September 19, 2024

ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಪ್ರತಿಯೊಬ್ಬ ನಾಗರಿಕರೂ ಮಾಡಬೇಕು

0
A one day training workshop on Child Care Child Marriage Act POCSO Act

A one day training workshop on Child Care Child Marriage Act POCSO Act

ಚಿಕ್ಕಮಗಳೂರು:  ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಪ್ರತಿಯೊಬ್ಬ ನಾಗರಿಕರೂ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಶ್ರೀಮತಿ ಮಂಜು ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಕ್ಕಳ ಪಾಲನೆ ಪೋಷಣೆ ಬಾಲ್ಯ ವಿವಾಹ ಕಾಯ್ದೆ ಪೋಕ್ಸೋ ಕಾಯ್ದೆ ಕುರಿತ ಒಂದು ದಿನದ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವುದು ಅವುಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಹಾಗಾಗಿ ನಾವು ಅವುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ. ಅವುಗಳನ್ನು ನಾವು ತಡೆಗಟ್ಟಬೇಕಾದರೆ ನಾವು ಮಕ್ಕಳ ರಕ್ಷಣೆಗಿರುವ ಕಾನೂನು ಮತ್ತು ಕಾಯ್ದೆಗಳನ್ನು ಅರಿಯಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡು ತರಬೇತಿ ಪಡೆಯಬೇಕು ಜಿಲ್ಲೆಯಲ್ಲಿ ನಡೆಯುತ್ತಿರುವ ಮಕ್ಕಳ ಹಕ್ಕುಗಳ ಉಲ್ಲಂಘನೆ ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಶೋಷಣೆಗಳನ್ನು ತಡೆಗಟ್ಟಬೇಕು ಎಂದು ಮನವಿ ಮಾಡಿದರು.
ಕಾರ್ಯಗಾರದಲ್ಲಿ ಮಕ್ಕಳ ಹಕ್ಕುಗಳ ಸಮಿತಿ ಸದಸ್ಯ ನಟರಾಜ್, ಜಿ.ಪಂ.ನ ಮುಖ್ಯ ಯೋಜನಾಧಿಕಾರಿ ಕರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸೋಮಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ ಮುಂತಾದವರಿದ್ದರು.

A one day training workshop on Child Care Child Marriage Act POCSO Act

About Author

Leave a Reply

Your email address will not be published. Required fields are marked *

You may have missed