಲು ಕಾರಣ ಕಂಡುಕೊಂಡು, ಲಾರ್ವಾಗಳ ಸಮೀಕ್ಷೆ ಮಾಡಿ, ನೀರು ಸಂಗ್ರಹವಾಗದಂತೆ ಮುಂಜಾಗ್ರತೆ ವಹಿಸಲಾಗುತ್ತಿದೆ. ಈ ವರೆಗೆ ಡೆಂಗ್ಯು ಪ್ರಕರಣಗಳು ನಿಯಂತ್ರಣದಲ್ಲಿದೆ ಎಂದರು.

ಜಿಲ್ಲೆಯಲ್ಲಿ ಈ ವರ್ಷ ಈವರೆಗೆ ೩೯೯೩ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ೨೪೩ ಮಾತ್ರ ಡೆಂಗ್ಯು ಎಂದು ದೃಢಪಟ್ಟಿದೆ. ಚಳಿಗಾಲವಾದ ಕಾರಣ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ವೈರಲ್ ಜ್ವರದ ಪ್ರಕರಣ ದಾಖಲಾಗುತ್ತಿರುವುದು ಬರುತ್ತಿದೆ ಎಂದು ತಿಳಿಸಿದರು.

ಕಡೂರು ಮತ್ತು ಚಿಕ್ಕಮಗಳೂರು ತಾಲ್ಲೂಕಿನ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿ ನೊಂದಣಿ ಆಗದಿರುವ ಹಾಗೂ ಸೂಕ್ತ ಪರವಾನಗಿ ಇಲ್ಲದ ಕ್ಲಿನಿಕ್‌ಗಳನ್ನು ಮುಚ್ಚಿಸಲಾಗಿದೆ ಎಂದು ತಿಲಿಸಿದರು.

ವಿದ್ಯಾರ್ಹತೆ ಇಲ್ಲದೆ ಆರೋಗ್ಯ ಚಿಕಿತ್ಸೆ ಕೊಡುತ್ತಿರುವ ಪ್ರಕರಣಗಳಿದ್ದಲ್ಲಿ ಅಂತಹವರ ವಿರುದ್ಧವೂ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ತಕ್ಷಣ ಅವರ ಕ್ಲಿನಿಕ್ ಮುಚ್ಚದಿದ್ದಲ್ಲಿ ಅವರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಮೆಡಿಕಲ್ ಸ್ಟೋರ್‌ಗಳಲ್ಲೂ ವೈದ್ಯರ ಚೀಟಿ ಇಲ್ಲದೆ ಮಾತ್ರೆ ಔಷಧಿಗಳನ್ನು ಕೊಟ್ಟು ಕಳಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಅದು ತಪ್ಪು ಎನ್ನುವುದು ಅವರಿಗೆ ಮನವರಿಕೆ ಮಾಡಿದ್ದೇವೆ. ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಸಹಾಯಕ ಡ್ರಗ್ ಕಂಟ್ರೋಲರ್ ವ್ಯಾಪ್ತಿಗೆ ಬರುತ್ತದೆ. ಅವರೊಂದಿಗೆ ಸಂಪರ್ಕದಲ್ಲಿದ್ದು ನೂನ್ಯತೆಗಳ ಬಗ್ಗೆ ಗಮನ ಸೆಳೆದು ಕ್ರಮ ಕೈಗೊಳ್ಳುತ್ತೇವೆ ಎಂದರು.

ಮೆಡಿಕಲ್ ಸ್ಟೋರ್‌ನವರು ನೊಂದಣಿ ಇಲ್ಲದೆ ವೈದ್ಯರಿಗೆ ಕ್ಲಿನಿಕ್ ತೆರೆದು ಕೊಟ್ಟಿದ್ದರೆ ಅದನ್ನು ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳಲಾಗುವುದು. ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಹೊಸದಾಗಿ ಕ್ಲಿನಿಕ್ ತೆರೆಯುವವರು ಕೆಪಿಎಂಇ ಅನುಮತಿ ಕಡ್ಡಾಯವಾಗಿರುತ್ತದೆ. ಹಾಲಿ ಇರುವ ಕ್ಲಿನಿಕ್‌ಗಳು ೫ ವರ್ಷಕ್ಕೊಮ್ಮೆ ಪರವಾನಗಿ ನವೀಕರಿಸಿಕೊಳ್ಳುವುದು ಕಡ್ಡಾಯ ಎಂದರು

256 dengue cases have been detected in the district this year

About Author

Leave a Reply

Your email address will not be published. Required fields are marked *

You may have missed