September 19, 2024

ದತ್ತಜಯಂತಿ: ಜಿಲ್ಲಾದ್ಯಂತ ಬೀಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ

0
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಸುದ್ದಿಗೋಷ್ಠಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಸುದ್ದಿಗೋಷ್ಠಿ

ಚಿಕ್ಕಮಗಳೂರು: ದತ್ತಜಯಂತಿ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಬೀಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ತಿಳಿಸಿದರು.

ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಡಿ.೧೭ರಂದು ದತ್ತಭಕ್ತರು ದತ್ತಮಾಲಾಧಾರಣೆ ಮಾಡಿದ್ದು, ಡಿ.೨೪ ರಿಂದ ೨೬ರ ವರೆಗೆ ದತ್ತಜಯಂತಿ ನಡೆಯಲಿದೆ. ಡಿ.೨೪ರಂದು ಸಂಕೀರ್ತನ ಯಾತ್ರೆ, ಡಿ.೨೫ರಂದು ಶೋಭಾಯಾತ್ರೆ ಹಾಗೂ ಡಿ.೨೬ರಂದು ದತ್ತಪೀಠದಲ್ಲಿ ದತ್ತಭಕ್ತರು ದತ್ತಪಾದುಕೆ ದರ್ಶನ ಪಡೆದುಕೊಳ್ಳಲಿ ದ್ದಾರೆ. ದತ್ತಜಯಂತಿ ಕಾರ್ಯಕ್ರಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗ ದರ್ಶನದಲ್ಲಿ ಬೀಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾಡಳಿತ ಸಂಘಟಕರೊಂದಿಗೆ ಸಭೆಗಳನ್ನು ನಡೆಸಿದ್ದು, ಹಿಂದಿನ ವರ್ಷದಂತೆ ಈ ವರ್ಷದ ದತ್ತಜಯಂತಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ನೀಡಲಿದೆ ಆ ನಿಟ್ಟಿನಲ್ಲಿ ತಯಾರಿ ನಡೆಸಲಾಗುತ್ತಿದೆ. ಅದರಂತೆ ಜಿಲ್ಲಾ ಪೊಲೀಸ್ ಇಲಾಖೆಯೂ ಸಂಘಟಕರೊಂದಿಗೆ ಸಭೆಗಳನ್ನು ನಡೆಸಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.

ಡಿ.೨೪ ಮತ್ತು ೨೫ರಂದು ಕ್ರಿಸ್‌ಮಸ್ ಹಬ್ಬವಿರುವ ಹಿನ್ನಲೆಯಲ್ಲಿ ಕ್ರೈಸ್ತ ಸಮುದಾಯದ ಮುಖಂಡರು ಮತ್ತು ಫಾದರ್ ಅವರ ಜೊತೆ ಸಭೆ ನಡೆಸಲಾಗಿದೆ. ಕ್ರಿಸ್‌ಮಸ್ ಹಬ್ಬದ ಆಚರಣೆಗೆ ಪೊಲೀಸ್ ಇಲಾಖೆಯಿಂದ ಅಗತ್ಯ ಭದ್ರತೆಯನ್ನು ನೀಡಲಾಗುವುದು ಎಂದ ಅವರು, ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ಮಾಡಲಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿ ನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ತಿಳಿಸಿದರು.

ದತ್ತಜಯಂತಿ ಬಂದೋಬಸ್ತ್ ಸಂಬಂಧ ಇಲಾಖೆಯಿಂದ ಎಲ್ಲಾ ತಯಾರಿಗಳನ್ನು ನಡೆಸಲಾಗುತ್ತಿದೆ. ಈ ಹಿಂದಿನ ಘಟನೆಗಳಲ್ಲಿ ಭಾಗಿಯಾದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ತಿಳುವಳಿಕೆ ನೀಡಲಾಗಿದೆ. ಜಿಲ್ಲೆಯ ಗಡಿ ಪ್ರದೇಶ ಸೇರಿದಂತೆ ಜಿಲ್ಲಾ ದ್ಯಂತ ೨೮ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಸಿಸಿಟಿವಿ ಕ್ಯಾಮರಾ, ಸ್ಥಳೀಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪ್ರತಿ ವಾಹನವನ್ನು ತಪಾಸಣೆ ನಡೆಸುವರು ಎಂದು ಹೇಳಿದರು.

ಕಂದಾಯ ಇಲಾಖೆಯಿಂದ ೩೬ ಜನ ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅವರು ದತ್ತಪೀಠ ಸೇರಿದಂತೆ ಚೆಕ್ ಪೋಸ್ಟ್ ಹಾಗೂ ಸೂಕ್ಷ್ಮಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದ ಅವರು, ಬಂದೋಬಸ್ತ್‌ಗೆ ವಿಶೇಷ ಆದ್ಯತೆಯನ್ನು ನೀಡಿದ್ದು, ದತ್ತಪೀಠ ಮತ್ತು ನಗರದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಪ್ರತ್ಯೇಕವಾಗಿ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾ ಗಿದೆ ಎಂದು ತಿಳಿಸಿದರು.

೪೫ವರ್ಷದೊಳಗಿನ ಪೊಲೀಸ್ ಸಿಬ್ಬಂದಿಗಳನ್ನು ದತ್ತಪೀಠದಲ್ಲಿ ನಿಯೋಜನೆ ಮಾಡಲಾಗಿದೆ. ಎರಡು ಮೆಡಿಕಲ್ ತಂಡ ಕಾರ್ಯ ನಿರ್ವಹಿಸಲಿದ್ದು, ಪೊಲೀಸ್ ಸಿಬ್ಬಂದಿಗಳ ಆಯೋಗ್ಯ ತಪಾಸಣೆ ನಡೆಸಲಿದೆ. ರಾಜ್ಯ ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಪೊಲೀಸ್ ಸಿಬ್ಬಂದಿಗಳಿಗೆ ಅಗತ್ಯವಾದ ಮಾಸ್ಕ್, ಸ್ಯಾನಿಟೈಸರ್ ನೀಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ ಎಂದರು.

ಪ್ರತೀ ತಾಲೂಕು ಮಟ್ಟದಲ್ಲಿಯೂ ಬೀಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ. ಜಿಲ್ಲಾದ್ಯಂತ ಬಂದೋಬಸ್ತ್‌ಗೆ ನಾಲ್ಕು ಸಾವಿರ ಪೊಲೀಸ್ ಸಿಬ್ಬಂದಿ, ಎಸ್.ಪಿ., ೭ ಜನ ಎಎಸ್‌ಪಿ, ೩೦ ಜನ ಡಿವೈಎಸ್‌ಪಿ, ೬೫ಜನ ಇನ್ಸ್‌ಪೇಕ್ಟರ್, ಸೇರಿದಂತೆ ಹೋಮ್ ಗಾರ್ಡ್, ೨೦ ಕೆಎಸ್‌ಆರ್‌ಪಿ ತುಕಡಿ, ೨೨ ಡಿಆರ್ ತುಕಡಿಯನ್ನು ಬಂದೋಬಸ್ತ್‌ಗೆ ನಿಯೋಜನೆ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಪೊಲೀಸ್ ಅಧಿಕಾರಿಗಳನ್ನು ಬಂದೋಬಸ್ತ್ ಕಾರ್ಯನಿರ್ವಹಿಸಲಿದ್ದಾರೆ. ಜೊತೆಗೆ ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಮಾಡಿದ್ದು, ಪೊಲೀಸ್ ಸಿಬ್ಬಂದಿಗಳಿಗೆ ವಿಶೇಷ ಕಾಳಜಿ ವಹಿಸ ಲಾಗಿದೆ ಎಂದರು.

Datta Jayanti: Deployment of Beigi Police Bandobast across the district

About Author

Leave a Reply

Your email address will not be published. Required fields are marked *

You may have missed